ಬ್ರೇಕಿಂಗ್ ನ್ಯೂಸ್
30-12-21 09:37 pm HK Desk news ಕರ್ನಾಟಕ
ಬೆಂಗಳೂರು, ಡಿ.30 : ಕನ್ನಡ ಪರ ಹೋರಾಟಗಾರರ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿರುವ ಸಂಧಾನ ಮಾತುಕತೆ ಯಶಸ್ವಿಯಾಗಿದ್ದು ಡಿ.31ರ ಕರ್ನಾಟಕ ಬಂದ್ ಕರೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.
ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಉದ್ಧಟತನವನ್ನು ವಿರೋಧಿಸಿ ಮತ್ತು ಎಂಇಎಸ್ ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧಿಸಬೇಕೆಂದು ಆಗ್ರಹಿಸಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿತ್ತು.
ಒಂದೆಡೆ ಎಂಇಎಸ್ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ, ಮತ್ತೊಂದೆಡೆ ಓಮಿಕ್ರಾನ್ ವೈರಸ್ ಪ್ರಸರಣದ ಹಿನ್ನೆಲೆಯಲ್ಲಿ ರಾಜ್ಯ ಬಂದ್ ನಡೆಸದಂತೆ ರಾಜ್ಯ ಸರಕಾರ ಸಾಕಷ್ಟು ಬಾರಿ ಮನವಿ ಮಾಡಿತ್ತು. ಸಿಎಂ ಬೊಮ್ಮಾಯಿ ಸ್ವತಃ ಮನವಿ ಮಾಡಿಕೊಂಡಿದ್ದರೂ ಕನ್ನಡ ಪರ ಸಂಘಟನೆಗಳು ಹಿಂದೆ ಸರಿದಿರಲಿಲ್ಲ. ಸಿಎಂ ಬೊಮ್ಮಾಯಿ ಮಾಧ್ಯಮಗಳ ಮೂಲಕ ಬಂದ್ ಹಿಂಪಡೆಯುವಂತೆ ಮನವಿ ಮಾಡಿದ್ದಲ್ಲದೇ ಎಂಇಎಸ್ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಿರುವ ಬಗ್ಗೆ ಹೇಳಿದ್ದರು. ನಮ್ಮ ಮನವಿ ಓಗೊಡದೆ ಕೋವಿಡ್ ನಿಯಮ ಮೀರಿ ಬಂದ್ ನಡೆಸಿದಲ್ಲಿ ಸೂಕ್ತ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದರು. ಒಂದಷ್ಟು ಹೋರಾಟಗಾರರು ಬಂದ್ ನಿಂದ ಹಿಂದೆ ಸರಿದರೆ, ವಾಟಾಳ್ ಪಕ್ಷದ ನಾಗರಾಜ್ ಸೇರಿ ಕೆಲವರು ಮಾತ್ರ ಬಂದ್ ಕರೆಯಿಂದ ಹಿಂದೆ ಸರಿದಿರಲಿಲ್ಲ.
ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆಯ ಮೇರೆಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ಸಿಎಂ ಕಚೇರಿಗೆ ಭೇಟಿ ನೀಡಿದ್ದರು. ಪ್ರಸ್ತುತ ಪರಿಸ್ಥಿತಿಯಲ್ಲಿ ಬಂದ್, ಪ್ರತಿಭಟನಾ ರ್ಯಾಲಿಗಳಿಂದ ಉಂಟಾಗಬಲ್ಲ ತೊಂದರೆಗಳ ಬಗ್ಗೆ ಸಿಎಂ ಬೊಮ್ಮಾಯಿ ಮನವರಿಕೆ ಮಾಡಿದ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ಬಂದ್ ಕರೆಯಿಂದ ಹಿಂದೆ ಸರಿದಿದ್ದಾರೆ.
ಸಿಎಂ ಬೊಮ್ಮಾಯಿ ಭೇಟಿ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಎಂಇಎಸ್ ಸಂಘಟನೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.ಎಂಇಎಸ್ ಸಂಘಟನೆ ಬ್ಯಾನ್ ಆಗಲು ಏನೆಲ್ಲ ಮಾಡಬೇಕೋ ಅದನ್ನು ಮಾಡುತ್ತೇವೆ ಎಂದಿದ್ದಾರೆ. ನಾಳೆ ಬಂದ್ ಮಾಡಿದ್ರೆ ಹೊಸ ವರ್ಷಾಚರಣೆಗೆ ತೊಂದರೆ ಆಗುತ್ತದೆ ಎಂದು ಹೇಳಿದರು. ನಾವು ಸಿಎಂ ಮಾತಿಗೆ ಗೌರವ ನೀಡಿದ್ದೇವೆ. ಹೀಗಾಗಿ ನಾಳೆ ನಡೆಯಬೇಕಿದ್ದ ಕರ್ನಾಟಕ ಬಂದ್ ಅನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವೆ. ಈ ಬಗ್ಗೆ ಸಭೆ ನಡೆಸಿ ಕರ್ನಾಟಕ ಬಂದ್ ಬಗ್ಗೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
Kannada organisations on Thursday, December 30, withdrew the Karnataka bandh called by them on December 31, demanding a complete ban on the activities of the Maharashtra Ekikaran Samithi (MES) which has been campaigning for long to merge Marathi speaking regions in Belagavi with Maharashtra. Leaders of several Kannada outfits under the leadership of Vatal Nagaraj, the leader of the Kannada Okkuta, met Chief Minister Basavaraj Bommai on the evening of December 30, ahead of withdrawing the bandh.
26-11-24 10:46 pm
Bangalore Correspondent
Shivamogga, Monkey fever, Dinesh Gundu Rao: ಮ...
26-11-24 10:23 pm
BJP, Vijayendra: ಉಪ ಚುನಾವಣೆ ಸೋಲು ; ಪಕ್ಷದ ಕಾರ್...
26-11-24 06:56 pm
MLA Gaviyappa, Congress: ಗ್ಯಾರಂಟಿ ಸ್ಕೀಂನಿಂದಾಗ...
26-11-24 06:11 pm
Davanagere News, Heart Attack: ಗಂಡ ಹೃದಯಾಘಾತಕ್...
26-11-24 11:52 am
27-11-24 02:00 pm
HK News Desk
ರಸ್ತೆ ಬದಿ ಮಲಗಿದ್ದ ಅಲೆಮಾರಿ ಗುಂಪಿನ ಮೇಲಿಂದ ಹರಿದ...
27-11-24 12:36 pm
ಕ್ಯುಆರ್ ಕೋಡ್ ಸಹಿತ ಹೊಸ ನಮೂನೆಯ ಪ್ಯಾನ್ 2.0 ಜಾರಿ...
26-11-24 09:43 pm
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
27-11-24 12:31 pm
Mangalore Correspondent
Brahmavara Police Station, Udupi: ಪೊಲೀಸರ ವಶದ...
26-11-24 11:23 pm
Mangalore, Suicide, Belthangady: ಬೆಳ್ತಂಗಡಿ ;...
26-11-24 10:58 pm
Mangalore Baby, Lady goschen Hospital: ಲೇಡಿಗೋ...
26-11-24 10:50 pm
Tamil Actor Surya, Jyothika, Udupi temple: ಕೊ...
26-11-24 08:23 pm
27-11-24 01:11 pm
Mangalore Correspondent
Mangalore crime, ACP Dhanya Nayak, Drugs: ಎಸಿ...
26-11-24 03:10 pm
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm
Rowdy sheeter Dawood, Mangalore Crime, Police...
23-11-24 10:49 am