ಕಾನೂನು ಸಚಿವ ಮಾಧುಸ್ವಾಮಿಗೆ  ಕೊರೊನಾ ; ಆಸ್ಪತ್ರೆಯಲ್ಲಿ ಚಿಕಿತ್ಸೆ 

11-01-22 02:48 pm       HK Desk news   ಕರ್ನಾಟಕ

ಕೊರೊನಾ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ರಾಜ್ಯ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವ ಅಶೋಕ್‍ಗೂ ಕೊರೊನಾ ದೃಢವಾಗಿತ್ತು. ಇದೀಗ ಮತ್ತೊಬ್ಬ ಸಚಿವ ಜೆ.ಸಿ. ಮಾಧುಸ್ವಾಮಿಗೂ ಕೊರೊನಾ ಸೋಂಕು ದೃಢವಾಗಿದೆ.

ಬೆಂಗಳೂರು, ಜ 11 : ಕೊರೊನಾ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ರಾಜ್ಯ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವ ಅಶೋಕ್‍ಗೂ ಕೊರೊನಾ ದೃಢವಾಗಿತ್ತು. ಇದೀಗ ಮತ್ತೊಬ್ಬ ಸಚಿವ ಜೆ.ಸಿ. ಮಾಧುಸ್ವಾಮಿಗೂ ಕೊರೊನಾ ಸೋಂಕು ದೃಢವಾಗಿದೆ.

ಎ ಸಿಂಪ್ಟಮ್ಯಾಟಿಕ್ ಆಗಿರುವ ಕಾನೂನು ಸಚಿವ ಮಾಧುಸ್ವಾಮಿ ಅವರು ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಜ್ವರ, ಕೆಮ್ಮು ಸೇರಿದಂತೆ ಸೌಮ್ಯ ಲಕ್ಷಣ ಕಂಡು ಬಂದ ಹಿನ್ನೆಲೆ ಟೆಸ್ಟ್ ಮಾಡಿಸಿಕೊಂಡಿದ್ದರು.

ಸಚಿವ ಮಾಧುಸ್ವಾಮಿ ಪುತ್ರಿ ಡಾ. ಅಪೇಕ್ಷಾಗೂ ಕೊರೊನಾ ಪಾಸಿಟಿವ್ ಬಂದಿದೆ. ಇವರು ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರಾಗಿ ಡಾ. ಅಪೇಕ್ಷಾ ಕಾರ್ಯನಿರ್ವಹಿಸುತ್ತಿದ್ದಾರೆ. ಪುತ್ರಿ ಅಪೇಕ್ಷಾರಿಂದ ಮಾಧುಸ್ವಾಮಿಗೆ ತಗಲಿರುವ ಸಾಧ್ಯತೆಯಿದೆ. ಪತ್ನಿ ತ್ರಿವೇಣಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ.

ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢವಾಗಿತ್ತು. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದರು. ಸೌಮ್ಯ ಲಕ್ಷಣಗಳು ಇದ್ದದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸ್ವಯಂ ಐಸೊಲೇಟ್ ಆಗಿರುವಂತೆ ತಿಳಿಸಿದ್ದರು. 

ಇಂದು ಅವರ ಪುತ್ರ ಹಾಗೂ ಸೊಸೆಗೆ ಕೊರೊನಾ ದೃಢವಾಗಿದ್ದು, ಸದ್ಯ ಮುಖ್ಯಮಂತ್ರಿ ಬೊಮ್ಮಾಯಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

Minister J C Madhuswami (Madhuswamy) was also infected with corona. The minister, who is Asymptomatic, is undergoing treatment at home.