ಬ್ರೇಕಿಂಗ್ ನ್ಯೂಸ್
14-12-21 01:55 pm HK Desk news ಕರ್ನಾಟಕ
ಬೆಳಗಾವಿ, ಡಿ.14 : ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಬಿಜೆಪಿಗೇ ಸಡ್ಡು ಹೊಡೆದಿದ್ದಾರೆ. ತನ್ನ ತಮ್ಮನನ್ನು ಪಕ್ಷೇತರ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ್ದು, ತಮ್ಮನನ್ನು ಗೆಲ್ಲಿಸಿಕೊಂಡಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿಯೂ ಗೆಲುವು ಕಂಡಿದ್ದಾರೆ. ಆಜಡಳಿತಾರೂಢ ಬಿಜೆಪಿಗೆ ಇದರಿಂದ ತೀವ್ರ ಮುಖಭಂಗವಾಗಿದೆ.
ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರೂ ಗೆಲ್ಲುವ ಅವಕಾಶ ಇತ್ತು. ತನ್ನ ತಮ್ಮನಿಗೆ ಬಿಜೆಪಿ ಟಿಕೆಟ್ ನೀಡುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದರು. ಆದರೆ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಅವರಿಗೆ ಟಿಕೆಟ್ ನೀಡಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ತನ್ನ ರಾಜಕೀಯ ವೈರಿ ಲಕ್ಷ್ಮೀ ಹೆಬ್ಬಾಳಕರ್ ಬಣದ ವ್ಯಕ್ತಿಯಾಗಿದ್ದರಿಂದ ಕಾಂಗ್ರೆಸ್ ಸೋಲಿಸುವುದೇ ತನ್ನ ಗುರಿಯೆಂದು ರಮೇಶ್ ಜಾರಕಿಹೊಳಿ ತೊಡೆ ತಟ್ಟಿದ್ದರು.



ಕೊನೆ ಕ್ಷಣದಲ್ಲಿ ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿ ಪರವಾಗಿಯೇ ರಮೇಶ್ ಜಾರಕಿಹೊಳಿ ಪ್ರಚಾರ ಕಾರ್ಯವನ್ನೂ ಕೈಗೊಂಡಿದ್ದರು. ಆದರೆ, ಫಲಿತಾಂಶದಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಅತಿ ಹೆಚ್ಚು ಮತ ಪಡೆದ ಕಾಂಗ್ರೆಸ್ ಅಭ್ಯರ್ಥಿಯನ್ನು ಮೊದಲಿಗೆ ವಿಜಯಿ ಎಂದು ಘೋಷಣೆ ಮಾಡಿದರೆ, ಎರಡನೇ ಅತಿ ಹೆಚ್ಚು ಮತ ಗಳಿಸಿದ ಲಖನ್ ಜಾರಕಿಹೊಳಿ ಅವರನ್ನೂ ವಿಜಯಿ ಎಂದು ಘೋಷಣೆ ಮಾಡಲಾಗಿದೆ. ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲನುಭವಿಸಿದ್ದು ಆಡಳಿತಾರೂಢರಿಗೆ ತೀವ್ರ ಮುಖಭಂಗ ಆಗಿದೆ.
Belagavi Ramesh Jarkiholi makes major victory over BJP Candidate for MLC Elections. It has been a great victory over Bjp by Ramesh Jarkiholi in Belagavi, Karnataka.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 07:05 pm
HK News Staffer
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm