ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ - ಕಾಮಗಾರಿಗಳಿಗೆ ಸಿಎಂ ಚಾಲನೆ

17-09-20 10:48 am       Headline Karnataka News Network   ಕರ್ನಾಟಕ

73ನೇಯ ಕಲ್ಯಾಣ ಕರ್ನಾಟಕ ಉತ್ಸವ ಹಿನ್ನಲೆ ಜಿಲ್ಲೆಗೆ ಆಗಮಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪನವರು 1,300 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಕಲಬರುಗಿ, ಸೆಪ್ಟಂಬರ್ 17: ಇಂದು 73ನೇಯ ಕಲ್ಯಾಣ ಕರ್ನಾಟಕ ಉತ್ಸವ ಹಿನ್ನಲೆ ಜಿಲ್ಲೆಗೆ ಆಗಮಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪನವರು 1,300 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ನಗರದ ಎಸ್ ವಿಪಿ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಪುತ್ತಳಿಗೆ ಪೂಜೆ ಸಲ್ಲಿಸಿ ಸಿಎಂ ಮಾಲಾರ್ಪಣೆ ಮಾಡಿದರು. ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು. 2013-14 ರಿಂದ 219-20ರ ವರೆಗೆ ಕೆಕೆಆರ್ ಡಿಬಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತ ವಿಶೇಷ ಕೈಪಿಡಿಯನ್ನ ಸಿಎಂ ಬಿಡುಗಡೆ ಮಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿದರು.

ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ. ಮಳೆ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆಂದು ಅನ್ಕೊಂಡಿರಲಿಲ್ಲ. ಮಳೆಯ ನಡುವೆ ಕಲ್ಯಾಣ ಕರ್ನಾಟಕ ಉತ್ಸವ ಯಶಸ್ವಿಯಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಏನೇನು ಕಾರ್ಯಕ್ರಮ ರೂಪಿಸಬೇಕು ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಇನ್ನು ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ್ ಕಾರಜೋಳ, ಸಂಸದ ಉಮೇಶ್ ಜಾದವ್, ಸಚಿವ ಆರ್.ಅಶೋಕ್, ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್, ಬಾಬುರಾವ್ ಚಿಂಚನಸೂರ್ ಸೇರಿದಂತೆ ಹಲವರು ಕಲ್ಯಾಣ ಕರ್ನಾಟಕದ ಉತ್ಸವದಲ್ಲಿ ಭಾಗಿಯಾಗಿದ್ದರು.