ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಇಲ್ಲ, ಊಹಾಪೋಹಗಳಿಗೆ ಜನ ಕಿವಿಗೊಡಬಾರದು ; ಸಿಎಂ ಬೊಮ್ಮಾಯಿ 

30-11-21 07:19 pm       HK Desk news   ಕರ್ನಾಟಕ

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಇಲ್ಲ. ಈ ಕುರಿತಂತೆ ಯಾವುದೇ ಊಹಾಪೋಹಗಳಿಗೆ ಜನ ಕಿವಿಗೊಡಬಾರದು. ಸದ್ಯಕ್ಕೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ.

ಬೆಂಗಳೂರು, ನ. 30: ಇಡೀ ಜಗತ್ತಿಗೆ ಕೊರೊನಾ ವೈರಸ್ ಮೂರನೇ ಅಲೆಯ ಆತಂಕ ಕಾಡುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿಯೂ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಜೊತೆಗೆ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದ್ದ ಕೊರೊನಾ ವೈರಸ್ ಹೊಸ ತಳಿ ಓಮಿಕ್ರಾನ್ ಆತಂಕ ಕೂಡ ಶುರುವಾಗಿದೆ. ಈ ವರೆಗೆ ಓಮಿಕ್ರಾನ್ ರೂಪಾಂತರಿ ವೈರಸ್ ಪ್ರಕರಣ ಭಾರತದಲ್ಲಿ ಪತ್ತೆಯಾಗಿಲ್ಲ. ಆದರೂ ಕೋವಿಡ್ ರೂಪಾಂತರಿ ವೈರಸ್ ಆತಂಕ ಮಾತ್ರ ಕಡಿಮೆಯಾಗುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುವುದು ಎಂಬ ಊಹಾಪೋಹಗಳು ಎದುರಾಗಿವೆ.

ರೂಪಾಂತರಿ ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್‌ಡೌನ್ ಮಾಡಲಾಗುತ್ತಿದೆಯಾ? ಎಂಬುದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ. 

"ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಇಲ್ಲ. ಈ ಕುರಿತಂತೆ ಯಾವುದೇ ಊಹಾಪೋಹಗಳಿಗೆ ಜನ ಕಿವಿಗೊಡಬಾರದು. ಸದ್ಯಕ್ಕೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ನಡೆಯಬೇಕು. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಬೇಕು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.

"ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ ವಿಶೇಷ ನಿಗಾ ವಹಿಸಲಾಗಿದೆ,' ಎಂದು ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

No lockdown in Karnataka dont believe in wrong rumours stated CM Bommai during the questions asked me media today.