ಬ್ರೇಕಿಂಗ್ ನ್ಯೂಸ್
07-01-22 12:14 pm HK Desk news ಕರ್ನಾಟಕ
ಬೆಂಗಳೂರು, ಜ.7 : ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಾದ್ಯಂತ ಜಾರಿಗೊಳಿಸಿರುವ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಕ್ರಮಕ್ಕೆ ಹಿರಿಯ ಸಚಿವರೇ ಅಸಮಾಧಾನ ವ್ಯಕ್ತಪಡಿಸಿದ್ದು ಸಚಿವ ಸಂಪುಟ ಸಭೆಯಲ್ಲೇ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕಾಗಿ ಮುಂದಿನ ವಾರದಿಂದಲೇ ಮಾರ್ಗಸೂಚಿಯಲ್ಲಿ ಬದಲಿ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ.
ಜನವರಿ 4ರಂದು ಹೊರಡಿಸಿರುವ ಆದೇಶ ಪ್ರಕಾರ, ಜ.19ರ ವರಗೂ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಎರಡು ದಿನ ವೀಕೆಂಡ್ ಕರ್ಫ್ಯೂ ಇರಲಿದೆ. ಆದರೆ ಈ ರೀತಿಯ ಕ್ರಮಕ್ಕೆ ಕೆಲವು ಸಚಿವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಿದ್ದರೆ ಗ್ರಾಮಾಂತರ ಪ್ರದೇಶಗಳಿಗೆ ಯಾಕೆ ಬರೆ ಹಾಕಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಕೋವಿಡ್ ಸಂಬಂಧ ಹಿರಿಯ ಸಚಿವರು ಮತ್ತು ತಜ್ಞರ ಜೊತೆ ಚರ್ಚಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವೀಕೆಂಡ್ ಕರ್ಫ್ಯೂ ವಿಧಿಸಲು ನಿರ್ಧಾರ ಕೈಗೊಂಡಿದ್ದರು.
ಗುರುವಾರ ಸಂಪುಟ ಸಭೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ್ದ ಸಚಿವ ಈಶ್ವರಪ್ಪ, ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಜಾಸ್ತಿ ಇದೆ. ಆದರೆ ರಾಜ್ಯದ ಎಲ್ಲ ಕಡೆಯೂ ಈ ಪರಿಸ್ಥಿತಿ ಇಲ್ಲ. ಹಾಗಾಗಿ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಎಲ್ಲ ಕಡೆಗೂ ಅನ್ವಯಿಸುವ ಅಗತ್ಯವಿಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೇ ರೀತಿಯ ಕರ್ಫ್ಯೂ ವಿಧಿಸುವುದೂ ಇಲ್ಲ ಎಂದು ಹೇಳಿದ್ದಾರೆ.
ನಮ್ಮ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಇಲ್ಲ. ಸುಡುಗಾಡೂ ಇಲ್ಲ. ಕೋವಿಡ್ ಇರುವುದು ನಿಜ. ಹಾಗೆಂದು ಎಲ್ಲ ಕಡೆಯೂ ಕರ್ಫ್ಯೂ ಜಾರಿಗೊಳಿಸುವುದು ಸಾಧ್ಯವಿಲ್ಲ. ನಿರ್ಧಾರ ಮರು ಪರಿಶೀಲನೆಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇನೆ ಎಂದು ಈಶ್ವರಪ್ಪ ಹೇಳಿದ್ದರು. ಸಂಪುಟ ಸಭೆಯಲ್ಲಿ ಹಲವು ಸಚಿವರು ಈಶ್ವರಪ್ಪ ಮಾತಿಗೆ ದನಿಗೂಡಿಸಿದ್ದಾರೆ. ಕೋವಿಡ್ ಗಂಭೀರತೆ ಇಲ್ಲದ ಕಡೆ ಕಟ್ಟುನಿಟ್ಟಿನ ಕ್ರಮ ಅಗತ್ಯ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಬಗ್ಗೆ ಸಂಪುಟ ಸಭೆಯ ಬಳಿಕ ಪ್ರತಿಕ್ರಿಯಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ, ರಾಜ್ಯಾದ್ಯಂತ ಬಿಗಿ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಕೆಲವು ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಂದಿನ ವಾರ ಜನವರಿ 14 ಅಥವಾ 15ರಂದು ಸಂಪುಟ ಸಭೆ ನಡೆಸಿ, ತಜ್ಞರ ಜೊತೆ ಚರ್ಚಿಸಿ ಮಾರ್ಗಸೂಚಿ ಸಡಿಲಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಿರಿಯ ಸಚಿವರು ಆಕ್ಷೇಪ ವ್ಯಕ್ತಪಡಿಸಿದರೂ ಮುಖ್ಯಮಂತ್ರಿ ಬೊಮ್ಮಾಯಿ, ತಮ್ಮ ನಿರ್ಧಾರ ಸಡಿಲಿಸಲು ಒಪ್ಪಲಿಲ್ಲ. ವಾರಾಂತ್ಯದ ಕರ್ಫ್ಯೂ ವಿಧಿಸಿ, ರಾಜಧಾನಿಯಿಂದ ಜನರು ಹೊರಗೆ ತೆರಳುವುದನ್ನು ನಿಯಂತ್ರಿಸಿದಂತಾಗುತ್ತದೆ ಎಂದು ಸಭೆಯಲ್ಲಿ ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗುತ್ತಿದೆ.
The State Cabinet is meeting in Bengaluru now to take stock of the renewed demand from Ministers and elected representatives to spare other districts (excluding Bengaluru) from weekend curfew restrictions as only Bengaluru is seeing an increase in COVID cases. The meeting began this morning. The State Government’s move to impose restrictions has left the ruling BJP divided with senior Ministers including K.S. Eshwarappa, who has openly lambasted the decision to clamp weekend curfew across Karnataka.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am