ಬ್ರೇಕಿಂಗ್ ನ್ಯೂಸ್
18-12-21 03:16 pm HK Desk news ಕರ್ನಾಟಕ
ಬೆಳಗಾವಿ, ಡಿ.18 : ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅತಿರೇಕದ ಘಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ನಿರ್ದಾಕ್ಷಿಣ್ಯ ಕ್ರಮಕ್ಕೆ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.
ಆ ಪುಂಡರನ್ನು ಸೆದೆ ಬಡಿಯುತ್ತೇವೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಗೃಹ ಸಚಿವರಿಗೆ ಸೂಚಿಸಿದ್ದೇನೆ. ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಈ ಸಂಬಂಧ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ.
ಕಲ್ಲು ತೂರಾಟ ಮಾಡುವುದು, ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾಗೂ ಸರ್ಕಾರಿ ವಾಹನಗಳಿಗೆ ಹಾನಿ ಉಂಟುಮಾಡುವುದು ಕಾನೂನು ಬಾಹಿರ. ಇಂಥ ಘಟನೆ ಪುನಃ ಜರುಗದಂತೆ ಇನ್ನಷ್ಟು ಕಠಿಣ ಹಾಗೂ ದೀರ್ಘಾವಧಿ ಕ್ರಮಗಳನ್ನು ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ಪ್ರವೃತ್ತಿ ಸರಿಯಲ್ಲ.
ರಾಷ್ಟ್ರಭಕ್ತರ ಪ್ರತಿಮೆ ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ದೇಶಭಕ್ತರು ಎಲ್ಲಾ ಸಮುದಾಯಕ್ಕೆ ಸೇರಿದವರು. ದೇಶಕ್ಕಾಗಿ ತ್ಯಾಗ ಮಾಡಿದವರು. ಪ್ರತಿಮೆ ಸ್ಥಾಪಿಸುವುದು ಅವರನ್ನು ಗೌರವಿಸಬೇಕೆಂದೇ ವಿನಃ ಅವರ ಮುಖಾಂತರ ಸಮಾಜದಲ್ಲಿ ಕ್ಷೋಭೆ ಉಂಟು ಮಾಡುವುದಲ್ಲ. ಈ ರೀತಿಯ ವರ್ತನೆ ಎಳ್ಳಷ್ಟೂ ಸರಿಯಲ್ಲ. ಕೆಲವು ಪುಂಡರು ಈ ರೀತಿ ಮಾಡುತ್ತಿದ್ದು ಅವರನ್ನು ಸದೆ ಬಡಿಯಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿಯೇ ಈ ಕೃತ್ಯ ನಡೆದಿರುವುದರಿಂದ ಈ ರೀತಿಯ ಘಟನೆ ಉದ್ದೇಶಪೂರ್ವಕವೇ, ಅಚಾನಕ್ಕಾಗಿ ನಡೆದಿತ್ತೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
Chief Minister Basavaraj Bommai has strongly condemned vandalism by miscreants at Belagavi and assured stringent action against the persons responsible at the earliest. The statue of Sangolli Rayanna installed at Kanakdas Colony in the Angol suburb was reportedly vandalized by miscreants in the early hours of Saturday.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 07:05 pm
HK News Staffer
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm