ಬ್ರೇಕಿಂಗ್ ನ್ಯೂಸ್
13-01-22 01:14 pm HK Desk news ಕರ್ನಾಟಕ
ರಾಮನಗರ, ಜ.13 : ಮೇಕೆದಾಟು ಯೋಜನೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆಯನ್ನು ಸ್ಥಗಿತಗೊಳಿಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಮನಗರದಲ್ಲಿ ತುರ್ತು ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸದ್ಯಕ್ಕೆ ಪಾದಯಾತ್ರೆ ಮೊಟಕುಗೊಳಿಸಿ, ಕೊರೊನಾ ಸೋಂಕು ಕಡಿಮೆಯಾದ ಬಳಿಕ ಇಲ್ಲಿಂದಲೇ ಆರಂಭಿಸುವ ಬಗ್ಗೆ ನಿರ್ಧಾರಕ್ಕೆ ಬಂದಿದ್ದಾರೆ.
ಹೈಕೋರ್ಟ್ ಸೂಚನೆ ಪಾಲಿಸೋಣ. ಸದ್ಯಕ್ಕೆ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡೋಣ ಎಂದು ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದು, ಅದಕ್ಕೆ ಕಾಂಗ್ರೆಸ್ ಇತರ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ. ಈಮೂಲಕ ಯಾವುದೇ ಕಾರಣಕ್ಕೂ ಪಾದಯಾತ್ರೆ ಮೊಟಕುಗೊಳಿಸಲ್ಲ ಎಂದೇ ಹೇಳಿಕೊಂಡು ಬಂದಿದ್ದ ಕಾಂಗ್ರೆಸ್ ನಾಯಕರಿಗೆ ಮುಜುಗರ ಆಗಿದೆ.
ಒಂದು ಕಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ನೀಡಿದ್ದ ಸೂಚನೆ, ಮತ್ತೊಂದ್ಕಡೆ ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಮಾಡಿದ ಮನವಿ, ಇನ್ನೊಂದ್ಕಡೆ ಹೈಕೋರ್ಟ್ ಕೂಡ ಕೊರೊನಾ ಸಂದರ್ಭದಲ್ಲಿ ಪಾದಯಾತ್ರೆ ಬಗ್ಗೆ ಗರಂ ಆಗಿದ್ದು ಕಾಂಗ್ರೆಸ್ ನಾಯಕರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ಕಾರಣ ಎನ್ನಲಾಗುತ್ತಿದೆ.
ರಾಜ್ಯ ಸರಕಾರದ ಬೆದರಿಕೆ ನಡುವೆಯೂ ರಾಮನಗರದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಅಷ್ಟೇ ಸಂಖ್ಯೆಯಲ್ಲಿ ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿತ್ತು. ಹೀಗಾಗಿ ಸಂಘರ್ಷ ಏರ್ಪಡುವ ಸಾಧ್ಯತೆಯೂ ಇತ್ತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ರಾಮನಗರದ ಪಕ್ಷದ ಕಚೇರಿಯಲ್ಲಿ ತುರ್ತು ಸಭೆ ನಡೆಸಿ, ಪಾದಯಾತ್ರೆಯನ್ನು ಮುಂದೂಡಲು ನಿರ್ಧರಿಸಿದ್ದಾರೆ. ಈಗಾಗ್ಲೇ 5 ದಿನಗಳ ಪಾದಯಾತ್ರೆಯಲ್ಲಿ ಸುಮಾರು 60 ಕಿಮೀ ದೂರವನ್ನು ಕ್ರಮಿಸಿದ್ದು, ಇನ್ನು ಬಿಡದಿ ಮೂಲಕ ಬೆಂಗಳೂರು ಪ್ರವೇಶ ಆಗುವುದರಲ್ಲಿತ್ತು.
The Congress' Mekedatu rally has been called off after discussion among the leaders. Both LoP Siddaramaiah and KPCC president DK Shivakumar are likely to announce the decision in a joint press conference shortly. The leaders were instructed by central leaders as well to act wisely and not let the situation go out of hand.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm