ಬ್ರೇಕಿಂಗ್ ನ್ಯೂಸ್
            
                        29-09-21 05:31 pm Headline Karnataka News Network ಕರ್ನಾಟಕ
            ಬೆಂಗಳೂರು, ಸೆ.29: ಆರೆಸ್ಸೆಸ್, ತಾಲಿಬಾನ್ ಇದ್ದಂತೆ, ಬಿಜೆಪಿ ಪಾಲಿಗೆ ಕಾರ್ಖಾನೆ ಇದ್ದಂತೆ ಎಂದು ಮೂದಲಿಸಿದ್ದ ಆರೆಸ್ಸೆಸ್, ತಾಲಿಬಾನ್ ಇದ್ದಂತೆ, ಬಿಜೆಪಿ ಪಾಲಿಗೆ ಕಾರ್ಖಾನೆ ಇದ್ದಂತೆ ಎಂದು ಮೂದಲಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯನವರೇ, ನಿಮ್ಮ ಪಕ್ಷದ ಆಡಳಿತ ಇರುವಾಗಲೇ ಅಲ್ಲವೇ, ತಾಲಿಬಾನಿಗಳನ್ನು, ಐಎಸ್‌ಐ ಉಗ್ರರನ್ನು ಭಾರತದೊಳಕ್ಕೆ ನುಸುಳಲು ಬಿಟ್ಟು ಮುಂಬೈ ಹಾಗು ಇನ್ನಿತರ ಭಾಗಗಳಲ್ಲಿ ಉಗ್ರರ ದಾಳಿಯಾಗುವಂತೆ ಮಾಡಿದ್ದು? ನೂರಾರು ಮುಗ್ದರ ಸಾವಿನ ಭಾರ ನಿಮ್ಮ ಪಕ್ಷದ ಮೇಲಿರುವುದನ್ನು ಮರೆತುಬಿಟ್ಟರಾ ಸಿದ್ದರಾಮಯ್ಯನವರೇ? ಎಂದು ಪ್ರಶ್ನೆ ಮಾಡಿದ್ದಾರೆ.
ನಿಮ್ಮ ಪಕ್ಷದಲ್ಲೇ ಕೇಂದ್ರದಲ್ಲಿ ವಿತ್ತ ಸಚಿವರಾಗಿ, 40 ವರ್ಷ ರಾಜಕೀಯ ಜೀವನದಲ್ಲಿ ಇದ್ದು 13ನೇ ರಾಷ್ಟ್ರಪತಿಯಾಗಿ ನಿಧನರಾದ ಪ್ರಣವ್ ಮುಖರ್ಜಿ ಅವರ ಜೀವನ ಚರಿತ್ರೆಯನ್ನು ಒಮ್ಮೆ ಓದಿ. ಆರ್.ಎಸ್.ಎಸ್. ಅಂದರೇನು ಎಂಬುದನ್ನು ಅವರು ವಿವರಿಸಿದ್ದಾರೆ. ಆಗಲಾದರೂ ಆರ್.ಎಸ್.ಎಸ್. ಬಗ್ಗೆ ನಿಮ್ಮ ಧೋರಣೆ ಬದಲಾಗಬಹುದು ಎಂದು ಚುಚ್ಚಿದ್ದಾರೆ.

ಯುದ್ಧ, ಪ್ರವಾಹಗಳು ಈ ದೇಶದ ಯಾವುದೇ ಮೂಲೆಯಲ್ಲಿ ಘಟಿಸಿದಾಗ ಅಲ್ಲಿ ಆರ್.ಎಸ್.ಎಸ್. ಕಾರ್ಯಕರ್ತರು ಮೊದಲು ಹಾಜರಾಗಿ ಸಂಕಷ್ಟದಲ್ಲಿರುವ ಜನರಿಗೆ ನೆರವು ನೀಡುತ್ತಾರೆ. ಸ್ವಯಂಸೇವಕರು ತಮ್ಮ ಪ್ರಾಣವನ್ನು ಪಣವಾಗಿಟ್ಟು ರಕ್ಷಣೆ ಮಾಡುತ್ತಾರೆ. ಸಂಘದ ನಿಸ್ವಾರ್ಥ ಸೇವೆಯನ್ನು ತಾಲಿಬಾನಿಗೆ ಹೋಲಿಸಲು ನಿಮಗೆ ಮನಸ್ಸಾದರೂ ಹೇಗೆ ಬಂತು? ಎಂದು ಪ್ರಶ್ನಿಸಿದ್ದಾರೆ.
ಆರ್.ಎಸ್.ಎಸ್. ಕಾರ್ಯಕರ್ತರು ಮಾಡಿರುವ ನಿಸ್ವಾರ್ಥ ಸೇವೆ ನಿಮ್ಮ ಕಣ್ಣಿಗೆ ಕಂಡಿರಲಿಕ್ಕಿಲ್ಲ. ಅಸ್ಸಾಂನ ಗುಡ್ಡಗಾಡು ಪ್ರದೇಶದ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸೇವೆ, ಈಗಿನ ಕೋವಿಡ್ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿದ್ದಾಗ ಸೇವಕರು ತಮ್ಮ ಮನೆಯಲ್ಲಿದ್ದ ಅಕ್ಕಿ-ಬೇಳೆ ಮತ್ತಿತರ ಪಡಿತರಗಳನ್ನು ನಿರ್ಗತಿಕರಿಗೆ ಹಂಚುವ ಉದಾರತೆಯನ್ನು ಮೆರೆದರು. ಈ ದೇಶ ಜಾತ್ಯಾತೀತ ತತ್ವಗಳ ಮೇಲೆ ನಿಂತಿದೆ, ಸಂಘ ಯಾರನ್ನೂ ಗುತ್ತಿಗೆ ಪಡೆದಿಲ್ಲ. ನಿಮ್ಮ ಪಕ್ಷದ ಉಳಿವಿಗೆ ಮಾನ್ಯ ಪದ್ಧತಿಯನ್ನು ನೀವು ತೋರಿಸಿಕೊಟ್ಟಿದ್ದೀರಿ. ದೇಶ ಸೇವೆ ಮಾಡಬೇಕೆಂದರೆ ರಾಜಕೀಯಕ್ಕೆ ಬರಬೇಕೆಂದಿಲ್ಲ ಸಿದ್ದರಾಮಯ್ಯನವರೇ. ಬಲಹೀನರಿಗೆ ಬೆಳಕಾಗಲು ಸಂಘ ಕೊಟ್ಟ ಕೊಡುಗೆಗಳನ್ನು ನಾವು ತಿಳಿಸುತ್ತೇವೆ, ಒಮ್ಮೆ ಸಂಘದ ಶಾಖೆಗೆ ಬನ್ನಿ ಎಂದು ಟ್ವೀಟ್ ಮೂಲಕ ಚಾಟಿ ಬೀಸಿದ್ದಾರೆ.
ಬಿಜೆಪಿ ಮತ್ತು ಆರ್.ಎಸ್.ಎಸ್.ಗೂ ಏನು ಸಂಬಂಧ ಎಂದು ಕೇಳಿದ್ದೀರಲ್ಲವೇ ? ತಾಯಿ ಮತ್ತು ಮಕ್ಕಳ ಸಂಬಂಧ. ಅದು ಕಾರ್ಖಾನೆಯಲ್ಲ. ದೇಶವನ್ನು ಸಂಘಟಿಸಲು ಮತ್ತು ಗಟ್ಟಿಯಾಗಿ ಭಾರತವನ್ನು ಕಟ್ಟಲು ಕಾರ್ಯಕರ್ತರನ್ನು ರೂಪಿಸುವ ಶಿಸ್ತುಬದ್ಧ ಗರಡಿ ಮನೆ. ನೀವು ಹತ್ತಿರಕ್ಕೆ ಬರದೇ ಸಂಘವನ್ನು ನೋಡುವುದು ʼಅಂಧ ಆನೆಯನ್ನು ಮುಟ್ಟಿ ವರ್ಣಿಸಿದಂತಾಗುತ್ತದೆʼ. ಹೀಗಾಗಿ ನೀವು ಸಂಘದ ಶಾಖೆಗೆ ಬನ್ನಿ. ಸಂಘದ ಬಾಗಿಲು ನಿಮಗಾಗಿ ಸದಾ ತೆರೆದಿರುತ್ತದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನವರೇ, ಆರ್ಎಸ್ಎಸ್ ಅಂದರೇನು ಎಂಬುದು ನಿಮ್ಮ ಘನ ಹೃದಯಕ್ಕೆ ಅರ್ಥವಾಗಬೇಕಾದರೆ ಮೊದಲು ನೀವು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗೆ ಬರಬೇಕು.
— C T Ravi 🇮🇳 ಸಿ ಟಿ ರವಿ (@CTRavi_BJP) September 29, 2021
ಆರ್ಎಸ್ಎಸ್ ಎಂಬುದನ್ನು ಹೊರಗಿನಿಂದ ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಏಕೆಂದರೆ ಅದು ಕೊಡುವ ಶಿಕ್ಷಣ, ಪ್ರೇರಣೆಯನ್ನು ಹತ್ತಿರದಿಂದ ನೋಡಿದಾಗ ನಿಮಗೆ ಅರ್ಥವಾಗಬಹುದು.
1/1 https://t.co/gI2YkLQHV0
ಇತ್ತೀಚೆಗೆ ಯಾಕೋ ನಿಮ್ಮ ನಾಲಗೆಯ ಮೇಲೆ ತಾಲಿಬಾನಿ ಪದ ಹೆಚ್ಚು ಬಳಕೆಯಾಗುತ್ತಿದೆ.
— C T Ravi 🇮🇳 ಸಿ ಟಿ ರವಿ (@CTRavi_BJP) September 29, 2021
ನೀವೇನಾದರೂ ಅಲ್ಲಿಗೆ ಹೋಗುವ ಮನಸ್ಸು ಮಾಡಿದ್ದರೆ ಹೇಳಿ ಬಿಡಿ. ನಿಮ್ಮ ಮನೆಗೆ ನಾವು ಬಂದು ಅಲ್ಲಿಯ ಬಿಕ್ಕಟ್ಟು ಸಂಘದ ಸ್ವಾತಂತ್ರ್ಯದ ಬಗ್ಗೆ ಎಳೆ ಎಳೆಯಾಗಿ ವಿವರಿಸುತ್ತೇವೆ.
ಏನಂತೀರಿ ಟಿಪ್ಪು ಸುಲ್ತಾನ್ ಆರಾಧಕ ಸಿದ್ದರಾಮಯ್ಯನವರೇ?
ಕಣ್ಣಿಗೆ ಪೊರೆ ಬಂದರೆ ಕ್ಯಾಟರಾಕ್ಟ್ ಮಾಡಿಸಬಹುದು. ಕತ್ತಲಲ್ಲಿ ಕಾರು ಚಲಾಯಿಸಿದವರು ಯಾರು ಎಂಬ ಸತ್ಯ ಗೊತ್ತಿದ್ದೂ, ಸುಳ್ಳನ್ನೇ ಮನೆದೇವರು ಮಾಡಿಕೊಂಡಿರುವ ನಿಮ್ಮ ಮೆದುಳಿನ ಪೊರೆಗೆ ಮದ್ದೆಲ್ಲಿ ಸಿದ್ದರಾಮಯ್ಯನವರೆ? https://t.co/j3Z5gI1gnc
— C T Ravi 🇮🇳 ಸಿ ಟಿ ರವಿ (@CTRavi_BJP) September 29, 2021
            
            
            Karnataka BJP leader CT Ravi hit back at former CM Siddaramaiah over his remarks on BJP-RSS and said if there was a Taliban rule in India, the Congress leader and other opposition members would hang from cranes. The BJP leader said, “It is said that once you get old, your eyesight diminishes. Don't know how bad it is for Siddaramaiah. That is why he sees Taliban and RSS as one.”
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm