ಬ್ರೇಕಿಂಗ್ ನ್ಯೂಸ್
12-12-21 04:41 pm HK Desk news ಕರ್ನಾಟಕ
ಹುಬ್ಬಳ್ಳಿ, ಡಿ.12 : ಮತಾಂತರ ನಿಷೇಧ ಕಾಯ್ದೆ ಜಾರಿಯಾದರೆ ಕ್ರಿಶ್ಚಿಯನ್ನರು ಆತಂಕ ಪಡುವ ಅಗತ್ಯವಿಲ್ಲ. ಅವರ ಧಾರ್ಮಿಕ ಆಚರಣೆಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಬಡತನ, ಮನೆಯ ಪರಿಸ್ಥಿತಿ ದುರುಪಯೋಗ ಪಡಿಸಿಕೊಂಡು ಹಾಗೂ ಆಮಿಷ ಒಡ್ಡಿ ಮತಾಂತರ ನಡೆಸುವವರಿಗೆ ಕಡಿವಾಣ ಹಾಕಲು ಈ ಕಾಯ್ದೆ ತರಲಾಗುತ್ತಿದೆ. ಮತಾಂತರ ನಿಷೇಧ ತರಬೇಕು ಎನ್ನುವ ಬಗ್ಗೆ ಸ್ವಾತಂತ್ರ್ಯ ಬಂದ ಕಾಲದಿಂದಲೂ ಚರ್ಚೆಯಾಗುತ್ತಿದೆ. ಮತಾಂತರ ನಿಷೇಧ ಕಾಯ್ದೆ ತರಬೇಕು ಅನ್ನುವುದು ಬಹಳಷ್ಟು ಜನರ ಒತ್ತಾಯವೂ ಆಗಿದೆ ಎಂದು ಹೇಳಿದರು.
ಕಾಯ್ದೆ ರಚಿಸುವ ಬಗ್ಗೆ ಕಾನೂನು ಇಲಾಖೆಯಿಂದ ಕರಡು ಸಿದ್ಧಪಡಿಸಿದ್ದು, ಡಿ.13ರಿಂದ ನಡೆಯುವ ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಲಿದೆ. ಹಿಂದು, ಮುಸ್ಲಿಂ, ಸಿಖ್, ಕ್ರಿಶ್ಚಿಯನ್, ಜೈನ ಹೀಗೆ ಎಲ್ಲ ಧರ್ಮಗಳಿಗೂ ಸಂವಿಧಾನದ ಆಶ್ರಯ ಇದೆ. ಯಾರ ಧಾರ್ಮಿಕ ಭಾವನೆಗಳಿಗೂ ಧಕ್ಕೆ ತರದಂತೆ ಕ್ರಮ ಕೈಗೊಳ್ಳಲಾಗುವುದು. ಕಾಯ್ದೆ ಜಾರಿ ಬಗ್ಗೆ ಕ್ರಿಶ್ಚಿಯನ್ನರು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈಗಾಗ್ಲೇ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆಯನ್ನು ಪ್ರಸ್ತಾಪ ಮಾಡಲಿದೆ. ಅಧಿವೇಶನದಲ್ಲಿ ಶಾಸಕರ ಚರ್ಚೆಗೂ ಅವಕಾಶ ನೀಡಲಿದೆ ಎನ್ನುವ ಮಾಹಿತಿಗಳಿವೆ. ಆದರೆ, ಕಾಯ್ದೆ ಜಾರಿ ಬಗ್ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಅಧಿವೇಶನದಲ್ಲಿ ತಕ್ಕ ಉತ್ತರ ನೀಡಲು ಸಜ್ಜಾಗಿದ್ದಾರೆ.
Chief Minister Basavaraj Bommai said the proposed Anti-Conversion Law that the state government intends to introduce in the winter session of Assembly (scheduled to start from December 13) is not intended to target any community. Speaking to media persons here on Sunday, he said religious conversion is not good for society. “It (religious conversion) leaves behind a bad taste among the individual’s family and also the society,” he said, and added that the law is being brought only to prevent forced and luring conversion. Poor people and Dalits are being converted into other communities by some individuals taking advantage of the social and financial condition of such families.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm