ಬೆಂಗಳೂರಲ್ಲಿ ಕೊರೊನಾ ಸ್ಫೋಟ ;  3605 ಜನರಿಗೆ ಸೋಂಕು 

05-01-22 10:41 pm       HK Desk news   ಕರ್ನಾಟಕ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ತೀವ್ರವಾಗಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 4246 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಬೆಂಗಳೂರು, ಜ 05: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ತೀವ್ರವಾಗಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 4246 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವ್ ಪ್ರಮಾಣ ಶೇ. 3.3ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38357ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 3605 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಪಾಸಿಟಿವ್ ಪ್ರಮಾಣ ಶೇ.6.45ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ.

Bengaluru, Karnataka Omicron News Latest Updates, Bangalore Today News, 4 January: Earlier today, the Karnataka government announced that it will impose a weekend curfew and extend the night curfew for two weeks in the state.