ಬ್ರೇಕಿಂಗ್ ನ್ಯೂಸ್
24-01-22 01:02 pm HK Desk news ಕರ್ನಾಟಕ
ಶಿವಮೊಗ್ಗ, ಜ.24 : ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಬಸ್ ಮಾಲೀಕ ಪ್ರಕಾಶ್ ಶರಾವತಿ ಹಿನ್ನೀರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸತತ ಕೊರೊನಾ ಲಾಕ್ಡೌನ್ ಕಾರಣದಿಂದ ಸಾಲಬಾಧೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಜ.21ರಂದು ರಾತ್ರಿ ಪ್ರಕಾಶ್ ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದರು. ಕಾರಿನಲ್ಲಿ ಮೊಬೈಲ್ ಕೂಡ ಇದ್ದುದು ಅನುಮಾನಕ್ಕೆ ಕಾರಣವಾಗಿತ್ತು. ಪಟಗುಪ್ಪೆ ಸೇತುವೆ ಬಳಿಯಿಂದಲೇ ಶರಾವತಿ ಹಿನ್ನೀರು ಇದ್ದು , ಅಲ್ಲಿಂದ ಉದ್ದಕ್ಕೆ ಸರೋವರದಲ್ಲಿ ಹುಡುಕಾಟ ನಡೆಸಲಾಗಿತ್ತು. ಕಳೆದ ಮೂರು ದಿನಗಳಿಂದ ಸ್ಥಳೀಯರು, ಅಗ್ನಿಶಾಮಕ ದಳ, ಪೊಲೀಸರು ಸೇರಿ ಹುಡುಕಾಟ ನಡೆಸಿದ್ದು, ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಗ್ಗೆ ಪಟಗುಪ್ಪೆ ಸೇತುವೆ ಬಳಿಯೇ ಶರಾವತಿ ನದಿಯ ಬದಿಯಲ್ಲೇ ಶವ ಪತ್ತೆಯಾಗಿದೆ.
ಪ್ರಕಾಶ್ ಟ್ರಾವೆಲ್ಸ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಹೆಸರು ಪಡೆದಿದ್ದ ಪ್ರಕಾಶ್ ಅವರು ಹೊಸನಗರ, ಸಾಗರ, ಶಿವಮೊಗ್ಗ ಭಾಗದಲ್ಲಿ ಅತಿ ಹೆಚ್ಚು ಖಾಸಗಿ ಬಸ್ ಗಳನ್ನು ಓಡಿಸುತ್ತಿದ್ದರು. 40ಕ್ಕೂ ಅಧಿಕ ಬಸ್ ಗಳನ್ನು ಓಡಿಸುತ್ತಿದ್ದರಿಂದ ಪ್ರಕಾಶ್ ಜನಮೆಚ್ಚುಗೆ ಪಡೆದಿದ್ದರು. ಶಿವಮೊಗ್ಗ – ಬೆಂಗಳೂರು, ಸಾಗರ – ಬೆಂಗಳೂರು ಹೀಗೆ ಪ್ರಕಾಶ್ ಟ್ರಾವೆಲ್ಸ್ ಬಸ್ ಗಳು ಓಡಾಟ ನಡೆಸುತ್ತಿದ್ದವು. ಬಸ್ಸಿಗಾಗಿ ಲಕ್ಷಾಂತರ ಸಾಲ ಪಡೆದಿದ್ದಾರೆ ಎನ್ನಲಾದ ಪ್ರಕಾಶ್, ಕೊರೊನಾ ಬಿಕ್ಕಟ್ಟಿನಿಂದಾಗಿ ಪದೇ ಲಾಕ್ಡೌನ್ ಆಗಿದ್ದರಿಂದ ಸಂಕಷ್ಟಕ್ಕೆ ಒಳಗಾಗಿದ್ದರು.
ಕರಾವಳಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಖಾಸಗಿ ಬಸ್ ಗಳಿದ್ದು, ಕೊರೊನಾ ಲಾಕ್ಡೌನ್ ಕಾರಣದಿಂದ ಭಾರೀ ಸಂಕಷ್ಟಕ್ಕೆ ತುತ್ತಾಗಿದೆ. ಸಾಲ ಬಾಧೆಯಿಂದ ನೊಂದು ತನ್ನ ಕಾರನ್ನು ಶರಾವತಿ ನದಿಯ ಸೇತುವೆಯಲ್ಲೇ ನಿಲ್ಲಿಸಿ, ನದಿಗೆ ಹಾರಿದ್ದರು ಎನ್ನಲಾಗಿದೆ. ಶವವನ್ನು ಪೋಸ್ಟ್ ಮಾರ್ಟಂ ನಡೆಸಲು ಪೊಲೀಸರು ಶಿವಮೊಗ್ಗಕ್ಕೆ ಒಯ್ದಿದ್ದಾರೆ. ಪ್ರಕಾಶ್ ನಾಪತ್ತೆ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪೊಲೀಸ್ ದೂರು ದಾಖಲಿಸಿದ್ದರು.
Shivamogga Prakash Travels Bus Owner of Sagara found dead in river, body fond. He owned around 40 tourist buses. Due to lockdown he was very much in loss for which he took the extreme decision of suicide.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm