ಬ್ರೇಕಿಂಗ್ ನ್ಯೂಸ್
29-10-21 09:33 pm Bengaluru, HK Desk ಕರ್ನಾಟಕ
ಬೆಂಗಳೂರು, ಅ.29: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ನಾಳೆ (ಅ.30) ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಪ್ರಕಟಣೆ ಹೊರಡಿಸಿದ್ದು, ಪುನೀತ್ ರಾಜ್‌ಕುಮಾರ್ ಅಗಲಿಕೆ ಹಿನ್ನೆಲೆಯಲ್ಲಿ ಶೋಕಾಚರಣೆ ಸಲುವಾಗಿ ಖಾಸಗಿ ಶಾಲೆಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ ಎಂದು ರುಪ್ಸಾ ಒಕ್ಕೂಟ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮಾಹಿತಿ ನೀಡಿದ್ದಾರೆ. ಆದ್ರೆ, ಸರ್ಕಾರಿ ಶಾಲೆ ರಜೆ ಕುರಿತು ಇನ್ನೂ ಯಾವುದೇ ತೀರ್ಮಾನವಾಗಿಲ್ಲ.

ಎಂಬಿಎ ಪರೀಕ್ಷೆ ಮುಂದೂಡಿಕೆ
ಶನಿವಾರ (ಅ.30) ನಡೆಯಬೇಕಿದ್ದ ಬೆಂಗಳೂರು ಸಿಟಿ ವಿಶ್ವವಿದ್ಯಾಲದ ಎಂಬಿಎ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಪರೀಕ್ಷೆ ಮುಂದೂಡಿಕೆ ಕುರಿತು ಬೆಂಗಳೂರು ಸಿಟಿ ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ. ಎಂಬಿಎ ಅಂತಿಮ ವರ್ಷದ ಪರೀಕ್ಷೆಗಳನ್ನು ಮಂಗಳವಾರಕ್ಕೆ ಮುಂಡೂಡಲಾಗಿದೆ ಎಂದು ಬೆಂಗಳೂರು ಸಿಟಿ ವಿವಿ ಕುಲಪತಿ ಲಿಂಗರಾಜು ತಿಳಿಸಿದ್ದಾರೆ.

ನಗರಾದ್ಯಂತ ಫುಲ್ ಸೆಕ್ಯೂರಿಟಿ
ಬೆಂಗಳೂರು ನಗರಾದ್ಯಂತ 6 ಸಾವಿರ ಪೊಲೀಸರು, ಕೆಎಸ್ಆರ್‌ಪಿ ಪ್ಲಟೂನ್ ನಿಯೋಜನೆ ಮಾಡಲಾಗಿದೆ. ಭಾನುವಾರ ಮಧ್ಯರಾತ್ರಿ ವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. ಎಷ್ಟೇ ಜನ ಬಂದ್ರೂ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗುತ್ತೆ ಎಂದು ಕಮಿಷನರ್ ಕಮಲ್ ಪಂತ್ ತಿಳಿಸಿದ್ದಾರೆ.

ಅಂತ್ಯಕ್ರಿಯೆ ಬಗ್ಗೆ ನಿರ್ಧಾರ ಆಗಿಲ್ಲ
ಪುನೀತ್ ಪಾರ್ಥಿವ ಶರೀರದ ಅಂತ್ಯಕ್ರಿಯೆ ಬಗ್ಗೆ ಅವರ ಕುಟುಂಬಸ್ಥರು ಯಾವುದೇ ಮಾಹಿತಿ ನೀಡಿಲ್ಲ. ಈ ಬಗ್ಗೆ ಸರ್ಕಾರವು ಸಹ ಚರ್ಚೆ ನಡೆಸಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕು ಎಂಬ ಬಗ್ಗೆ ಕುಟುಂಬಸ್ಥರಲ್ಲಿ ಕೇಳಿ ತಿಳಿಸಲಾಗುವುದು ಎಂದು ಕಂದಾಯ ಸಚಿವ ಅಶೋಕ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಚಿತ್ರ ಪ್ರದರ್ಶನ ಬಂದ್
ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚಿತ್ರ ಪ್ರದರ್ಶನವನ್ನು ನಿಲ್ಲಿಸಲಾಗಿದೆ. ಈ ಕುರಿತು ಮೈಸೂರಿನಲ್ಲಿ ಕರ್ನಾಟಕದ ಚಲನಚಿತ್ರ ಪ್ರದರ್ಶಕರ ಮಹಾ ಮಂಡಳಿ ಉಪಾಧ್ಯಕ್ಷ ರಾಜಾರಾಮ್ ಹೇಳಿಕೆ ನೀಡಿದ್ದಾರೆ. ಚಿತ್ರರಂಗ ಮೊದಲು ಈ ಶಾಕ್ ನಿಂದ ಹೊರ ಬರಬೇಕು. ಮುಂದೆ ಯಾವಾಗ ಚಿತ್ರ ಪ್ರದರ್ಶನ ಮಾಡಬೇಕು ನೋಡೋಣ. ಪುನೀತ್ ಜೊತೆ ನಾನು ಚಾಮುಂಡಿ ಬೆಟ್ಟ ಹತ್ತಿ ಇಳಿಯುತ್ತಿದ್ದೆ. ಅವರು ಆರೋಗ್ಯದ ಬಗ್ಗೆ ಗಮನ ಹರಿಸುತ್ತಿದ್ದರು. ಅವರಿಗೆ ಈ ರೀತಿ ಆಗಿರೊದು ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರು ದುಃಖ ವ್ಯಕ್ತಪಡಿಸಿದ್ದಾರೆ.
Some private schools have announced a holiday on Saturday in the wake of the death of renowned actor Puneet Raj Kumar. Private schools union Roopsa Karnataka has issued a statement on this. In an unfortunate incident, Sandalwood superstar Puneeth Rajkumar passed away on Friday due to cardiac arrest. He was 46-years-old. Ever since the news broke, the actor's fans flocked outside Vikram hospital, where he was admitted, and others rushed outside his residence in Sadashivanagar. In Vijayapura, fans have forced local theater owners to shut down their respective cinema halls. According to reports, theaters in Mysuru have also been temporarily shut. A high alert has been declared in Karnataka owing to the actor's sudden demise. Multiple reports suggest that the state government has also ordered to close theaters for security reasons.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm