ಬ್ರೇಕಿಂಗ್ ನ್ಯೂಸ್
26-10-21 01:42 pm Bengaluru Correspondent ಕರ್ನಾಟಕ
ಬೆಂಗಳೂರು, ಅ.26: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರಾವಳಿಯ ಹವ್ಯಕ ಬ್ರಾಹ್ಮಣರ ಜೊತೆ ಸಂಬಂಧ ಬೆಳೆಸಿದ್ದಾರೆ. ದಲಿತ ಸಮುದಾಯದ ಖರ್ಗೆಯವರ ಮೊಮ್ಮಗಳ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಹವ್ಯಕ ಬ್ರಾಹ್ಮಣ ಯುವಕನ ಜೊತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಲೋಕಸಭೆಯ ಪ್ರತಿಪಕ್ಷದ ನಾಯಕ ಖರ್ಗೆ ಹವ್ಯಕ ಬ್ರಾಹ್ಮಣರ ಮನೆಯ ಬೀಗರಾಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರ ಪುತ್ರಿ ಜಯಶ್ರೀ ಮತ್ತು ರಾಧಾಕೃಷ್ಣ ದಂಪತಿಯ ಪುತ್ರಿ ಪ್ರಾರ್ಥನಾರನ್ನು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಗಿಲ್ಕಿಂಜ ಮನೆಯ ಕುಟುಂಬದ ಯುವಕ ಪಾಣಿನಿ ಭಟ್ ವರಿಸಿದ್ದಾರೆ. ಗಿಲ್ಕಿಂಜ ಮನೆಯ ಎ.ಟಿ. ಹರಿಶಂಕರ ಮತ್ತು ವಿಜಯಲಕ್ಷ್ಮೀ ದಂಪತಿಯ ಪುತ್ರ ಪಾಣಿನಿ ಭಟ್ ಬೆಂಗಳೂರಿನಲ್ಲಿ ಕಂಪನಿಯೊಂದರಲ್ಲಿ ಕೆಲಸದಲ್ಲಿದ್ದಾರೆ.

ಪಾಣಿನಿ ಭಟ್ ಮತ್ತು ಪ್ರಾರ್ಥನಾ ಒಂದೇ ಕಂಪನಿಯಲ್ಲಿ ಕೆಲಸಕ್ಕಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿಯ ವಿಷಯವನ್ನು ಎರಡೂ ಕುಟುಂಬಗಳಿಗೆ ತಿಳಿಸಿ, ಮದುವೆಗೆ ಒಪ್ಪಿಸಿದ್ದಾರೆ. ದಲಿತ ವರ್ಗದ ಹುಡುಗಿಯನ್ನು ಕಟ್ಟರ್ ಬ್ರಾಹ್ಮಣರೆಂದು ಎನಿಸಿಕೊಂಡಿರುವ ಹವ್ಯಕ ಕುಟುಂಬ ಸೊಸೆಯಾಗಿ ಸ್ವೀಕರಿಸಿದ್ದು, ಎರಡೂ ಕುಟುಂಬಗಳ ಸಮ್ಮತಿಯಿಂದ ಅದ್ದೂರಿಯಿಂದ ಮದುವೆ ಕಾರ್ಯ ಜರುಗಿದೆ.

ಮದುವೆ ಸಮಾರಂಭದಲ್ಲಿ ಕಾಂಗ್ರೆಸ್ ಪ್ರಮುಖರಾದ ವೀರಪ್ಪ ಮೊಯ್ಲಿ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
Mallikarjun Kharge Grand Daughter wedding in Bangalore groom Native of Bantwal Mangalore. Congress and BJP leaders were seen in the wedding.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 02:57 pm
HK News Staffer
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm