ಬ್ರೇಕಿಂಗ್ ನ್ಯೂಸ್
08-01-22 07:31 pm HK Desk news ಕರ್ನಾಟಕ
ಬೆಂಗಳೂರು, ಜ.8 : ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ನೀಡುತ್ತಿರುವ ವೇತನ ಸರಕಾರ ನಿಗದಿ ಪಡಿಸಿದ ಮೂಲ ವೇತನಕ್ಕಿಂತ ಕಡಿಮೆಯಿದೆ. ದೇಶ ವಿಶ್ವಗುರು ಆಗಬೇಕು ಅನ್ನುವವರು ಉಪನ್ಯಾಸಕರನ್ನು ಕನಿಷ್ಠ ಸಂಬಳಕ್ಕೆ ದುಡಿಸಿಕೊಳ್ಳುವುದೇ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11 ಸಾವಿರದಿಂದ 13 ಸಾವಿರ ಗೌರವ ಧನ ನೀಡಲಾಗುತ್ತದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆಯಿದೆ ಎಂದಿದ್ದಾರೆ.
ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ. ಭಾರತ ವಿಶ್ವಗುರು ಆಗಬೇಕು ಎಂದು ಉನ್ನತ ಶಿಕ್ಷಣ ಸಚಿವರು ಹೇಳುತ್ತಾರೆ. ಪ್ರಧಾನಿ ಮೋದಿಯವರು ಕೂಡ ಇದೇ ಮಾತನ್ನು ಹೇಳುತ್ತಾರೆ. ಭಾರತ ವಿಶ್ವಗುರು ಆಗೋದು ಅಂದರೆ ಉಪನ್ಯಾಸಕರನ್ನು ಅತ್ಯಂತ ಕನಿಷ್ಠ ಸಂಬಳಕ್ಕೆ ದುಡಿಸಿಕೊಳ್ಳುವುದೇ ಎಂದು ಪ್ರಶ್ನೆ ಮಾಡಿದ್ದಾರೆ.
ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಬೇಕು ಎಂದು ಆಗ್ರಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11000 ರಿಂದ 13000 ಗೌರವ ಧನ ನೀಡಲಾಗುತ್ತಿದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆ. 1/3
— H D Kumaraswamy (@hd_kumaraswamy) January 8, 2022
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ? 2/3
— H D Kumaraswamy (@hd_kumaraswamy) January 8, 2022
ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಆಗ್ರಹ ಮಾಡುತ್ತೇನೆ. 3/3
— H D Kumaraswamy (@hd_kumaraswamy) January 8, 2022
The government is implementing the national education policy. The minister of higher education says that India should become a world guru.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 04:39 pm
HK News Desk
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm