ಬ್ರೇಕಿಂಗ್ ನ್ಯೂಸ್
11-11-21 09:34 pm Bengaluru Correspondent ಕರ್ನಾಟಕ
ಬೆಂಗಳೂರು, ನ.11: ಬಿಟ್ ಕಾಯಿನ್ ಹಗರಣದ ಆರೋಪಿ ಬಡವರ ಹೆಸರಲ್ಲಿ ಮಾಡಿದ್ದ ಜನಧನ್ ಖಾತೆಗಳಿಂದ ತಲಾ 2 ರೂಪಾಯಿ ಲೆಕ್ಕದಲ್ಲಿ ಸುಮಾರು 6,000 ಕೋಟಿ ರೂಪಾಯಿಯಷ್ಟು ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾನೆಂಬ ಮಾಹಿತಿಯೂ ಇದೆ. ಆದರೆ ಇಂಥ ಗಂಭೀರ ಪ್ರಕರಣದ ಆರೋಪಿಯನ್ನು ಬಿಜೆಪಿ ಸರಕಾರದ ನಾಯಕರು ಸೇರಿ ಜಾಮೀನು ಕೊಟ್ಟು ಕಳುಹಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.
ಜನತಾ ಪರ್ವ ಎರಡನೇ ಹಂತದ ಕಾರ್ಯಾಗಾರದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇಷ್ಟು ಹಣದ ಅಕ್ರಮ ವರ್ಗಾವಣೆ ಹಿಂದೆ ಯಾರು ಇದ್ದಾರೆ ಎನ್ನುವ ಮಾಹಿತಿ ಜನರಿಗೆ ಗೊತ್ತಾಗಬೇಕಿದೆ. ಬಹುಶಃ ಈ ಎಲ್ಲ ಮಾಹಿತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಚೆನ್ನಾಗಿ ಗೊತ್ತಾಗಿದೆ. ಅವರ ಬಳಿ ಎಲ್ಲ ಮಾಹಿತಿ ಇದ್ದು, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರಬಹುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಬಿಟ್ ಕಾಯಿನ್ ಹಗರಣದ ಮುಖ್ಯ ಆರೋಪಿಗೆ ಜಾಮೀನು ಸಿಕ್ಕಿದ ಬಗ್ಗೆ ಗಂಭೀರ ಅನುಮಾನಗಳನ್ನು ವ್ಯಕ್ತಪಡಿಸಿದ ಎಚ್‌ಡಿ ಕುಮಾರಸ್ವಾಮಿ, ಆರೋಪಿಗೆ ಜಾಮೀನು ಕೊಡಲು ಖಾತರಿ ಕೊಟ್ಟಿದ್ದು ಯಾರು? ಆತನ ಪರ ವಾದ ಮಂಡಿಸಿದ ವಕೀಲರು ಯಾರು? ಆರೋಪಿ ಜೈಲಿನಿಂದ ಹೊರಬಂದ ನಂತರ ಮಾಧ್ಯಮದವರ ಮುಂದೆ ಕಾಣಿಸಿಕೊಂಡಿದ್ದಾನೆ. ಮಾಧ್ಯದವರ ಜತೆ ಆ ವ್ಯಕ್ತಿ ಮಾತನಾಡುತ್ತಾನೆ, ನಂತರ ಆಟೋ ಹತ್ತಿ ಹೋಗುತ್ತಾನೆ. ಇದೆಲ್ಲ ನೋಡಿದರೆ ಅದರ ಹಿಂದೆ ಯಾರೋ ಇರುವುದು ಸ್ಪಷ್ಟವಾಗುತ್ತದೆ. ಇದರಿಂದ ಬಿಟ್ ಕಾಯಿನ್ ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಅನುಮಾನ ದಟ್ಟವಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.
ಭಾರತದ ಮಾನ ಹರಾಜು ಆಗಬಾರದು ಅಂತ ಭಾಗಿಯಾದವರ ಮಾಹಿತಿಯನ್ನು ಹೊರಬಿಟ್ಟಿಲ್ಲ ಅಂತ ಕಾಣಿಸುತ್ತಿದೆ. ಆದಷ್ಟು ಬೇಗ ಜನತೆಗೆ ಸತ್ಯ ತಿಳಿಯಲಿ. ಪ್ರಧಾನ ಮಂತ್ರಿಯವರು ಅಮೆರಿಕಕ್ಕೆ ಭೇಟಿ ನೀಡಿದ್ದಾಗ ಈ ಬಗ್ಗೆ ಮಾಹಿತಿ ಸಿಕ್ಕಿದೆ. ಅವರಿಗೆ ಮುಜುಗರ ಅಗಿರುವ ಕಾರಣಕ್ಕೆ ಇಡೀ ಪ್ರಕರಣವನ್ನು ಅವರು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಹೇಳಿದರು.

ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುತ್ತಿದ್ದಾರೆ !
ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುತ್ತಿದೆ. ಆ ಕಲ್ಲು ಯಾರಿಗೆ ಬೀಳುತ್ತದೆ ? ಈಗಾಗಲೇ ಕಾಂಗ್ರೆಸ್ ನಾಯಕರಿಗೆ ಸಂಬಂಧಿಸಿದ ಕೆಲವು ಹೆಸರುಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಆದರೆ, ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅವರು ಮಾರ್ಮಿಕವಾಗಿ ಹೇಳಿದರು.
H D Kumaraswamy reacts on Bitcoin scam in Karnataka says 6 crore stolen from Jandhan account by BJP shadow.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm