ಬ್ರೇಕಿಂಗ್ ನ್ಯೂಸ್
17-12-21 11:11 pm HK Desk news ಕರ್ನಾಟಕ
ಬೆಳಗಾವಿ, ಡಿ.17 : ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾಗಿರುವುದನ್ನು ವಿರೋಧಿಸಿ ಭಾರತೀಯ ಕ್ರಿಸ್ತ ಒಕ್ಕೂಟದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರು ಪ್ರಶಾಂತ ಜತ್ತನ್ನ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಭಟನಾ ನಿರತ ಕ್ರಿಶ್ಚಿಯನ್ನರ ಒಕ್ಕೂಟದ ಪ್ರತಿನಿಧಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರಕಾರ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಜನರ ಗಮನ ಬೇರೆಡೆ ಸೆಳೆಯುವುದಕ್ಕಾಗಿ ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದೆ. ಲವ್ ಜಿಹಾದ್, ಮತಾಂತರ ವಿಚಾರಗಳನ್ನು ಮುಂದಿಟ್ಟು ಹಿಡನ್ ಅಜೆಂಡಾವನ್ನು ಸಾಧಿಸುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಕಾಂಗ್ರೆಸ್ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನೂರು ಶತ ಅಧಿಕಾರಕ್ಕೆ ಬರಲಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಇದರ ಮುನ್ಸೂಚನೆ ಸಿಕ್ಕಿದೆ. ಒಟ್ಟು 94 ಸಾವಿರ ಮತಗಳಲ್ಲಿ 44 ಸಾವಿರ ಮತ ಕಾಂಗ್ರೆಸ್ಗೆ ಲಭಿಸಿದೆ. ಬಿಜೆಪಿಗೆ ಸಿಕ್ಕಿದ್ದು 37 ಸಾವಿರ. ಜೆಡಿಎಸ್ ಹತ್ತು ಸಾವಿರ ಮತ ಗಳಿಸಿದೆ. ಇದು ಜನರ ಭಾವನೆ ಕಾಂಗ್ರೆಸ್ ಪರವಾಗಿರುವುದನ್ನು ಸೂಚಿಸಿದೆ ಎಂದರು.
ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಈಗ ಮತಾಂತರ ನಿಷೇಧ ಕಾಯ್ದೆಯ ಅಗತ್ಯ ಇದೆಯೇ.. ಬಲವಂತದ ಮತಾಂತರ ನಡೆಯುತ್ತಿದ್ದರೆ ಪೊಲೀಸ್ ಕೇಸು ದಾಖಲಿಸಿ, ಅರೆಸ್ಟ್ ಮಾಡಬಹುದು. ಕಾನೂನಿನಲ್ಲಿ ಅವಕಾಶ ಇದೆ ಎಂದ ಸಿದ್ದರಾಮಯ್ಯ, ಗೂಳಿಹಟ್ಟಿ ಶೇಖರ್ ಮತಾಂತರ ವಿಚಾರದ ಬಗ್ಗೆ ಹೇಳಿದ್ದಾರೆ. ಆ ಬಗ್ಗೆ ಪೊಲೀಸ್ ದೂರು ಯಾಕೆ ಕೊಟ್ಟಿಲ್ಲ. ಅವರ ತಾಯಿಯೂ ದೂರು ಕೊಟ್ಟಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದರು.
ನಾವು ಅಧಿಕಾರಕ್ಕೆ ಬಂದಲ್ಲಿ ಈಗ ಮಸೂದೆ ಪಾಸ್ ಮಾಡಿದರೂ ಕೂಡಲೇ ಅದನ್ನು ರದ್ದು ಪಡಿಸುತ್ತೇವೆ ಎಂದು ಹೇಳಿದ ಸಿದ್ದರಾಮಯ್ಯ, ಅದಕ್ಕೆ ಅವಕಾಶ ಬರುವುದಿಲ್ಲ. ಕಾನೂನು ಆಗಲು ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.
ಕ್ರಿಶ್ಚಿಯನ್ ಒಕ್ಕೂಟದ ಪ್ರತಿನಿಧಿಗಳು ಪ್ರತಿಭಟನೆ ಬಳಿಕ ಈ ಕುರಿತ ಮನವಿಯನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಮೂಲಕ ಸರಕಾರಕ್ಕೆ ಸಲ್ಲಿಸಿದ್ದಾರೆ.
Expressing opposition to the proposed anti-conversion Bill by the State Government the Christian community under the leadership of Prashanth Jathanna State president of Bharathiya Christa Okkuta and in association with UFC Belagavi staged a hunger strike during the winter session in front of Suvarna Soudha, Belagavi on December 17.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm