ಮಡಿಕೇರಿ; ಸ್ಟೇಟ್ ಬ್ಯಾಂಕ್ ಸಿಬ್ಬಂದಿಗೆಲ್ಲಾ ವಕ್ಕರಿಸಿದ ಕೊರೊನಾ; ಬ್ಯಾಂಕ್  ಸೀಲ್‌ಡೌನ್‌, ಜನರ ಪರದಾಟ 

14-01-22 12:59 pm       HK Desk news   ಕರ್ನಾಟಕ

ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬ್ಯಾಂಕ್‌ನ ಶಾಖೆಯೊಂದರ ಎಲ್ಲಾ ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ ಬ್ಯಾಂಕ್‌ ಸೀಲ್‌ಡೌನ್‌ ಮಾಡಿರುವ ಘಟನೆ ನಡೆದಿದೆ.

ಮಡಿಕೇರಿ, ಜ 14: ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬ್ಯಾಂಕ್‌ನ ಶಾಖೆಯೊಂದರ ಎಲ್ಲಾ ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ ಬ್ಯಾಂಕ್‌ ಸೀಲ್‌ಡೌನ್‌ ಮಾಡಿರುವ ಘಟನೆ ನಡೆದಿದೆ.

ಸೋಮವಾರಪೇಟೆ ಪಟ್ಟಣದಲ್ಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ಎಲ್ಲಾ ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ. ಪರಿಣಾಮವಾಗಿ ಕಳೆದ ಮೂರು ದಿನಗಳಿಂದ ಬ್ಯಾಂಕ್ ಮುಚ್ಚಿದೆ. ವಹಿವಾಟಿಗೆ ಬ್ಯಾಂಕ್ ಇಲ್ಲದೇ ಗ್ರಾಹಕರು ಪರದಾಡುತ್ತಿದ್ದಾರೆ. 

ಪಟ್ಟಣದ ಬಸವೇಶ್ವರ ರಸ್ತೆ, ಮಹದೇಶ್ವರ ಬಡಾವಣೆ ಹಾಗೂ ಕೆಇಬಿ ಸಮೀಪ ಮೂರು ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಮೂರು ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಚಪ್ಪ ತಿಸಿದ್ದಾರೆ.

ಪಟ್ಟಣದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂದು ಒಂದೇ ದಿನ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸುಮಾರು 25 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದನ್ನೂ ಓದಿ: ಬ್ರೈನ್ ಟ್ಯೂಮರ್‌ನಿಂದ ಬಳಲಿದ್ದ ಡಾಕ್ಟರ್‌ಗೆ ಕೊರೊನಾ ಪಾಸಿಟಿವ್ – ಆಸ್ಪತ್ರೆಯಲ್ಲಿ ಸಾವು

Madikeri all staffs of State Bank staffs tested positive for covid bank closed, seal down.