ಬ್ರೇಕಿಂಗ್ ನ್ಯೂಸ್
24-01-22 03:36 pm HK Desk news ಕರ್ನಾಟಕ
ಬೆಂಗಳೂರು, ಜ.24 : ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ ಪದವಿ ಹಂತದಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿದ್ದ ರಾಜ್ಯ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಈ ಬಗ್ಗೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಮುಂದಿನ ಆದೇಶದ ವರೆಗೆ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯ ಮಾಡುವಂತಿಲ್ಲ ಎಂದು ಶಿಕ್ಷಣ ಇಲಾಖೆ ಎಲ್ಲ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದೆ.
ಹೈಕೋರ್ಟ್ ಇತ್ತೀಚೆಗೆ ಕನ್ನಡ ಕಡ್ಡಾಯ ವಿಚಾರಕ್ಕೆ ತಡೆ ನೀಡಿ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಸುತ್ತೋಲೆ ಹೊರಡಿಸಿದೆ. ಇದರ ಪ್ರಕಾರ, ಈಗಾಗಲೇ ಕನ್ನಡ ಭಾಷೆಯನ್ನು ಅಧ್ಯಯನಕ್ಕೆ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಕೂಡ ತಮ್ಮ ಇಚ್ಛೆಯ ಭಾಷೆ ಬದಲಿಸಿಕೊಳ್ಳುವ ಅವಕಾಶ ಸಿಗಲಿದೆ.
ವಿದ್ಯಾರ್ಥಿಗಳು ಕನ್ನಡದ ಬದಲಿಗೆ ತಮ್ಮ ಆಯ್ಕೆಯ ಯಾವುದೇ ಭಾಷೆಯನ್ನು ಕಲಿಯಬಹುದಾಗಿದ್ದು ಈಗಾಗಲೇ ಪಡೆದಿರುವ ಹಾಜರಾತಿಯನ್ನು ಸೆಮಿಸ್ಟರ್‌ನಲ್ಲಿ ಆಯ್ಕೆ ಮಾಡಿದ ಭಾಷೆಗೆ ವರ್ಗಾಯಿಸಬಹುದು ಎಂದು ಸುತ್ತೋಲೆ ತಿಳಿಸಿದೆ. ಆದರೆ ಈಗಾಗಲೇ ಪದವಿ ಹಂತದಲ್ಲಿ ಅರ್ಧ ಭಾಗದಷ್ಟು ಕಲಿಕೆ ಮತ್ತು ಸೆಮಿಸ್ಟರ್ ಮುಗಿದಿದ್ದು ಈ ಹಂತದಲ್ಲಿ ಭಾಷೆಯನ್ನು ಬದಲಿಸುವುದು ಹೇಗೆ ಎನ್ನುವ ಜಿಜ್ಞಾಸೆಗೂ ವಿದ್ಯಾರ್ಥಿಗಳು ಒಳಗಾಗಲಿದ್ದಾರೆ.
ಕಳೆದ 2021ರ ಆಗಸ್ಟ್ ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆ ಬಗ್ಗೆ ತರಾತುರಿಯಲ್ಲಿ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರಕಾರ, ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಪದವಿ ಹಂತದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಿ ಆದೇಶ ಮಾಡಿತ್ತು. ಇದರಿಂದ ಭಾಷಾವಾರು ಕಾಲೇಜುಗಳಲ್ಲಿ ತೀವ್ರ ಗೊಂದಲ ಉಂಟಾಗಿತ್ತು. ಅಲ್ಲದೆ, ವಿವಿಧ ಮಾದರಿಯ ಪದವಿಗಳಲ್ಲಿ ಕನ್ನಡ ಕಡ್ಡಾಯದಿಂದಾಗಿ ಹೆಚ್ಚುವರಿ ಉಪನ್ಯಾಸಕರ ಅಗತ್ಯ ಬಂದಿತ್ತು.
ರಾಜ್ಯ ಸರಕಾರದ ಆದೇಶವನ್ನು ಪ್ರಶ್ನಿಸಿ, ಬೆಂಗಳೂರಿನ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್ ಮತ್ತು ಸಂಸ್ಕೃತ ಭಾಷೆಯನ್ನು ಕಲಿಸುವ ಇತರ ಮೂರು ಶಿಕ್ಷಣ ಸಂಸ್ಥೆಗಳು ಮತ್ತು ಕೆಲ ವಿದ್ಯಾರ್ಥಿಗಳು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ತೀವ್ರ ವಿರೋಧ ವ್ಯಕ್ತ ಮಾಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ಆದೇಶದ ವರೆಗೆ ಯಾವುದೇ ವಿದ್ಯಾರ್ಥಿಯನ್ನು ಕನ್ನಡ ಭಾಷೆ ಓದುವಂತೆ ಒತ್ತಾಯಿಸಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು.
BENGALURU, The Karnataka government has issued a circular that students who do not wish to take Kannada language in undergraduate courses should not be compelled to do so until further orders from the high court. The January 21 circular is based on an interim order of the HC. The students who have already signed up for the Kannada-language course now have the freedom of choice. “Students can study another language of their choice in place of Kannada. The attendance put in for Kannada may be trans- ferred to the chosen language in this semester,” explained Thimme Gowda B, vice-chairman of Karnataka State Higher Education Council.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm