ಬ್ರೇಕಿಂಗ್ ನ್ಯೂಸ್
03-01-22 01:46 pm HK Desk news ಕರ್ನಾಟಕ
ಬೆಂಗಳೂರು, ಜ 03: ಕೊರೊನಾ ಆತಂಕದ ನಡುವೆ ರಾಜ್ಯದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಓಮೈಕ್ರಾನ್ ಸ್ಪೋಟಗೊಂಡಿದ್ದು ಬರೋಬ್ಬರಿ 10 ಜನರಿಗೆ ಓಮೈಕ್ರಾನ್ ಧೃಡಪಟ್ಟಿದೆ. ಆ ಮೂಲಕ ರಾಜ್ಯದಲ್ಲಿ ಒಟ್ಟು ಓಮೈಕ್ರಾನ್ ಸೋಂಕಿತರ ಸಂಖ್ಯೆ 76 ಕ್ಕೆ ಏರಿಕೆಯಾದಂತಾಗಿದೆ.
ನೋಡ ನೋಡುತ್ತಿದ್ದಂತೆ ಓಮಿಕ್ರಾನ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಶತಕದ ಅಂಚು ತಲುಪಿದ್ದು, ವಿದೇಶಿ ಪ್ರವಾಸಿಗರ ಮೇಲೆ ನಿರ್ಬಂಧ ಹೇರದ ಸರ್ಕಾರದ ಹೊಣೆಗೇಡಿತನದಿಂದ ಪ್ರಕರಣಗಳು ಇನ್ನಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ. ಇದೀಗ ಗುರುವಾರ ರಾಜ್ಯದಲ್ಲಿ ಲಾಕ್‌ಡೌನ್ ಹೇರಿಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಮತ್ತೆ 10 ಜನರಿಗೆ ಒಮಿಕ್ರಾನ್ ದೃಢಪಟ್ಟಿದ್ದು ಈ ಪೈಕಿ 8 ಜನರು ಬೆಂಗಳೂರಿನವರು ಹಾಗೂ ಇಬ್ಬರು ಧಾರವಾಡದವರಾಗಿದ್ದಾರೆ. ಬೆಂಗಳೂರಿನ ಎಂಟುಜನರ ಪೈಕಿ ಐವರು ವಿದೇಶದಿಂದ ಹಿಂತಿರುಗಿದವರಾಗಿದ್ದು ಎರಡನೇ ಅಲೆಯಂತೆ ಮೂರನೆ ಅಲೆ ಹೊತ್ತಿನಲ್ಲೂ ವಿದೇಶದಿಂದ ಆಗಮಿಸಿದವರೇ ಕರುನಾಡಿಗೆ ಕಂಟಕವಾಗುತ್ತಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು ನಿನ್ನೆ ಒಂದೇ ದಿನ ಒಟ್ಟು ಸಾವಿರ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ. ಈ ಪೈಕಿ ಒಂಬೈನೂರಕ್ಕೂ ಹೆಚ್ಚು ಪ್ರಕರಣಗಳು ಬೆಂಗಳೂರಿನಲ್ಲೇ ಪತ್ತೆಯಾಗಿದ್ದು ಜನರನ್ನು ಆತಂಕಕ್ಕೆ ದೂಡಿದೆ.
ಈಮಧ್ಯೆ ರಾಜ್ಯದಲ್ಲಿ ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ ಮಾದರಿಯಲ್ಲಿ ಕಠಿಣ ಕ್ರಮ ಜಾರಿಯಾಗಬೇಕೆಂಬ ಒತ್ತಡ ಕೇಳಿಬಂದಿದ್ದು ಸಚಿವ ಸಂಪುಟದ ಬಹುತೇಕ ಸಚಿವರು ಲಾಕ್ ಡೌನ್ ನತ್ತ ಒಲವು ತೋರಿದ್ದಾರೆ. ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ 15 ರಿಂದ 18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ವಿತರಣೆ ಆರಂಭಗೊಂಡಿದ್ದು, ಮೂಡಲ ಪಾಳ್ಯದ ಸರ್ಕಾರಿ ಶಾಲೆಯಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಗುರುವಾರ ಸಭೆ ನಡೆಸಿ ಕಠಿಣ ನಿಯಮದ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಬಸವರಾಜ ಬೊಮ್ಮಾಯಿ ,ಕೋವಿಡ್ ಮತ್ತು ಓಮಿಕ್ರಾನ್ ಗಮನಿಸುತ್ತಿದ್ದೇವೆ. ದೇಶದಲ್ಲಿ ಅಕ್ಕಪಕ್ಕದ ರಾಜ್ಯಗಳಲ್ಲಿ ವೇಗವಾಗಿ ಹರಡ್ತಿದೆ. ನಾಳೆ ಸಾಯಂಕಾಲ ತಜ್ಞರ ಜೊತೆ ಸಭೆ ಮಾಡುತ್ತೇವೆ. ಗುರುವಾರ ಕ್ಯಾಬಿನೇಟ್ ನಲ್ಲಿ ಒಟ್ಟಾರೆ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿ ಒಂದಷ್ಟು ಕ್ರಮಗಳನ್ನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಅಲ್ಲದೇ, ಕೊರೋನಾ ಹಾಗೂ ಓಮೈಕ್ರಾನ್ ತಡೆಗಟ್ಟಲು ಬೇಕಾದ ವರದಿಯನ್ನ ತಜ್ಞರಿಂದ ಕೇಳಿದ್ದೇವೆ ಎಂದಿದ್ದಾರೆ.
ಮೂಲಗಳ ಪ್ರಕಾರ ತಜ್ಞರ ಸಮಿತಿ ಪಾಸಿಟಿವಿಟಿ ರೇಟ್ ಆಧರಿಸಿ ರೆಡ್,ಯೆಲ್ಲೋ ಆರೆಂಜ್ ವಲಯಗಳಾಗಿ ಪ್ರದೇಶಗಳನ್ನು ವಿಂಗಡಿಸಿ ಅದರ ಆಧಾರದ ಮೇಲೆ ಲಾಕ್ ಡೌನ್ ಜಾರಿ ಮಾಡುವಂತೆ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಒಂದೂವರೆ ವರ್ಷದ ಬಳಿಕ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಶಬ್ದ ಸದ್ದು ಮಾಡಲಾರಂಭಿಸಿದ್ದು ಜನಸಾಮಾನ್ಯರ ಆತಂಕ ಹೆಚ್ಚಿಸಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಒಂದೇ ವಾರದಲ್ಲಿ ಶೇ 130ರಷ್ಟು ಏರಿಕೆ;
ಒಂದು ವಾರದ ಅವಧಿಯಲ್ಲಿ ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಶೇಕಡಾ 130 ರಷ್ಟು ಏರಿಕೆಯಾಗಿವೆ ಎಂಬುದು ಸರ್ಕಾರದ ಅಂಕಿಅಂಶಗಳಿಂದ ದೃಢವಾಗಿದೆ.
ಎರಡು ವಾರಗಳ ಹಿಂದೆ ರಾಜ್ಯದಲ್ಲಿ 2,160 ಪ್ರಕರಣಗಳು ದಾಖಲಾಗಿದ್ದವು. ಆದರೆ, ಡಿಸೆಂಬರ್ 27 ಮತ್ತು ಜನವರಿ 2 ರ ನಡುವಿನ ಒಂದು ವಾರದ ಅವಧಿಯಲ್ಲಿ 4,970 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಶೇ 76ರಷ್ಟು ಬೆಂಗಳೂರು ನಗರದಲ್ಲೇ ಪತ್ತೆಯಾಗಿವೆ.
ಬೆಂಗಳೂರಿನಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಶೇ 166ರಷ್ಟು ಏರಿದೆ. ಭಾನುವಾರ ಪತ್ತೆಯಾದ 1,187 ಹೊಸ ಪ್ರಕರಣಗಳೊಂದಿಗೆ, ರಾಜ್ಯದ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 10,292 ಕ್ಕೆ ಏರಿವೆ.
ಕಳೆದ ವಾರ ರಾಜ್ಯವು ಪರೀಕ್ಷೆ ಪ್ರಮಾಣವನ್ನು ಸ್ವಲ್ಪಮಟ್ಟಿಗೆ ಹೆಚ್ಚಿಸಿತ್ತು. ಎರಡು ವಾರಗಳ ಹಿಂದೆ 6.74 ಲಕ್ಷ ಪರೀಕ್ಷೆಗಳು ನಡೆದಿದ್ದವು, ಕಳೆದ ವಾರ ಆ ಸಂಖ್ಯೆ 6.99 ಲಕ್ಷಗಳಿಗಷ್ಟೆ ಏರಿಕೆಯಾಗಿತ್ತು. ಆದರೂ, ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ.
ಸೋಮವಾರದಿಂದ ರಾಜ್ಯದಲ್ಲಿ ಕೋವಿಡ್ ಪತ್ತೆ ಪರೀಕ್ಷೆಗಳನ್ನು ಮತ್ತಷ್ಟು ಹೆಚ್ಚಿಸುವುದಾಗಿಯೂ, ಮಾಸ್ಕ್ ಧರಿಸುವಿಕೆ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ಮಾಡುವುದಾಗಿಯೂ ಸರ್ಕಾರದ ಮೂಲಗಳು ತಿಳಿಸಿವೆ.
Ten more cases of the Omicron variant of the coronavirus have been detected in Karnataka, the State's Health Minister K Sudhakar said on Monday. This takes the state's Omicron tally to 76. "Ten new cases of Omicron have been confirmed in Karnataka on Jan 2nd taking the tally to 76. Bengaluru: 8 cases (of which 5 are international travellers). Dharwad: 2 cases," Mr Sudhakar said in a tweet. Chances of lockdown in Karnataka ?
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am