ಬ್ರೇಕಿಂಗ್ ನ್ಯೂಸ್
04-01-22 10:41 pm HK Desk news ಕರ್ನಾಟಕ
ಬೆಂಗಳೂರು, ಜ.4 : ಓಮಿಕ್ರಾನ್ ಮತ್ತು ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಗೆ ತರಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಶಾಲೆ, ಕಾಲೇಜುಗಳಲ್ಲಿ ಭೌತಿಕ ತರಗತಿ ರದ್ದುಪಡಿಸಲಾಗಿದ್ದು, 10, 12ನೇ ತರಗತಿಗೆ ಮಾತ್ರ ತರಗತಿ ಇರಲಿದೆ. ಅಲ್ಲದೆ, ರಾಜ್ಯದಾದ್ಯಂತ ಶನಿವಾರ ಮತ್ತು ಭಾನುವಾರ ಎರಡು ದಿನ ಕಾಲ ವೀಕೆಂಡ್ ಕರ್ಫ್ಯೂ ಹೇರಲಾಗಿದೆ.
ಕೊರೊನಾ ವೈರಸ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಜೊತೆಗೆ ಮಂಗಳವಾರ ಸಂಜೆ ತುರ್ತು ಸಭೆ ನಡೆಸಲಾಗಿದೆ. ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಆರೋಗ್ಯ ಸಚಿವ ಸುಧಾಕರ್ ಮತ್ತು ಸಚಿವ ಆರ್.ಅಶೋಕ್ ಮಾಧ್ಯಮಕ್ಕೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮುಂದಿನ ಎರಡು ವಾರ ಟಫ್ ರೂಲ್ಸ್ ರಾಜ್ಯದಲ್ಲಿ ಜಾರಿಯಲ್ಲಿರುತ್ತದೆ. ಬುಧವಾರ ರಾತ್ರಿ 10ರಿಂದಲೇ ಹೊಸ ರೂಲ್ಸ್ ಜಾರಿಗೆ ಬರಲಿದೆ. ರಾಜ್ಯದಲ್ಲಿ ಎಲ್ಲ ರೀತಿಯ ಸಭೆ, ಸಮಾರಂಭಗಳಿಗೆ ಬ್ರೇಕ್ ಹಾಕಲಾಗಿದೆ. ರಾಜಕೀಯ ರ್ಯಾಲಿ ನಡೆಸುವಂತಿಲ್ಲ. ಪೂಜೆ, ಪುನಸ್ಕಾರ ಯಥಾಪ್ರಕಾರ ಇರುತ್ತದೆ. ಪ್ರತಿಭಟನೆ ನಡೆಸಲು ಅವಕಾಶ ಇರುವುದಿಲ್ಲ.
ಹೊರಾಂಗಣ ಮದುವೆಗಳಿಗೆ 200 ಜನರಿಗೆ ಅವಕಾಶ ಇರಲಿದೆ. ಒಳಾಂಗಣ ಮದುವೆಗಳಿಗೆ 100 ಜನರಿಗೆ ಮಾತ್ರ ಅವಕಾಶ ಇರುತ್ತದೆ. ಶಾಲೆ, ಕಾಲೇಜುಗಳು ಬೆಂಗಳೂರಿನಲ್ಲಿ ಎರಡು ವಾರ ಕ್ಲೋಸ್ ಆಗಲಿದ್ದು, ಆನ್ಲೈನ್ ಕ್ಲಾಸ್ ನಡೆಸಲು ಸೂಚನೆ ನೀಡಲಾಗಿದೆ. 10 ಮತ್ತು 12ನೇ ತರಗತಿ ಯಥಾಸ್ಥಿತಿ ಇರಲಿದ್ದು, ಉಳಿದಂತೆ ಮೆಡಿಕಲ್, ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳಿಗೆ ಅವಕಾಶ ಇರುತ್ತದೆ. ಬಾರ್, ಪಬ್, ಥಿಯೇಟರ್ ಗಳಲ್ಲಿ 50 ಶೇಕಡಾ ಪ್ರವೇಶಕ್ಕೆ ಅನುಮತಿ ಇರುತ್ತದೆ.
ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ರ ವರೆಗೆ ರಾಜ್ಯಾದ್ಯಂತ ವೀಕೆಂಡ್ ಲಾಕ್ಡೌನ್ ಇರಲಿದ್ದು, ಜನರು ಮನೆಯಿಂದ ಹೊರ ಬರುವಂತಿಲ್ಲ. ಅಗತ್ಯ ವಸ್ತುಗಳ ಖರೀದಿಗೂ ಅವಕಾಶ ಇರುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ. ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಹೊಟೇಲ್ ಪಾರ್ಸೆಲ್ ಅವಕಾಶ ಇರುತ್ತದೆ. ಔಷಧಿ, ಮೆಡಿಕಲ್, ಆಸ್ಪತ್ರೆಗೆ ಅವಕಾಶ ಇರುತ್ತದೆ. ಉಳಿದಂತೆ ಎರಡು ದಿನಗಳ ಕಾಲ ಸಂಪೂರ್ಣ ಬಂದ್ ಇರಲಿದೆ ಎಂದು ಸಚಿವ ಅಶೋಕ್ ತಿಳಿಸಿದ್ದಾರೆ.
Bengaluru: Karanataka will impose a weekend curfew - starting this Friday - to check the spread of coronavirus cases which are yet again on a rise. While the weekend curfew will be imposed, essential commodities and hotels will function without any interruption, the state government has said. R Ashok, Revenue Minister, at a press briefing today, told reporters, " Omicron is increasing five-fold... 147 new cases of the variant have been reported today. Coronavirus cases in the state are rising twice as faster compared to earlier."
26-11-24 10:46 pm
Bangalore Correspondent
Shivamogga, Monkey fever, Dinesh Gundu Rao: ಮ...
26-11-24 10:23 pm
BJP, Vijayendra: ಉಪ ಚುನಾವಣೆ ಸೋಲು ; ಪಕ್ಷದ ಕಾರ್...
26-11-24 06:56 pm
MLA Gaviyappa, Congress: ಗ್ಯಾರಂಟಿ ಸ್ಕೀಂನಿಂದಾಗ...
26-11-24 06:11 pm
Davanagere News, Heart Attack: ಗಂಡ ಹೃದಯಾಘಾತಕ್...
26-11-24 11:52 am
27-11-24 02:00 pm
HK News Desk
ರಸ್ತೆ ಬದಿ ಮಲಗಿದ್ದ ಅಲೆಮಾರಿ ಗುಂಪಿನ ಮೇಲಿಂದ ಹರಿದ...
27-11-24 12:36 pm
ಕ್ಯುಆರ್ ಕೋಡ್ ಸಹಿತ ಹೊಸ ನಮೂನೆಯ ಪ್ಯಾನ್ 2.0 ಜಾರಿ...
26-11-24 09:43 pm
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
27-11-24 12:31 pm
Mangalore Correspondent
Brahmavara Police Station, Udupi: ಪೊಲೀಸರ ವಶದ...
26-11-24 11:23 pm
Mangalore, Suicide, Belthangady: ಬೆಳ್ತಂಗಡಿ ;...
26-11-24 10:58 pm
Mangalore Baby, Lady goschen Hospital: ಲೇಡಿಗೋ...
26-11-24 10:50 pm
Tamil Actor Surya, Jyothika, Udupi temple: ಕೊ...
26-11-24 08:23 pm
27-11-24 01:11 pm
Mangalore Correspondent
Mangalore crime, ACP Dhanya Nayak, Drugs: ಎಸಿ...
26-11-24 03:10 pm
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm
Rowdy sheeter Dawood, Mangalore Crime, Police...
23-11-24 10:49 am