ಸಿಬಂದಿಯಿಂದ ಆಕ್ಸಿಜನ್ ಆಫ್ ; ಉಸಿರಾಟ ಸಮಸ್ಯೆ ಎದುರಿಸುತ್ತಿದ್ದ ಮಹಿಳೆ ಸಾವು ! ಆಸ್ಪತ್ರೆ ಸಿಬಂದಿ ವಿರುದ್ಧ ಆಕ್ರೋಶ 

28-11-21 07:30 pm       HK News Correspondence   ಕರ್ನಾಟಕ

ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.‌ 

ಚಿಕ್ಕಬಳ್ಳಾಪುರ, ನ.28: ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.‌ 

ಉಪ್ಪಕುಂಟಪಲ್ಲಿ ಗ್ರಾಮದ ನಿವಾಸಿ ಗಂಗುಲಮ್ಮ (70 )ಸಾವನ್ನಪ್ಪಿದ ಮಹಿಳೆ. ಇವರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.‌ ಕೃತಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ‌ಆದರೆ ಶನಿವಾರ ರಾತ್ರಿ 1:30ಕ್ಕೆ ಸಿಬಂದಿಯೊಬ್ಬರು ಆಕ್ಸಿಜನ್‌ ಆಫ್ ಮಾಡಿದ್ದಾರೆ. ಈ ಬಗ್ಗೆ ಅರಿವಿಲ್ಲದೆ, ಆಕ್ಸಿಜನ್ ಆಫ್ ಮಾಡಿದ್ದರಿಂದ ಉಸಿರಾಟ ಸಮಸ್ಯೆ ಎದುರಿಸುತ್ತಿದ್ದ ಮಹಿಳೆ ಸಾವು ಕಂಡಿದ್ದಾರೆ. 

ವಿಷಯ ತಿಳಿದ ಆಸ್ಪತ್ರೆಯ ವೈದ್ಯಕೀಯ ಆಡಳಿತಾಧಿಕಾರಿ ಸಂತೋಷ್ ಆಗಮಿಸಿದ್ದು ಅವರನ್ನು ಕುಟುಂಬಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಂತೋಷ್ ಮತ್ತು ಅಲ್ಲಿನ ಸಿಬ್ಬಂದಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.   

ವೈದ್ಯಕೀಯ ಸಿಬ್ಬಂದಿ ಪ್ರಕಾಶ್ ಮತ್ತು ಶಿಲ್ಪ ವಿರುದ್ಧ ಚಿಂತಾಮಣಿ ನಗರ‌ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.

Woman dies from after staff disconnects oxygen at Chikkaballapur Hospital .