ಬ್ರೇಕಿಂಗ್ ನ್ಯೂಸ್
08-01-22 11:51 am HK Desk news ಕರ್ನಾಟಕ
ಬೆಂಗಳೂರು, ಜ. 8: ಕೊರೊನಾ ಸಂಭವನೀಯ ಮೂರನೇ ಅಲೆಯನ್ನು ಯಶಸ್ವಿಯಾಗಿ ಮತ್ತು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕೋವಿಡ್ ನಿಯಂತ್ರಣ ಮಾಡಲು ಅಧಿಕಾರಿಗಳಿಗೆ ಹಲವು ಜವಾಬ್ದಾರಿ ಕೊಟ್ಟಿದ್ದೇವೆ. ಎಲ್ಲಾ ಅಧಿಕಾರಿಗಳ ಸಮನ್ವಯ ಕುರಿತು ಸಭೆ ಮಾಡಲಾಗಿದೆ. ಕಳೆದ ಎರಡು ಅಲೆಗಳ ವೇಳೆ ಅನುಭವ ಪಡೆದ ಅಧಿಕಾರಿಗಳು ಈ ಬಾರಿ ಯಾವುದೇ ಲೋಪ ಆಗದಂತೆ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.
ವಿಶ್ವ ಆರೋಗ್ಯ ಸಂಸ್ಥೆಯ ಮಾಹಿತಿ
ವಿಶ್ವ ಆರೋಗ್ಯ ಸಂಸ್ಥೆ, ಓಮಿಕ್ರಾನ್ ವಿಶ್ವದಲ್ಲಿ ಅತೀ ವೇಗವಾಗಿ ಹರಡುವ ಪ್ರಭೇದ ಎಂದು ತಿಳಿಸಿದೆ. ಡೆಲ್ಟಾ ಪ್ರಭೇದದ ರೋಗ ತೀವ್ರತೆ ಹೆಚ್ಚು, ಓಮಿಕ್ರಾನ್ ತೀವ್ರತೆ ಕಡಿಮೆ. ಎರಡು ಡೋಸ್ ಲಸಿಕೆ ಪಡೆದರೆ ಓಮಿಕ್ರಾನ್‌ನಿಂದ ತೀವ್ರತರ ವ್ಯಾಧಿ ಉಲ್ಬಣವಾಗುವುದಿಲ್ಲ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಎರಡೂ ಡೋಸ್ ಲಸಿಕೆ ಪಡೆಯಬೇಕು ಎಂದು ಹೇಳಿದರು. ವಿಶ್ವದಲ್ಲಿ 29 ಕೋಟಿಗೂ ಹೆಚ್ಚು ಕೊರೊನಾ ಸೋಂಕಿತರಿದ್ದಾರೆ. ಡಿಸೆಂಬರ್ 27ರಿಂದ ಜನವರಿ 2ರ ಅವಧಿಯಲ್ಲಿ ಇಡೀ ವಿಶ್ವದಲ್ಲಿ ಸೋಂಕಿತರ ಸಂಖ್ಯೆ 79% ಹೆಚ್ಚಳವಾಗಿದೆ. ಅಮೆರಿಕ, ಯುರೋಪ್, ಆಫ್ರಿಕಾ ಸೇರಿದಂತೆ ಹಲವು ದೇಶಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ ಎಂದರು.
WHO ಪ್ರಕಾರ 2022ರ ಜುಲೈ ವೇಳೆಗೆ ಎಲ್ಲಾ ರಾಷ್ಟ್ರಗಳಲ್ಲೂ 70% ಲಸಿಕಾಕರಣ ಪೂರ್ಣವಾಗಬೇಕು. ಆದರೆ ಈವರೆಗೆ 109 ದೇಶಗಳಲ್ಲಿ 70% ಲಸಿಕೆ ನೀಡಲು ಸಾಧ್ಯವಾಗಿಲ್ಲ. 36 ದೇಶಗಳಲ್ಲಿ 10% ಲಸಿಕಾಕರಣವೂ ಆಗಿಲ್ಲ. ವಿಶ್ವದಾದ್ಯಂತ ICU ನಲ್ಲಿರುವ ಕೊರೊನಾ ರೋಗಿಗಳ ಪೈಕಿ 80% ಜನ ಲಸಿಕೆ ತೆಗೆದುಕೊಳ್ಳದವರಾಗಿದ್ದಾರೆ. ಯಾವ ದೇಶದಲ್ಲಿ ಲಸಿಕೆ ಇಲ್ಲವೋ ಅಲ್ಲಿಗೆ ಲಸಿಕೆ ಸರಬರಾಜು ಮಾಡಲು WHO ಮನವಿ ಮಾಡಿದೆ. ವಿಶ್ವದ ಎಲ್ಲಾ ದೇಶಗಳಲ್ಲಿ ಲಸಿಕಾ ಕಾರ್ಯಕ್ರಮ ಯಶಸ್ವಿಯಾದರೆ ಮಾತ್ರ ಕೊರೊನಾ ಮಣಿಸಬಹುದು. 6 ತಿಂಗಳ ಹಿಂದೆಯೇ ಭಾರತ ಹಲವು ದೇಶಗಳಿಗೆ ಲಸಿಕೆ ಸರಬರಾಜು ಮಾಡಿತ್ತು ಎಂದು ಸಚಿವ ಸುಧಾಕರ್ ಹೇಳಿದರು.
ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ
ರಾಜ್ಯದಲ್ಲಿ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ 99% ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಎರಡನೇ ಡೋಸ್ ಪಡೆದವರ ಪ್ರಮಾಣ 80% ಇದೆ. ಜನವರಿ 10ರಿಂದ 60 ವರ್ಷ ಮೇಲ್ಪಟ್ಟ ಅಗತ್ಯ ಇರುವವರಿಗೆ, ಫ್ರಂಟ್‌ಲೈನ್ ವರ್ಕರ್‌ಗಳಿಗೆ ಬೂಸ್ಟರ್ ಡೋಸ್ ನೀಡಲಾಗುವುದು. 15-18 ವರ್ಷಗಳ ಮಕ್ಕಳ ಲಸಿಕಾ ಕಾರ್ಯಕ್ರಮವೂ ವೇಗವಾಗಿ ನಡೆಯುತ್ತಿದೆ. ಭಾರತ 150 ಕೋಟಿ ಡೋಸ್ ಲಸಿಕೆ ನೀಡಿ ಮೈಲುಗಲ್ಲು ಸ್ಥಾಪಿಸಿದೆ. ಕೊರೊನಾ ವಿರುದ್ಧ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಹೇಗೆ ಕೆಲಸ ಮಾಡುತ್ತಿವೆ ಅನ್ನುವುದಕ್ಕೆ ಇದು ಉದಾಹರಣೆ ಎಂದರು.
ಪಾದಯಾತ್ರೆ ಮುಂದಕ್ಕೆ ಹಾಕಿ
ಪಾದಯಾತ್ರೆಗೆ ನಾವು ವಿರೋಧ ಮಾಡುತ್ತಿಲ್ಲ. ಆದರೆ ಹಿಂದೆ ಆಡಳಿತ ನಡೆಸಿದವರು, ಮುಖ್ಯಮಂತ್ರಿಯಾಗಿದ್ದವರು ಹಾಗೂ ಅಪಾರ ಅನುಭವ ಇರುವವರು ಈ ಬಗ್ಗೆ ಆಲೋಚಿಸಲಿ. ಪ್ರತಿಭಟನೆಗಳು ಪ್ರಜಾಪ್ರಭುತ್ವದ ಭಾಗವಾಗಿದೆ. ಪಾದಯಾತ್ರೆಯನ್ನು ಸ್ವಲ್ಪ ದಿನ ಮುಂದಕ್ಕೆ ಹಾಕಿ. ಬಿಬಿಎಂಪಿ ಚುನಾವಣೆ ಗಮನದಲ್ಲಿಟ್ಟುಕೊಂಡು ಮಾಡುವುದು ಕೇವಲ ರಾಜಕೀಯ ಪ್ರೇರಿತ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
With the rise in COVID-19 cases in the state, the Karnataka Government on Friday said it may soon issue green passes to identify fully vaccinated citizens. Speaking to the media after chairing a high-level meeting at Vidhanasoudha, state Health Minister Dr K Sudhakar said that the government is also planning to rope in 10,000 medical and nursing students for tele-triaging.
30-10-24 12:18 pm
HK News Desk
Actor Darshan Bail, Released, Murder: ಕೊನೆಗೂ...
30-10-24 11:55 am
ರೈತರ ಜಮೀನಿಗೆ ವಕ್ಫ್ ನೋಟಿಸ್ ; ವಿಜಯಪುರದಲ್ಲಿ ತೀವ್...
29-10-24 11:02 pm
ರೈತರ ಜಮೀನಿಗೆ ವಕ್ಫ್ ನೋಟಿಸ್ ; ಬೇಲಿಯೇ ಎದ್ದು ಹೊಲ...
29-10-24 10:09 pm
Pratap Simha, waqf board: ಮುಸ್ಲಿಮರಿಗೆ ವಕ್ಫ್ ಆ...
29-10-24 02:43 pm
29-10-24 08:23 pm
HK News Desk
ಕಾಞಂಗಾಡ್ ; ತೈಯ್ಯಂ ಉತ್ಸವಕ್ಕೂ ಮುನ್ನ ಪಟಾಕಿ ದುರಂತ...
29-10-24 12:01 pm
ಕೇರಳದ ಯೂಟ್ಯೂಬರ್ ದಂಪತಿ ಸಾವಿಗೆ ಶರಣು ; ಕೊನೆಯ ವಿ...
28-10-24 08:38 pm
ಇಸ್ರೇಲಿಗೆ ನಮ್ಮ ಸಾಮರ್ಥ್ಯ ತೋರಿಸುತ್ತೇವೆ ಎಂದು ಪೋಸ...
28-10-24 05:56 pm
Cyber fraud, Digital arrest, Modi: "ಡಿಜಿಟಲ್ ಅ...
28-10-24 11:47 am
28-10-24 10:51 pm
Giridhar Shetty, Headline Karnataka, Mangalore
Leopard, pilar, Deralakatte; ದೇರಳಕಟ್ಟೆ ಪ್ರದೇಶ...
28-10-24 03:53 pm
MLA Harish Poonja, B K Harishprasad: ಪುಡಿ ರಾಜ...
28-10-24 01:00 pm
Pejawar Seer, Caste Census: ಪ್ರಜಾಪ್ರಭುತ್ವದಲ್ಲ...
27-10-24 10:37 pm
Ashok Rai Puttur, Mangalore; ನಾನೊಬ್ಬ ಹಿಂದು, ದ...
27-10-24 02:41 pm
29-10-24 01:01 pm
Mangalore Correspondent
Mangalore Murder, Crime, Kateel: ಕಟೀಲು ಬಳಿ ಮನ...
29-10-24 12:38 pm
Mangalore Crime, Drugs: ಪಣಂಬೂರಿನಲ್ಲಿ ಡ್ರಗ್ಸ್...
28-10-24 11:12 pm
Bangalore Crime, Blackmail: ಪತ್ನಿ ಮತ್ತು ಆಕೆಯ...
28-10-24 02:47 pm
Mangalore News, Cyber Fraud: ಮಹಾರಾಷ್ಟ್ರದ ಎಸ್ಐ...
27-10-24 08:57 pm