ಬ್ರೇಕಿಂಗ್ ನ್ಯೂಸ್
18-11-21 12:46 pm Hk Desk, Bengaluru ಕರ್ನಾಟಕ
ಹುಬ್ಬಳ್ಳಿ: ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ತಪ್ಪಿತಸ್ಥರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ದಾಖಲೆ ಇದ್ದರೆ ಕೊಡಲಿ. ಯಾವುದೇ ಪಕ್ಷದವರು ಕೊಟ್ಟರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಕಾಂಗ್ರೆಸ್ನಲ್ಲಿ ಬಡಿದಾಟ ಆರಂಭವಾಗಿದ್ದು, ಈಗಾಗಲೇ ಎರಡು ಬಣಗಳಿವೆ. ಕಾಂಗ್ರೆಸ್ ಬಡಿದಾಟದ ಕುರಿತು ಟೀಕೆ, ಟಿಪ್ಪಣಿ ಮಾಡುವುದಕ್ಕೆ ಹೋಗುವುದಿಲ್ಲ. ಪ್ರತಿಪಕ್ಷದವರ ವಿರುದ್ಧ ಹೇಳಿಕೆ ನೀಡುವುದಿಲ್ಲ ಎಂದು ಬಿಎಸ್ವೈ ತಿಳಿಸಿದರು.
ಹ್ಯಾಕರ್ ಶ್ರೀಕಿ ಮಿಸ್ಸಿಂಗ್ ;
ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ಜೀವಕ್ಕೆ ಅಪಾಯವಿದೆ ಎಂದು ಕಾಂಗ್ರೆಸ್ ನಾಯಕರು ಕಳೆದ ಒಂದು ವಾರದಿಂದ ಹೇಳುತ್ತಿದ್ದರೂ ರಾಜ್ಯ ಸರಕಾರ ಕಿವಿಗೆ ಹಾಕ್ಕೊಂಡಿರಲಿಲ್ಲ. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ರಾಜ್ಯ ಸರಕಾರ ಶ್ರೀಕಿಗೆ ಪೊಲೀಸ್ ಭದ್ರತೆ ನೀಡಲು ಸೂಚನೆ ನೀಡಿದೆ. ಆದರೆ, ಇತ್ತ ಪೊಲೀಸರು ಭದ್ರತೆ ನೀಡಲು ಹೋದರೆ ಶ್ರೀಕಿಯೇ ಕಾಣೆಯಾಗಿದ್ದಾನೆ.
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಬೆಳಗ್ಗೆ ಶ್ರೀಕಿ ಭದ್ರತೆಗಾಗಿ ಸಬ್ ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಯೊಬ್ಬರನ್ನು ನಿಯೋಜಿಸಿ ಆದೇಶ ಹೊರಡಿಸಿದ್ದರು. ಕೂಡಲೇ ಶ್ರೀಕಿಯ ಮನೆಗೆ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಪೊಲೀಸರು ತೆರಳಿದ್ದು, ಅಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ, ಶ್ರೀಕಿ ಎಲ್ಲಿದ್ದಾನೆಂದು ಮನೆಯವರಿಗೇ ಗೊತ್ತಿಲ್ಲ. ಹೀಗಾಗಿ ಪೊಲೀಸರು ಶ್ರೀಕಿ ಪತ್ತೆಗಾಗಿ ತೀವ್ರ ತಲೆಕೆಡಿಸಿಕೊಂಡಿದ್ದಾರೆ.
ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯ ಸರಕಾರದ ಬಿಜೆಪಿ ಪ್ರಭಾವಿಗಳು ಇದ್ದಾರೆಂಬ ಮಾಹಿತಿಗಳು ಈಗಾಗ್ಲೇ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದೆ. ಈ ನಡುವೆ, ಆರೋಪಿಯೆಂದು ಗುರುತಿಸಲ್ಪಟ್ಟಿರುವ ಶ್ರೀಕಿಯೇ ನಾಪತ್ತೆಯಾಗಿದ್ದು, ತೀವ್ರ ಸಂಚಲನ ಸೃಷ್ಟಿಸಿದೆ. ಶ್ರೀಕಿ ಬಾಯಿಬಿಟ್ರೆ ದೊಡ್ಡ ನಾಯಕರಿಗೆ ಆಪತ್ತು ಎದುರಾಗುವುದು ಖಚಿತ ಎನ್ನಲಾಗುತ್ತಿರುವ ಮಧ್ಯೆಯೇ ಆತನ ನಾಪತ್ತೆ ಮತ್ತೊಂದು ಶಾಕ್ ನೀಡಿದೆ.
ಈಗಾಗ್ಲೇ ಪ್ರಕರಣದ ಸಾಕ್ಷ್ಯಗಳನ್ನು ಶ್ರೀಕಿ ಪೂರ್ತಿಯಾಗಿ ಕ್ರಾಷ್ ಮಾಡಿದ್ದಾನೆ ಎನ್ನಲಾಗುತ್ತಿದ್ದು, ತಾಂತ್ರಿಕ ಸಾಕ್ಷ್ಯಗಳನ್ನು ಮತ್ತೆ ರಿಟ್ರೀವ್ ಮಾಡಿದರೆ ಆಪತ್ತು ಎದುರಾಗುವ ಸಾಧ್ಯತೆಗಳಿವೆ ಎನ್ನುವ ಆತಂಕದಿಂದ ರಾಜಕೀಯ ಪ್ರಭಾವಿಗಳೇ ಸೇರಿ ಆತನನ್ನು ಮುಗಿಸಲು ಸಂಚು ಹೂಡಿದ್ದಾರೆಂಬ ಅನುಮಾನಗಳು ಕಳೆದ ಕೆಲವು ದಿನಗಳಿಂದ ಕೇಳಿಬಂದಿತ್ತು. ಈ ಬಗ್ಗೆ ಕಾಂಗ್ರೆಸ್ ನಾಯಕರು ಪದೇ ಪದೇ ಸರಕಾರವನ್ನು ಎಚ್ಚರಿಸಿದ್ದರು. ಈಗ ಪ್ರಾಣಾಪಾಯದ ಭೀತಿಯಲ್ಲಿ ಸ್ವತಃ ಶ್ರೀಕಿಯೇ ತಲೆಮರೆಸಿಕೊಂಡಿದ್ದಾನೆಯೇ, ಯಾರಾದ್ರೂ ಆತನನ್ನು ಬಚ್ಚಿಟ್ಟಿದ್ದಾರೆಯೇ ಎನ್ನುವ ಅನುಮಾನವೂ ಮೂಡಿದೆ.
Bitcoin scam, action to be taken by PM Modi on all those involved if proved states Yediyurapp in Hubli.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am