ಬ್ರೇಕಿಂಗ್ ನ್ಯೂಸ್
17-12-21 02:37 pm HK Desk news ಕರ್ನಾಟಕ
ಬೆಂಗಳೂರು, ಡಿ.17 : ರಾಜ್ಯ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಪದವಿ ಹಂತದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆಯನ್ನು ಕಡ್ಡಾಯ ಮಾಡುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ಹೈಕೋರ್ಟ್ ಮುಖ್ಯ ನ್ಯಾಯಾಧೀಶ ರಿತುರಾಜ್ ಅವಸ್ಥಿ ನೇತೃತ್ವದ ಪೀಠ ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ್ದು, ರಾಜ್ಯ ಸರಕಾರ ಪದವಿ ಹಂತದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವಂತಿಲ್ಲ. ಈಗಾಗ್ಲೇ ವಿದ್ಯಾರ್ಥಿಗಳು ಯಾವ ಭಾಷೆಯನ್ನು ಕಲಿಯಲು ಆಯ್ಕೆ ಮಾಡಿಕೊಂಡಿದ್ದಾರೋ, ಅದನ್ನು ಮುಂದುವರಿಸಬಹುದು. ಮುಂದಿನ ಆದೇಶದ ವರೆಗೆ ಇದೇ ಸ್ಥಿತಿಯನ್ನು ಕಾಯ್ದುಕೊಳ್ಳಬೇಕು ಎಂದು ತೀರ್ಪು ನೀಡಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ನೆಪದಲ್ಲಿ ರಾಜ್ಯ ಸರಕಾರ ಕನ್ನಡವನ್ನು ಪದವಿ ಹಂತದಲ್ಲಿ ಮೊದಲ ಭಾಷೆಯಾಗಿ ಕಲಿಯುವುದನ್ನು ಕಡ್ಡಾಯಗೊಳಿಸಿದೆ. ಸರಕಾರಿ ಕಾಲೇಜುಗಳಲ್ಲಿ ಈಗಾಗಲೇ ಕನ್ನಡ ಕಲಿಕೆಯನ್ನು ಜಾರಿಗೊಳಿಸಿದ್ದು, ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಆಕ್ಷೇಪ ಕೇಳಿಬಂದಿದೆ. ಸಂಸ್ಕಾರ ಭಾರತಿ (ಕರ್ನಾಟಕ) ಟ್ರಸ್ಟ್ ಸೇರಿದಂತೆ ಸಂಸ್ಕೃತ ಭಾಷೆ ಕಲಿಸುವ ಇತರ ಮೂರು ಶಿಕ್ಷಣ ಸಂಸ್ಥೆಗಳು ಮತ್ತು ಐದು ಮಂದಿ ವಿದ್ಯಾರ್ಥಿಗಳು ರಾಜ್ಯ ಸರಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟಿಗೆ ಪಿಐಎಲ್ ಅರ್ಜಿ ಹಾಕಿದ್ದರು.
ರಾಜ್ಯ ಸರಕಾರದ ಪರವಾಗಿ ಹಾಜರಾಗಿದ್ದ ಅಡ್ವಕೇಟ್ ಜನರಲ್ ಪ್ರಭುಲಿಂಗ ನವಾದಗಿ, ಅರ್ಜಿ ಸಲ್ಲಿಸಿರುವ ಐದು ವಿದ್ಯಾರ್ಥಿಗಳು 12ನೇ ತರಗತಿ ವರೆಗೆ ಕನ್ನಡದಲ್ಲಿಯೇ ಕಲಿತಿದ್ದು, ಪದವಿ ಹಂತದಲ್ಲಿ ಕನ್ನಡ ಕಲಿಯುವುದಕ್ಕೆ ತೊಂದರೆಯಿಲ್ಲ ಎಂದಿದ್ದಾರೆ ಎಂಬುದಾಗಿ ಕೋರ್ಟ್ ಗಮನಕ್ಕೆ ತಂದರು. ಇದರ ಬಗ್ಗೆ ಆಕ್ಷೇಪ ಎತ್ತಿದ ವಿದ್ಯಾರ್ಥಿಗಳ ಪರ ವಕೀಲ ಶ್ರೀಧರ್ ಪ್ರಭು, ಕೋರ್ಟ್ ಈಗಾಗಲೇ ಪದವಿ ಹಂತದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸದಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಈ ಸಾಲಿನ ವಿದ್ಯಾರ್ಥಿಗಳ ಪ್ರವೇಶಾತಿ ವಿಚಾರದಲ್ಲಿ ಗೊಂದಲ ಆಗದಂತೆ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಕೇಳಿಕೊಂಡರು.
ಕೇಂದ್ರ ಸರಕಾರದ ಪರ ಹಾಜರಾಗಿದ್ದ ಅಡಿಶನಲ್ ಸಾಲಿಸಿಟರ್ ಜನರಲ್ ಎಂ.ಬಿ.ನರಗುಂದ್, ಎನ್ ಇಪಿ ಜಾರಿ ವಿಚಾರದಲ್ಲಿ ಕೇಂದ್ರ ಸರಕಾರ ಕನ್ನಡ ಕಲಿಕೆಯನ್ನು ಉನ್ನತ ಶಿಕ್ಷಣದಲ್ಲಿ ಕಡ್ಡಾಯಗೊಳಿಸಿರುವುದು ಏಕೆ ಎಂಬ ಬಗ್ಗೆ ಸ್ಪಷ್ಟನೆ ನೀಡಲು ತನ್ನಿಂದ ಸಾಧ್ಯವಾಗದು. ಈ ಬಗ್ಗೆ ಉತ್ತರ ನೀಡಲು ನಾಲ್ಕು ವಾರಗಳ ಅವಕಾಶ ನೀಡಬೇಕು ಎಂದು ಕೇಳಿದ್ದು ಅದಕ್ಕೆ ಕೋರ್ಟ್ ಒಪ್ಪಿಗೆ ನೀಡಿ ವಿಚಾರಣೆಯನ್ನು ಮುಂದೂಡಿದೆ.
The Karnataka High Court has directed the state government not to make Kannada language compulsory for degree students until further orders.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm