ಬ್ರೇಕಿಂಗ್ ನ್ಯೂಸ್
15-11-21 09:45 pm H.K, Bengaluru Desk ಕರ್ನಾಟಕ
ಬೆಂಗಳೂರು, ನ.16: ಬಿಟ್ ಕಾಯಿನ್ ಹಗರಣದ ಸೂತ್ರಧಾರ ಎನ್ನಲಾದ ಶ್ರೀಕಿಯ ಜೀವಕ್ಕೆ ಆಪತ್ತು ಇದ್ದು ಆತನಿಗೆ ಪೊಲೀಸ್ ಭದ್ರತೆ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವಿಶ್ವಾದ್ಯಂತ ಗಮನ ಸೆಳೆದಿರುವ ಈ ಹಗರಣದಲ್ಲಿ ಬಹಳಷ್ಟು ಪ್ರಭಾವಿಗಳು ಶಾಮೀಲಾಗಿದ್ದು ಈ ಹಿನ್ನೆಲೆಯಲ್ಲಿ ಆರೋಪಿಗೆ ಭದ್ರತೆ ಅಗತ್ಯವಾಗಿದೆ. ಕಳೆದ ವರ್ಷ ರಾಜ್ಯ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಶ್ರೀಕಿಗೆ ಮಾದಕ ವಸ್ತು ಚಟ ಇದ್ದುದನ್ನು ಹೇಳಲಾಗಿದೆ. ಈ ಸಮಯದಲ್ಲಿ ಶ್ರೀಕಿ ತಂದೆಯೇ ಪತ್ರ ಬರೆದು ತನ್ನ ಮಗನಿಗೆ ಪೊಲೀಸರು ಡ್ರಗ್ಸ್ ನೀಡಿದ್ದರು ಎಂದು ಆರೋಪಿಸಿದ್ದರು.

ಬಿಟ್ ಕಾಯಿನ್ ಹಗರಣ ಸ್ಫೋಟಗೊಂಡ ನಂತರ ಸಣ್ಣಮಟ್ಟದ ಆರೋಪದ ಮೇಲೆ ನಾಟಕೀಯ ರೀತಿಯಲ್ಲಿ ನಡೆದಿರುವ ಶ್ರೀಕೃಷ್ಣನ ಬಂಧನ, ಅಷ್ಟೇ ನಾಟಕೀಯವಾಗಿ ಜಾಮೀನು ಮೇಲೆ ಬಿಡುಗಡೆಯಾಗಿರುವುದು ಪೊಲೀಸರ ನಡವಳಿಕೆಗಳ ಬಗ್ಗೆ ಸಂಶಯಗಳಿಗೆ ಕಾರಣವಾಗಿದೆ ಎಂದವರು ಹೇಳಿದ್ದಾರೆ.
ಶ್ರೀಕಿ ಈಗಲೂ ಡ್ರಗ್ಸ್ ವ್ಯಸನಿಯೇ ? ಡ್ರಗ್ಸ್ ವ್ಯಸನಿಯಾಗಿದ್ದರೆ ಚಿಕಿತ್ಸೆ ನೀಡಲಾಗಿದೆಯೇ ? ಈ ಬಾರಿ ಬಂಧಿಸಿದಾಗ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆಯೇ ? ಈ ಬಗ್ಗೆ ರಾಜ್ಯದ ಗೃಹ ಸಚಿವರು ಮಾಹಿತಿ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬಿಟ್ ಕಾಯಿನ್ ಹಗರಣ ತಂತ್ರಜ್ಞಾನ ಅವಲಂಬಿತ ಬಿಳಿ ಕಾಲರ್ ಅಪರಾಧ. ಹ್ಯಾಕ್ ಮಾಡಿರುವುದು, ಸಂಬಂಧಿತ ದಾಖಲೆಗಳ ಪಾಸ್ ವರ್ಡ್ ಇತ್ಯಾದಿ ಆತನ ನೆನಪಲ್ಲಿ ಮಾತ್ರ ಇದೆ, ಲಿಖಿತ ದಾಖಲೆಗಳಿಲ್ಲ ಎಂದು ಹೇಳಲಾಗುತ್ತದೆ. ಹೀಗಾಗಿ ಶ್ರೀಕಿಯ ಪ್ರಾಣಕ್ಕೆ ಅಪಾಯ ಸಾಧ್ಯತೆ ಇದೆ ಎಂದು ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
In a startling demand, Karnataka Leader of the Opposition Siddaramaiah on Monday asked the BJP government to provide security to hacker Srikrishna, suggesting that his life could be in danger.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am