ಬ್ರೇಕಿಂಗ್ ನ್ಯೂಸ್
12-01-22 03:02 pm HK Desk news ಕರ್ನಾಟಕ
ಬೆಂಗಳೂರು, ಜ.12 : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಬುಧವಾರ 4ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಪಾದಯಾತ್ರೆ ವಿರುದ್ಧ ಹೂಡಿದ್ದ ಕೇಸು ಹೈಕೋರ್ಟ್ ಅಂಗಳಕ್ಕೆ ತಲುಪಿದೆ.
ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯದಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚುತ್ತಿರುವುದರ ಮಧ್ಯೆ ಪಾದಯಾತ್ರೆ ನಡೆಸುವ ಅಗತ್ಯವೇನಿದೆ ಎಂದು ಛೀಮಾರಿ ಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ, ರಾಮನಗರ ಜಿಲ್ಲಾಡಳಿತ, ಬಿಬಿಎಂಪಿ ಹಾಗೂ ಕೆಪಿಸಿಸಿಗೂ ನೋಟಿಸ್ ನೀಡಿದೆ. ಪಾದಯಾತ್ರೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನಾಗೇಂದ್ರ ಪ್ರಸಾದ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಸಲ್ಲಿಸಿದ್ದರು.
ಕೊರೋನಾ ಕೇಸ್ ಹೆಚ್ಚುತ್ತಿರುವ ಹೊತ್ತಲ್ಲಿ ಪಾದಯಾತ್ರೆ ಬೇಕಿತ್ತಾ ಎಂದು PIL ನಲ್ಲಿ ಪ್ರಶ್ನೆ ಮಾಡಲಾಗಿತ್ತು. ವಿಚಾರಣೆ ಬಳಿಕ ಹೈಕೋರ್ಟ್, ಕಾಂಗ್ರೆಸ್ ಪಾದಯಾತ್ರೆ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ರಾಜ್ಯ ಸರಕಾರ ಏಕೆ ಕ್ರಮ ಕೈಗೊಂಡಿಲ್ಲ. ಜನವರಿ 14ರಂದು ನಮಗೆ ಉತ್ತರ ಕೊಡಿ ಎಂದು ಸರ್ಕಾರಕ್ಕೆ ನೋಟಿಸ್ ನೀಡಿದ್ದು ವಿಚಾರಣೆಯನ್ನು ಆ ದಿನಾಂಕಕ್ಕೆ ಮುಂದೂಡಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರನೇ ಅಲೆ ನಿಯಂತ್ರಿಸಲು ಕರ್ನಾಟಕ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ. ಆದರೆ ಕಾಂಗ್ರೆಸ್ ನಾಯಕರು ಕೊರೊನಾ ನಿಮಯಗಳನ್ನ ಗಾಳಿಗೆ ತೂರಿ ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸಬೇಕೆಂದು ಹೈಕೋರ್ಟ್ ಗೆ ವಕೀಲ ಶ್ರೀಧರ್ ಪ್ರಭು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು.
ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪಕ್ಷಕ್ಕೆ ಪಾದಯಾತ್ರೆ ನಡೆಸಲು ಅನುಮತಿ ನೀಡಿಲ್ಲ ಎಂದಾದ ಮೇಲೆ ಪಾದಯಾತ್ರೆ ತಡೆಯಲು ಹಿಂಜರಿಕೆ ಏಕೆ ? ಸರ್ಕಾರ ಅಷ್ಟೊಂದು ಅಸಮರ್ಥವಾಗಿದೆಯಾ? ನ್ಯಾಯಾಲಯ ನೆರವಿಗೆ ಬರಬೇಕು ಎಂದು ಸರ್ಕಾರ ನಿರೀಕ್ಷಿಸುತ್ತಿದೆಯಾ? ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಈ ಅಪಾಯಕಾರಿ ಸಂದರ್ಭದಲ್ಲಿ ಜನ ಸೇರುವ ರ್ಯಾಲಿ, ಧರಣಿ, ಪ್ರದರ್ಶನ, ಮೆರವಣಿಗೆಗಳಿಗೆ ನಿರ್ಬಂಧ ಹೇರಿದ್ದರೂ, ಅವುಗಳಿಗೆ ಅವಕಾಶ ನೀಡುತ್ತಿರುವುದು ಹೇಗೆ? ವಿಶೇಷವಾಗಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಹೇಗೆ ಮುಂದುವರಿಸಿದೆ, ಅದನ್ನು ತಡೆಯಲು ಕ್ರಮ ಕೈಗೊಂಡಿಲ್ಲವೇಕೆ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
The court was hearing a public interest litigation (PIL) filed by activist Nagendra Prasad A V against the Karnataka government, state officials and the Karnataka Pradesh Congress Committee over the ‘padyatra’ which began Sunday. The BJP government in Karnataka Wednesday sought a day’s time to respond to a petition filed in the High Court questioning the legality of a 100-km ‘Walk For Water’ march by the Congress despite restrictions imposed on public gatherings and protests amid rising Covid-19 cases in the state.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm