ಬ್ರೇಕಿಂಗ್ ನ್ಯೂಸ್
10-12-21 10:18 pm HK Desk news ಕರ್ನಾಟಕ
ಬೆಂಗಳೂರು, ಡಿ.10 : ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ದುರಂತ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ವಿಕೃತವಾಗಿ ಪೋಸ್ಟ್ ಮಾಡಿ, ಸಂಭ್ರಮಿಸಿದ್ದ ಬಗ್ಗೆ ಎಫ್ಐಆರ್ ದಾಖಲಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಈ ಬಗ್ಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ.
ರಕ್ಷಣಾ ಪಡೆಗಳ ಮುಖ್ಯಸ್ಥರ ಬಗ್ಗೆ ಅಗೌರವದಿಂದ ಸಂದೇಶ ಹರಡುವುದನ್ನು ಸಹಿಸುವುದಿಲ್ಲ. ಈ ರೀತಿಯ ವರ್ತನೆಯನ್ನು ಖಂಡಿಸುತ್ತಿದ್ದು, ಅಂಥವರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆಗೆ ಹೇಳಿಕೆ ನೀಡಿರುವ ಬೊಮ್ಮಾಯಿ, ಕೆಲವು ಸ್ಥಾಪಿತ ಹಿತಾಸಕ್ತಿಯ ಮೈಂಡ್ ಸೆಟ್ ಉಳ್ಳವರು ರಕ್ಷಣಾ ಪಡೆಗಳ ಮುಖ್ಯಸ್ಥರ ಸಾವಿನ ಬಗ್ಗೆ ಪ್ರಚೋದನಕಾರಿ ಮತ್ತು ಸಂಭ್ರಮಿಸುವ ರೀತಿ ಸಂದೇಶ ಹರಡಿದ್ದಾರೆ. ಇಂತಹ ಸಮಾಜ ವಿರೋಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಇದಕ್ಕೂ ಮುನ್ನ ಹೆಲಿಕಾಪ್ಟರ್ ದುರಂತದ ಬಗ್ಗೆ ಯಾರು ಕೂಡ ಊಹಾಪೋಹ ಹರಡಬೇಡಿ. ಮೂರು ಸೇನಾ ತಂಡಗಳಿಂದ ಘಟನೆ ಬಗ್ಗೆ ತನಿಖೆ ನಡೆಸಲು ತಂಡ ರಚಿಸಲಾಗಿದೆ ಎಂದು ಭಾರತೀಯ ವಾಯುಪಡೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಘಟನೆ ಬಗ್ಗೆ ವಾಯುಪಡೆ ಹಿರಿಯ ಅಧಿಕಾರಿ ಏರ್ ಮಾರ್ಶಲ್ ಮಾನವೇಂದ್ರ ಸಿಂಗ್ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದು ರಾಜನಾಥ್ ಸಿಂಗ್ ಲೋಕಸಭೆಯಲ್ಲಿ ತಿಳಿಸಿದ್ದರು.
ಕರಾವಳಿ ಸೇರಿದಂತೆ ದೇಶದ ಹಲವೆಡೆ ರಕ್ಷಣಾ ಪಡೆಗಳ ಮುಖ್ಯಸ್ಥರ ಸಾವಿನ ಬಗ್ಗೆ ಅವಹೇಳನಕಾರಿ ಬರೆದು ಕೆಲವರು ಪೋಸ್ಟ್ ಮಾಡಿದ್ದರು. ಈ ಬಗ್ಗೆ ಭಾರೀ ಆಕ್ರೋಶ ಕೂಡ ಕೇಳಿಬಂದಿದೆ. ಈಗಾಗ್ಲೇ ಗುಜರಾತ್ ಮತ್ತು ಉತ್ತರ ಪ್ರದೇಶ ಸರಕಾರಗಳು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಆದೇಶ ನೀಡಿದೆ.
Offensive Tweets and Social Media posts about the tragic chopper crash in which we lost our #CDSGeneralBipinRawat will not be tolerated. I strongly condemn all such messages and have instructed our Police Officials to take strict disciplinary legal action against the offenders.
— Basavaraj S Bommai (@BSBommai) December 10, 2021
Karnataka Chief Minister Basavaraj Bommai said on Friday that “offensive tweets and social media posts” about the helicopter crash in which Chief of Defence Staff Bipin Rawat died will not be tolerated. Bipin Rawat, his wife Madhulika Rawat and 11 others died on Wednesday in the helicopter crash in the Katteri-Nanchappanchathram area of Tamil Nadu’s Coonoor district.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm