ಬ್ರೇಕಿಂಗ್ ನ್ಯೂಸ್
09-10-21 04:43 pm Headline Karnataka News Network ಕರ್ನಾಟಕ
ಬೆಂಗಳೂರು, ಅ. 09: ರಾಜ್ಯದಲ್ಲಿ ಅಕ್ಟೋಬರ್ 13ರವರೆಗೂ ಮಳೆ ಮುಂದುವರೆಯಲಿದ್ದು, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಐದು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಅ.9ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೆ ಮಳೆ ಆರಂಭವಾಗಿದ್ದು, ಕೆಲ ಪ್ರದೇಶಗಳಲ್ಲಿ ಜಿಟಿಜಿಟಿ ಮಳೆ ಇದ್ದರೆ, ಇನ್ನು ಕೆಲವೆಡೆ ಹೆಚ್ಚಿನ ಮಳೆಯಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಳೆಗಾಲದ ನಿರ್ವಹಣೆಗಾಗಿ 63 ಉಪವಿಭಾಗಗಳಲ್ಲಿ ತಾತ್ಕಾಲಿಕ ನಿಯಂತ್ರಣ ಕೊಠಡಿಯನ್ನು ಆರಂಭಿಸಿದೆ. ಅಕ್ಟೋಬರ್ ಅಂತ್ಯದವರೆಗೂ ಈ ನಿಯಂತ್ರಣ ಕೊಠಡಿಗಳು ಕಾರ್ಯ ನಿರ್ವಹಿಸಲಿವೆ ಎಂದು ಬಿಬಿಎಂಪಿ ತಿಳಿಸಿದೆ.
Rain is expected to continue in the state until October 13. Yellow Alert is announced for 19 districts.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm