ಬ್ರೇಕಿಂಗ್ ನ್ಯೂಸ್
11-12-21 08:14 pm HK Desk news ಕರ್ನಾಟಕ
ಮಂಡ್ಯ, ಡಿ.11 : ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿಯಿರುವ 15 ಸಾವಿರ ಶಿಕ್ಷಕ ಹುದ್ದೆಗಳಿಗೆ ಕೆಲವೇ ದಿನಗಳಲ್ಲಿ ನೇಮಕಾತಿ ಮಾಡುವ ಬಗ್ಗೆ ಆದೇಶ ಹೊರಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಅನೇಕ ವರ್ಷಗಳಿಂದ ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದೆ. ಶಿಕ್ಷಕರ ಕೊರತೆ ನೀಗಿಸುವುದೇ ನನ್ನ ಅಜೆಂಡಾ. ಈ ಬಗ್ಗೆ ಕೆಲವೇ ದಿನಗಳಲ್ಲಿ ನೋಟಿಫಿಕೇಶನ್ ಮಾಡಲಿದ್ದು, ಖಾಲಿಯಿರುವ 15 ಸಾವಿರ ಹುದ್ದೆಗಳನ್ನು ಭರ್ತಿಗೊಳಿಸುತ್ತೇನೆ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ.
ಓಮಿಕ್ರಾನ್ ಭೀತಿ ಬಗ್ಗೆ ಕೇಳಿದ ಪ್ರಶ್ನೆಗೆ, ಯಾವುದೇ ಕಾರಣಕ್ಕೂ ಕೊರೊನಾಗೆ ಭಯಪಟ್ಟು ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಖಡಕ್ಕಾಗಿ ಹೇಳಿದ ಶಿಕ್ಷಣ ಸಚಿವರು, ಕೊರೊನಾ ರಾಜ್ಯದಲ್ಲಿ ಹೆಚ್ಚಾಗಿಲ್ಲ. ಗಂಭೀರ ಸ್ಥಿತಿಯೂ ಉಂಟಾಗಿಲ್ಲ. ರಾಜ್ಯದಲ್ಲಿ 1 ಕೋಟಿ 20 ಲಕ್ಷ ಮಕ್ಕಳು ಶಾಲೆ ಓದುತ್ತಿದ್ದು, ಈ ಪೈಕಿ 102 ಮಕ್ಕಳಿಗಷ್ಟೇ ಸೋಂಕು ಕಂಡುಬಂದಿದೆ. ಇದರಲ್ಲಿ ಪಾಸಿಟಿವ್ ಬಂದಿರುವುದು ವಸತಿ ಶಾಲೆಗಳಲ್ಲಿ ಮಾತ್ರ. ಯಾವುದೇ ಓಪನ್ ಶಾಲೆಗಳಲ್ಲಿ ಮಕ್ಕಳಿಗೆ ಪಾಸಿಟಿವ್ ಬಂದಿಲ್ಲ ಎಂದಿದ್ದಾರೆ.
ಮಕ್ಕಳಿಗೆ ಕೊರೊನಾ ತೊಂದರೆ ಮಾಡಿಲ್ಲ
ಇದಲ್ಲದೆ, ಯಾವುದೇ ಜಿಲ್ಲೆಯಲ್ಲೂ ಮಕ್ಕಳಿಗೆ ಸೋಂಕು ಆಗಿರುವ ಸಂಖ್ಯೆ ಡಬಲ್ ಡಿಜಿಟ್ ಆಗಿಲ್ಲ. ಎಲ್ಲೋ ಒಂದಿಬ್ಬರಿಗೆ ಸೋಂಕು ಬಂದಿದೆ ಅಷ್ಟೇ. ಪಾಸಿಟಿವ್ ಆದ ಮಕ್ಕಳು ಕೂಡ ಆರೋಗ್ಯದಿಂದಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಇಲ್ಲ. ಮಧ್ಯ ವಾರ್ಷಿಕ ಪರೀಕ್ಷೆಗಳು ಚೆನ್ನಾಗಿ ನಡೆಯುತ್ತಿದೆ, ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಲೆ ನಡೆಸುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.
ಸರಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಇದರೊಂದಿಗೆ ಶಾಲಾ ಕೊಠಡಿ ಕೊರತೆ ಇರುವ ಕಡೆ ಸಮಸ್ಯೆ ನಿವಾರಿಸುವ ಕೆಲಸ ಮಾಡಲಾಗುವುದು. ಯಾವುದೇ ಶಾಲೆಯನ್ನೂ ಮುಚ್ಚದ ರೀತಿ ನೋಡಿಕೊಳ್ಳುತ್ತೇವೆ ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ
ಸರಕಾರಿ ಶಾಲೆಗಳಲ್ಲಿ ಕೆಲವು ಕಡೆ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದನ್ನು ನೋಡಿದ್ದೇವೆ. ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಕೇಂದ್ರ ಸರಕಾರ ಮೊಟ್ಟೆ, ಬಾಳೆಹಣ್ಣು ಕೊಡಲು ಯೋಜನೆ ಮಾಡಿದೆ. ಮಕ್ಕಳಿಗೆ ಪ್ರೋಟೀನ್ ನೀಡುವುದಕ್ಕಾಗಿ ಮೊಟ್ಟೆ ನೀಡಲು ತಜ್ಞರು ಸಲಹೆ ನೀಡಿದ್ದಾರೆ. ಬಾಳೆಹಣ್ಣನ್ನೂ ನೀಡುತ್ತಿದ್ದೇವೆ. ಯಾವುದೇ ಮಕ್ಕಳಿಗೂ ಮೊಟ್ಟೆ ತಿನ್ನಲು ನಾವು ಒತ್ತಡ ಹೇರಿಲ್ಲ. ತಜ್ಞರು ಒಪ್ಪಿದರೆ ಮುಂದಿನ ದಿನಗಳಲ್ಲಿ ಯೋಜನೆ ಜಾರಿ ಮಾಡುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.
Karnataka government decides to recruit 15000 teachers for the academic years 2021 and 2022 states education minister Nagesh at Mandya.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm