ಬ್ರೇಕಿಂಗ್ ನ್ಯೂಸ್
15-12-21 02:36 pm HK Desk news ಕರ್ನಾಟಕ
ಮೈಸೂರು, ಡಿ.15 : ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ಅವರ ಆಯಸ್ಸು ಫೆ.14 ರ ವರೆಗೆ ಮಾತ್ರ. ಅದರ ನಂತರ ಮತ್ತೊಬ್ಬ ಸಿಎಂ ಬರಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಲಕ್ಷ್ಮಣ್, ಸಿಎಂ ಆದ ನಂತರ ಬೊಮ್ಮಾಯಿ ಅವರು ಕುಂಟುತ್ತಿದ್ದಾರೆ. ಕುಂಟುತ್ತಲೇ ಇದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಒಬ್ಬ ವಿಫಲ ಸಿಎಂ. ಅವರು ಸಿಎಂ ಆದ ನಂತರ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. 40 ಶೇ. ಕಮಿಷನ್ ಸರ್ಕಾರವಾಗಿದೆ ಎನ್ನೋದನ್ನು ಗುತ್ತಿಗೆದಾರರೇ ಹೇಳಿದ್ದಾರೆ. ಫೆಬ್ರವರಿಯಲ್ಲಿ ರಾಜ್ಯಕ್ಕೆ ಹೊಸ ಸಿಎಂ ಬರಲಿದ್ದು ಆನಂತರದ ಸಿಎಂ ಆಯುಷ್ಯ ಕೂಡ ಆರು ತಿಂಗಳಷ್ಟೇ ಇರುತ್ತದೆ. ಬಲ್ಲ ಮೂಲಗಳಿಂದ ನಮಗೆ ಮಾಹಿತಿ ಸಿಕ್ಕಿದ್ದು ಬಸವರಾಜ ಬೊಮ್ಮಾಯಿ ಅವರನ್ನು ತೆಗೆದು ಡಮ್ಮಿ ರಬ್ಬರ್ ಸ್ಟ್ಯಾಂಪ್ ಸಿಎಂ ಒಬ್ಬರನ್ನು ಮಾಡುತ್ತಾರೆ. ಬಿಜೆಪಿ ನಾಯಕರೇ ನಮಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನು ಮಾಧ್ಯಮದವರಿಗೆ ಹೇಳಲು ಸಹ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದಂತೂ ಖಚಿತ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಹೇಳಿದ್ದಾರೆ.
ರಾಜ್ಯ ಸರಕಾರದ ವೈಫಲ್ಯ ಮುಚ್ಚಿ ಹಾಕಲು ರಾಜ್ಯದಲ್ಲಿ ಭಾವನಾತ್ಮಕ ವಿಚಾರಗಳನ್ನು ಕೆದಕುವ ಕೆಲಸ ಮಾಡಲಾಗುತ್ತಿದೆ. ಬಿಜೆಪಿಯವರು ಅಧಿವೇಶನದಲ್ಲಿ ಗದ್ದಲ ಎಬ್ಬಿಸಿ ತಮ್ಮ ಹಿಡನ್ ಅಜೆಂಡಾವನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸ್ವಯಂಕೃತ ಅಪರಾಧದಿಂದಾಗಿ ಜೆಡಿಎಸ್ ಪಕ್ಷ ನಿರ್ನಾಮವಾದರೆ ಅದಕ್ಕೆ ಎಚ್.ಡಿ. ಕುಮಾರಸ್ವಾಮಿಯೇ ಕಾರಣ. ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಒಂದು ತತ್ವ ಸಿದ್ಧಾಂತ ಇದೆ. ನಮ್ಮದು ಜಾತ್ಯಾತೀತ ಪಕ್ಷ, ಬಿಜೆಪಿ ಕಮ್ಯುನಲ್ ಪಕ್ಷ. ಜೆಡಿಎಸ್ ತತ್ವ ಸಿದ್ದಾಂತ ಏನು ? ಅದನ್ನು ಮೊದಲು ಸ್ಪಷ್ಟಪಡಿಸಿ. ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಬಿಜೆಪಿ ಜತೆ ಕೈಜೋಡಿಸಿ ನೀವು ನಿರ್ನಾಮ ಆಗುತ್ತೀರಾ. ಒಕ್ಕಲಿಗ ಸಮುದಾಯದವರು ನಿಮ್ಮ ಜೊತೆ ಇಲ್ಲ. ಇದು ಈ ಚುನಾವಣೆಯಲ್ಲಿ ಸಾಬೀತಾಗಿದೆ ಎಂದು ಹೇಳಿದ ಲಕ್ಷ್ಮಣ್, ಬಿಜೆಪಿ ಅಭ್ಯರ್ಥಿಯ ಸೋಲು ವೈಯಕ್ತಿಕವಾಗಿ ನೋವಾಗಿದೆ. ಬಿಜೆಪಿ ಅಭ್ಯರ್ಥಿ ಸೋಲಿಗೆ ಬಿಜೆಪಿಯವರೇ ಕಾರಣ. ದಲಿತ ಸಮುದಾಯದ ಅಭ್ಯರ್ಥಿ ವಿರುದ್ಧ ದೂರು ನೀಡಿದ್ದು ಬಿಜೆಪಿ ಸೋಲಿಗೆ ಕಾರಣ. ಎಸ್.ಟಿ ಸೋಮಶೇಖರ್ ಜೆಡಿಎಸ್ ಅಭ್ಯರ್ಥಿಯ ಬಗ್ಗೆ ವೈಯಕ್ತಿಕ ಟೀಕೆ ಮಾಡಿದ್ದು
ಒಕ್ಕಲಿಗ ಸಮುದಾಯ ಹಾಗೂ ದಲಿತ ಸಮುದಾಯದ ಆಕ್ರೋಶ ಕಾರಣ. ಬಿಜೆಪಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿರುವ ಪಕ್ಷ. ರಘು ಅವರ ತಲೆ ಮೇಲೆ ಕಲ್ಲು ಹಾಕಿರುವುದು ಬಿಜೆಪಿ. ನಿಮ್ಮ ಮುಖಂಡರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ. ನಿಮ್ಮ ಪಕ್ಷದವರೇ ನಿಮ್ಮ ವಿರುದ್ದ ಮತ ಹಾಕಿಸಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಮೇಶ್ ಜಾರಕಿಹೊಳಿ ಅಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಕಾರಣವಾಗಿದ್ದಾರೆ. ಅವರ ವಿರುದ್ದ ಪಕ್ಷ ಕ್ರಮ ಕೈಗೊಳ್ಳುವ ಕೆಲಸ ಮಾಡಲಿ. ರಮೇಶ್ ಜಾರಕಿಹೊಳಿ ತೊಡೆತಟ್ಟಿ ಲಕ್ಷ್ಮಿ ಪಟಾಕಿ ಸಿಡಿಸುತ್ತೀನಿ ಅಂದಿದ್ರಲ್ಲಾ.. ಒಬ್ಬ ಮಹಿಳೆ ಅನ್ನೋದನ್ನು ನೋಡದೆ ಮಾತನಾಡಿದರು. ಲಖನ್ ಜಾರಕಿಹೊಳಿ ನಿಲ್ಲಿಸಿದ್ದು ಯಾರು ? ಅವರೇ ತಮ್ಮ ಪಕ್ಷದ ಅಭ್ಯರ್ಥಿಗೆ ಸೋಲಿಗೆ ಕಾರಣರಾಗಿದ್ದಾರೆ. ಈಶ್ವರಪ್ಪ ಎಲ್ಲಿ ಹೋಗಿದ್ದಾರೆ. ಮೈಸೂರಿಗೆ ಬಂದರೆ ಅವರಿಗೆ ಚಂಡಿ ಹಿಡಿಯುತ್ತದೆ. ಈಗ ಏಕೆ ಅವರು ಕ್ರಮ ಕೈಗೊಳ್ಳುತ್ತಿಲ್ಲ ವ್ಯಂಗ್ಯ ಮಾಡಿದ್ದಾರೆ.
Feb 14 is the last day for Bommai as CM of Karnataka later where Rubber Stam Cm will be appointed for Karnataka says Kpcc spokesperson Laxshman.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm