ರಾಜ್ಯದಲ್ಲಿ ಇವತ್ತು 28,723 ಮಂದಿಗೆ ಕೊರೊನಾ ; 14 ಮಂದಿ ಸಾವು

14-01-22 06:30 pm       HK Desk news   ಕರ್ನಾಟಕ

ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಮದು ರಾಜ್ಯದಲ್ಲಿ 28,723 ಮಮದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, 14 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು, ಜ 14 : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಮದು ರಾಜ್ಯದಲ್ಲಿ 28,723 ಮಮದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, 14 ಮಂದಿ ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 20,121 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಸಾವನ್ನಪ್ಪಿರುವ 14 ಮಂದಿಯಲ್ಲಿ 7 ಮಂದಿ ಸಿಲಿಕಾನ್ ಸಿಟಿಯವರಾಗಿದ್ದಾರೆ. ಪಾಸಿಟಿವಿಟಿ ರೇಟ್ ಶೇ.12.98ಕ್ಕೆ ಏರಿಕೆಯಾಗಿದೆ. 3,105 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಬೆಂಗಳೂರಿನಲ್ಲಿ 101 ಸಾವಿರ ಸೇರಿ ರಾಜ್ಯದಲ್ಲಿ 1,41,337 ಸಕ್ರಿಯ ಪ್ರಕರಣಗಳಿವೆ. ಇಂದು 2,21,205 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Karnataka on Friday reported 28,723 new Covid-19  cases along with 14 deaths. With the capital, Bengaluru alone accounting for 20,121 new infections and seven deaths. With today addition of fresh cases, the state positivity rate stood at 12.98 per cent. The total number of active cases in the state is currently at 1,41,337.