ಬ್ರೇಕಿಂಗ್ ನ್ಯೂಸ್
12-01-22 10:48 pm HK Desk news ಕರ್ನಾಟಕ
ಬೆಂಗಳೂರು, ಜ.12 : ಕೊರೊನಾ ಹರಡದಂತೆ ನಿರ್ಬಂಧ ವಿಧಿಸಿರುವಾಗ ಕಾಂಗ್ರೆಸ್ ಪಾದಯಾತ್ರೆ ನಡೆಸುವುದು ಹೇಗೆ.. ಇದಕ್ಕೆ ರಾಜ್ಯ ಸರಕಾರ ಅವಕಾಶ ನೀಡಿದ್ದು ಹೇಗೆ.. ಪಾದಯಾತ್ರೆ ತಡೆಯೋಕೆ ರಾಜ್ಯ ಸರಕಾರಕ್ಕೆ ಸಾಮರ್ಥ್ಯ ಇಲ್ಲವೇ ಎಂದು ಹೈಕೋರ್ಟ್ ಪ್ರಶ್ನೆ ಮಾಡಿದ ಬೆನ್ನಲ್ಲೇ ರಾಜ್ಯ ಸರಕಾರ ಕಾಂಗ್ರೆಸ್ ನಾಯಕರ ಮೇಕೆದಾಟು ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆ ತಡೆಯಲು ಮುಂದಾಗಿದೆ.
ಈ ಬಗ್ಗೆ ರಾಮನಗರ ಜಿಲ್ಲಾಡಳಿತಕ್ಕೆ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಪಾದಯಾತ್ರೆಗೆ ಆಗಮಿಸುವ ಜನ, ವಾಹನಗಳನ್ನು ತಡೆಯುವಂತೆ ಆದೇಶ ಮಾಡಿದ್ದಾರೆ. ಹೀಗಾಗಿ ರಾಮನಗರದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಆಡಳಿತಾಂಗದ ಸದಸ್ಯರು ತುರ್ತು ಸಭೆ ನಡೆಸಿ ಚರ್ಚಿಸಿದ್ದಾರೆ. ಗುರುವಾರ ಬೆಳಗ್ಗೆ ಪಾದಯಾತ್ರೆಗೆ ಬ್ರೇಕ್ ಹಾಕಲು ಅಧಿಕಾರಿಗಳು ಚಿಂತನೆ ನಡೆಸಿದ್ದು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾತ್ರೆಗೆ ಸಂಬಂಧಿಸಿ ಆಗಮಿಸುವ ವಾಹನ ಮತ್ತು ಜನರನ್ನು ತಡೆಯುವಂತೆ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.
ಈ ನಡುವೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನೇತೃತ್ವದ ಮೇಕೆದಾಟು ಪಾದಯಾತ್ರೆ ಬುಧವಾರ ನಾಲ್ಕನೇ ದಿನ ಪೂರೈಸಿದ್ದು, ರಾಮನಗರ ತಲುಪಿದೆ. ಗುರುವಾರ 5ನೇ ದಿನದ ಪಾದಯಾತ್ರೆ ರಾಮನಗರದಿಂದ ಬಿಡದಿಗೆ ತೆರಳಲಿದೆ. ಇದಲ್ಲದೆ, ಹೈಕೋರ್ಟ್ ಚಾಟಿಗೂ ಕ್ಯಾರೆನ್ನದ ಡಿಕೆ ಶಿವಕುಮಾರ್ ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಬುಧವಾರ ಸಂಜೆ ರಾಮನಗರ ತಲುಪುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಉತ್ಸಾಹದಲ್ಲಿದ್ದು, ರಾತ್ರಿ ಸಿಡಿಮದ್ದು ಸಿಡಿಸಿ ಪಾದಯಾತ್ರೆಯನ್ನು ಸ್ವಾಗತಿಸಿದ್ದಾರೆ. ಈ ವೇಳೆ, ಪಾದಯಾತ್ರೆ ಮಾಡೇ ಮಾಡುತ್ತೇವೆ. ಬೆಂಗಳೂರು ತಲುಪಲಿದ್ದೇವೆ. ಕಾರ್ಯಕರ್ತರು ಯಾವುದೇ ಕಾರಣಕ್ಕೂ ಹಿಂದೆ ಸರಿಯಬೇಡಿ ಎಂದು ಡಿಕೆಶಿ ಕರೆ ನೀಡಿದ್ದಾರೆ.
ಹೈಕೋರ್ಟ್ ಚಾಟಿ ಬೆನ್ನಲ್ಲೇ ರಾಜ್ಯ ಸರಕಾರ ವಿಪತ್ತು ನಿರ್ವಹಣೆ ಕಾಯ್ದೆಯಡಿ ಆದೇಶ ಮಾಡಿದ್ದು, ಪಾದಯಾತ್ರೆ ತಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಹೀಗಾಗಿ ರಾಮನಗರದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೆ, ಐಜಿಪಿ, ಎಡಿಜಿಪಿ ಸ್ಥಳಕ್ಕೆ ರಾಮನಗರಕ್ಕೆ ತೆರಳಿದ್ದಾರೆ. ಇದರಿಂದಾಗಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆಯುವ ಸಾಧ್ಯತೆಯಿದೆ. ಜನರು ಸ್ಥಳಕ್ಕೆ ಬರದಂತೆ ತಡೆಯುವ ಉದ್ದೇಶದಿಂದ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ರಾತ್ರಿಯೇ ಈ ಬಗ್ಗೆ ಬಂದೋಬಸ್ತ್ ಮಾಡಲಾಗಿದ್ದು, ಯಾತ್ರೆ ಬೆಂಗಳೂರು ಪ್ರವೇಶ ಮಾಡದಂತೆ ತಡೆಯಲು ತಯಾರಿ ನಡೆಸಲಾಗಿದೆ.
The Karnataka High Court on Wednesday took the State Government to task for allowing the Congress party to continue with its 10-day long padayatra to demand a new dam over the river Cauvery even as the Covid-19 cases are multiplying by the day. The Court was equally displeased with the Congress party's actions in going ahead with its march amid the rapid spread in infections despite the State’s Covid-19 guidelines banning all such gatherings.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm