ಬ್ರೇಕಿಂಗ್ ನ್ಯೂಸ್
23-12-21 02:55 pm HK Desk news ಕರ್ನಾಟಕ
ಬೆಂಗಳೂರು, ಡಿ.23 : ಕ್ರಿಸ್‌ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ನಡೆಸುವ ಆರೋಪದ ವಿಚಾರ ಹೈಕೋರ್ಟ್ ಮೆಟ್ಟಿಲೇರಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಗಣಪತಿ ಕಟ್ಟೆ ರಸ್ತೆಯ ಎಸ್ತೆಲಾ ಲೂಯಿಸ್ ಎಂಬವರು ತಮ್ಮ ಮನೆಯಲ್ಲಿ ಹಮ್ಮಿಕೊಂಡಿರುವ ಕ್ರಿಸ್ಮಸ್ ಪ್ರಾರ್ಥನೆಗೆ ಹೈಕೋರ್ಟ್ ಮೆಟ್ಟಿಲೇರಿ ಅನುಮತಿ ಪಡೆದಿದ್ದಾರೆ.
ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ಚಟುವಟಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ಎಸ್ತೆಲಾ ಅವರಿಗೆ ಜಾರಿಗೊಳಿಸಿದ್ದ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿದ್ದು ಷರತ್ತು ಬದ್ಧ ಅನುಮತಿ ನೀಡಿದೆ.
ವಿಚಾರಣೆ ವೇಳೆ, ಅರ್ಜಿಗೆ ಆಕ್ಷೇಪಣೆ ವ್ಯಕ್ತಪಡಿಸಿದ ಸರ್ಕಾರಿ ವಕೀಲ ವಿನೋದ್ ಕುಮಾರ್, ‘ಅರ್ಜಿದಾರರು ಕ್ರಿಸ್‌ಮಸ್ ಪ್ರಾರ್ಥನೆ ಹೆಸರಿನಲ್ಲಿ ಅನ್ಯ ಧರ್ಮದವರನ್ನು ಕ್ರೈಸ್ತ ಮತಕ್ಕೆ ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆ ಕಾರಣಕ್ಕಾಗಿಯೇ ಪೊಲೀಸರು ನೋಟಿಸ್ ನೀಡಿದ್ದಾರೆ. ಆದ್ದರಿಂದ, ಅರ್ಜಿದಾರರ ಮನೆಯಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಗೆ ಅನುಮತಿ ನೀಡಬಾರದು’ ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರ ಪರ ವಕೀಲರು, ‘ಎಸ್ತೆಲಾ ಮನೆಯಲ್ಲಿ ಕ್ರಿಸ್ಮಸ್ ಪಾರ್ಥನೆ ವೇಳೆ ಮತಾಂತರ ಚಟುವಟಿಕೆ ನಡೆಯುವುದಿಲ್ಲ. ಈ ಬಗ್ಗೆ ಯಾರು ಕೂಡ ಸಂಶಯ ಪಡುವುದು ಬೇಡ. ಅಲ್ಲಿ ಕೇವಲ ಕ್ರಿಸ್ಮಸ್ ಪ್ರಾರ್ಥನೆ ಅಷ್ಟೇ ನಡೆಯಲಿದೆ ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಅರ್ಜಿದಾರರು ತಮ್ಮ ಮನೆಯಲ್ಲಿ ಕ್ರಿಸ್‌ಮಸ್ ಪ್ರಾರ್ಥನೆ ಮಾಡಬಹುದು. ಈ ಸಂದರ್ಭದಲ್ಲಿ ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕ ತೊಂದರೆ ಉಂಟು ಮಾಡಬಾರದು. ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸಬಾರದು’ ಎಂದು ಷರತ್ತು ವಿಧಿಸಿ ಅನುಮತಿ ನೀಡಿತು. ‘ಪ್ರಾರ್ಥನೆ ಸಂದರ್ಭದಲ್ಲಿ ಪೊಲೀಸರು ಮನೆಯ ಮೇಲೆ ನಿಗಾ ವಹಿಸವುದಕ್ಕೂ ಅವಕಾಶ ಇದೆ’ ಎಂದೂ ನ್ಯಾಯಪೀಠ ಹೇಳಿದೆ.
Kundapura Alleged of Coversion in the name of Christmas Prayer, woman gets order to conduct prayers at home from High court.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 01:08 pm
Mangalore Correspondent
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
08-02-25 01:00 pm
HK News Desk
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm