ಬ್ರೇಕಿಂಗ್ ನ್ಯೂಸ್
18-10-21 05:32 pm Bengaluru Correspondent ಕರ್ನಾಟಕ
ಬೆಂಗಳೂರು, ಅ.18: ಕೊರೊನಾ ಭೀತಿಯ ಎರಡು ವರ್ಷದ ಬಳಿಕ ಅಂತೂ ಪುಟಾಣಿ ಮಕ್ಕಳ ಶಾಲೆ ಆರಂಭಕ್ಕೆ ಮುಹೂರ್ತ ರೆಡಿಯಾಗಿದೆ. ಇದೇ ಅಕ್ಟೋಬರ್ 25 ರಿಂದ ಒಂದರಿಂದ ಐದನೇ ತರಗತಿ ವರೆಗೆ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭಿಸಲು ಸರ್ಕಾರ ಅಧಿಕೃತ ಅನುಮತಿ ನೀಡಿದೆ.
2020 ರಲ್ಲಿ ಪ್ರಾಥಮಿಕ ಶಾಲೆ ಪೂರ್ತಿಯಾಗಿ ಬಂದ್ ಆಗಿತ್ತು. ಈ ಬಾರಿ ಮಾರ್ಚ್ ನಲ್ಲಿ ಮತ್ತೆ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಮತ್ತೆ ಶಾಲೆ ರದ್ದು ಆಗಿತ್ತು. ಹೀಗಾಗಿ ಒಂದೂವರೆ ವರ್ಷದ ಬಳಿಕ ಪೂರ್ತಿ ಬಂದ್ ಆಗಿದ್ದ ಪ್ರಾಥಮಿಕ ಶಾಲೆಯನ್ನು ಇದೀಗ ತೆರೆಯಲಾಗುತ್ತಿದೆ. 1 ರಿಂದ 5ನೇ ತರಗತಿ ಶಾಲೆ ನಡೆಸಲು ರಾಜ್ಯ ಸರ್ಕಾರ ಇಂದು ತಜ್ಞರ ಜೊತೆಗಿನ ಸಭೆಯ ಬಳಿಕ ಅನುಮತಿ ನೀಡಿದೆ.
ಆದರೆ, ಶಾಲೆಗೆ ಮಕ್ಕಳನ್ನು ಕಳಿಸಿಕೊಡುವ ನಿರ್ಧಾರ ಪೋಷಕರುಗೆ ಬಿಡಲಾಗಿದೆ. ಯಾವುದೇ ಶಾಲೆಯಲ್ಲಿ ಮಕ್ಕಳ ಹಾಜರಾತಿಗೆ ಕಡ್ಡಾಯ ಮಾಡುವಂತಿಲ್ಲ. ಅಲ್ಲದೆ, ತರಗತಿಯಲ್ಲಿ ಶೇಕಡ 50 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ತರಗತಿಯಲ್ಲಿ 1 ಮೀಟರ್ ಅಂತರದಲ್ಲಿ ಕೂರಬೇಕು. ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡಬೇಕು.
ಪ್ರವೇಶ ದ್ವಾರಗಳಲ್ಲಿ ಸೇರದಂತೆ ಶಾಲೆಯ ಒಳಗೆ, ಆವರಣದಲ್ಲಿ, ತರಗತಿಗಳ ಒಳಗೆ ಗುಂಪು ಕೂಡುವಂತಿಲ್ಲ. ಶಿಕ್ಷಕರು ಮತ್ತು ಸಿಬಂದಿ ಕೊರೊನಾ ಲಸಿಕೆಯ ಎರಡು ಡೋಸನ್ನೂ ಪಡೆದಿರಬೇಕು. ಎರಡು ಡೋಸ್ ಪೂರ್ಣ ಮಾಡಿರುವ ಶಿಕ್ಷಕರು, ಸ್ಟಾಫ್ ಗೆ ಮಾತ್ರ 1-5 ತರಗತಿಗಳೊಳಗೆ ಪ್ರವೇಶ ಕಲ್ಪಿಸಲಾಗಿದೆ.
ದಸರಾ ರಜೆಯ ಬಳಿಕ ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದರು. ಇದೀಗ ಶಿಕ್ಷಣ ಇಲಾಖೆಯಿಂದ ನೇರ ಆದೇಶ ಹೊರಬಿದ್ದಿದೆ.
Karnataka Primary Schools have been allowed to reopen from this Thursday – October 21, 2021. The government has released a notice informing everyone that the decision. Check details here.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm