ಬ್ರೇಕಿಂಗ್ ನ್ಯೂಸ್
27-11-21 11:14 am HK Desk news ಕರ್ನಾಟಕ
ಬೆಂಗಳೂರು, ನ 27: ಶಾಲಾ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ದಿಢೀರ್ ಏರಿಕೆ ಕಂಡಿದ್ದು, ಶುಕ್ರವಾರ 402 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದಿನದ ಸೋಂಕು ಪ್ರಮಾಣ ದರ ಶೇ. 0.60ಕ್ಕೆ ಏರಿಕೆಯಾಗಿದೆ.
ಕಳೆದ 4-5 ದಿನಗಳಿಂದ ಬೆಂಗಳೂರು ನಗರದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಏರುಗತಿ ಪಡೆದುಕೊಂಡಿದ್ದು, 224 ಪ್ರಕರಣಗಳು ವರದಿಯಾಗಿವೆ. ಧಾರವಾಡದಲ್ಲಿ 85, ಮೈಸೂರಿನಲ್ಲಿ 25, ದಕ್ಷಿಣ ಕನ್ನಡದಲ್ಲಿ 19 ಪ್ರಕರಣಗಳು ದೃಢಪಟ್ಟಿವೆ. ಉಳಿದಂತೆ 16 ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಒಂದಂಕಿಯಲ್ಲಿದ್ದು, 10 ಜಿಲ್ಲೆಗಳಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ.
ಕೋವಿಡ್ ಸೋಂಕಿತರಲ್ಲಿ ಬೆಂಗಳೂರು ನಗರ, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಕೊಡಗು ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಲಾ ಒಬ್ಬರಂತೆ ಆರು ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಮರಣ ಪ್ರಮಾಣ ದರ ಶೇ. 1.49 ತಲುಪಿದೆ. ಈವರೆಗೂ ಮೃತಪಟ್ಟವರ ಒಟ್ಟು ಸಂಖ್ಯೆ 38,193ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ 277 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರ ಒಟ್ಟು ಸಂಖ್ಯೆ 29.50 ಲಕ್ಷ ದಾಟಿದೆ. ಸದ್ಯ ರಾಜ್ಯದಲ್ಲಿ 6,611 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು ಖಾಸಗಿ ಶಾಲೆಯಲ್ಲಿ 37 ವಿದ್ಯಾರ್ಥಿಗಳಿಗೆ ಒಕ್ಕರಿಸಿದ ಸೋಂಕು;
ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 182 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಮಹದೇವಪುರ ವಲಯದ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.
ನಗರದ ಸರ್ಜಾಪುರ ರಸ್ತೆಯಲ್ಲಿರುವ ದೊಡ್ಡಸಂದ್ರದ ಖಾಸಗಿ ಶಾಲೆಯಲ್ಲಿ 37 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 13 ರಿಂದ 15 ವರ್ಷದ 33 ವಿದ್ಯಾರ್ಥಿಗಳು, ನಾಲ್ವರು ಶಾಲಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ಶಾಲೆಗಳು ಆರಂಭವಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಗುಂಪಾಗಿರುವುದಿಂದ ಸೋಂಕು ವೇಗವಾಗಿ ಪ್ರಸರಣವಾಗುತ್ತಿದೆ ಎನ್ನಲಾಗಿದೆ. ಇನ್ನು ಇನ್ನೊಂದೆಡೆ ವಿದೇಶದಲ್ಲಿ ಮತ್ತೊಂದು ಕೊರೊನಾ ತಳಿ ಪತ್ತೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮಹಿಸುವಂತೆ ಕೇಂದ್ರ ಸರಕರ ಎಚ್ಚರಿಕೆ ನೀಡುತ್ತಲೇ ಇದೆ. ಕೊರೊನಾ ಕಡಿಮೆಯಾಗಿಲ್ಲ ಎಂದು ಎಚ್ಚರಿಸುತ್ತಿದೆ.
ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಂಬಂಧ ರೈಲ್ವೆ, ವಿಮಾನ ಹಾಗೂ ಗಡಿ ಜಿಲ್ಲೆಗಳಲ್ಲಿ ತಪಾಸಣೆಯನ್ನು ಕಟ್ಟುನಿಟ್ಟಾಗಿ ಮಾಡಲಾಗುತ್ತಿದೆ. ಅಲ್ಲದೆ ರಾಜ್ಯ ಸರಕಾರ ನಿತ್ಯ 60 ಸಾವಿರ ಸೋಂಕು ಪರೀಕ್ಷೆ ನಡೆಸಬೇಕೆಂದು ಆದೇಶವಿದ್ದರೂ, 75 ಸಾವಿರಕ್ಕೂ ಹೆಚ್ಚು ಸೋಂಕು ಪರೀಕ್ಷೆ ನಡೆಯುತ್ತಿದೆ ಎನ್ನುತ್ತಾರೆ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್.
ರಾಜ್ಯದಲ್ಲಿಇದುವರೆಗೆ ಶೇ.90ರಷ್ಟು ಮೊದಲ ಲಸಿಕೆ ನೀಡಲಾಗಿದ್ದರೆ, ಶೇ.57ರಷ್ಟು ಎರಡನೇ ಡೋಸ್ ನೀಡಲಾಗಿದೆ. ಕೆಲವರು ಎರಡನೇ ಡೋಸ್ ಲಸಿಕೆ ಪಡೆಯುವುದಕ್ಕೆ ಹಿಂಜರಿಯುತ್ತಿರುವುದರಿಂದ ಎರಡನೇ ಡೋಸ್ ಲಸಿಕಾರಣದಲ್ಲಿ ತುಸು ಹಿನ್ನಡೆ ಉಂಟಾಗುತ್ತಿದೆ.
ಬೋಟ್ಸ್‌ವಾನಾ ವೈರಸ್ ಕಟ್ಟೆಚ್ಚರ
ವಿದೇಶದಲ್ಲಿಕಾಣಿಸಿಕೊಂಡಿರುವ ಹೊಸ ತಳಿ ಬೋಟ್ಸ್‌ವಾನಾ ವೈರಸ್ ಕುರಿತು ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಹೊಸ ತಳಿಯ ಬಗ್ಗೆ ಕೇಂದ್ರದಿಂದಲೂ ಕಟ್ಟೆಚ್ಚರ ನೀಡಲಾಗಿದೆ. ಬೋಟ್ಸ್‌ವಾನಾದಲ್ಲಿ 3, ದಕ್ಷಿಣ ಆಫ್ರಿಕಾದಲ್ಲಿ6 ಹೊಸ ಕೋವಿಡ್ 19 ತಳಿಯ ಕೇಸ್‌ಗಳು ಪತ್ತೆ ಆಗಿವೆ. ಹಾಂಕಾಂಗ್‌ನಲ್ಲಿ ಹೊಸ ತಳಿಯ 1 ಕೇಸ್ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. 3 ದೇಶಗಳಿಂದ ರಾಜ್ಯಕ್ಕೆ ಬರುವವರಿಗೆ ಟೆಸ್ಟ್ ಕಡ್ಡಾಯ ಮಾಡಲಾಗಿದೆ.
ಪರೀಕ್ಷೆ, ಸ್ಕ್ರೀನಿಂಗ್ ಹಾಗೂ ಟ್ರ್ಯಾಕಿಂಗ್ ಮಾಡುವಂತೆ ಸೂಚನೆ ನೀಡಲಾಗಿದೆ. 3 ದೇಶಗಳಿಂದ ಬಂದಿರುವವರನ್ನು ಪತ್ತೆ ಹಚ್ಚಿ ಪರೀಕ್ಷೆ ಮಾಡಿ ಎಂದು ರಾಜ್ಯ ಆರೋಗ್ಯ ಇಲಾಖೆಯು ಅಧಿಕಾರಿಗಳಿಗೆ ಸೂಚನೆ ನೀಡಿದೆ.
A medical college in Karnataka's Dharwad has become a COVID-19 cluster after the number of students and staff infected with coronavirus went up to 182 today from 66 a day before, officials said. Most of the people infected at the SDM College of Medical Sciences in Dharwad were fully vaccinated against coronavirus, officials said, adding that a recent freshers' party organised inside the campus led to the outbreak.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm