ಬ್ರೇಕಿಂಗ್ ನ್ಯೂಸ್
26-01-22 01:45 pm DK Desk news ಕರ್ನಾಟಕ
ಬೆಂಗಳೂರು, ಜ 26 : ಕೋವಿಡ್ ಲಸಿಕೆ ನೀಡಿಕೆ ಗುರಿ ತಲುಪುವ ಉದ್ದೇಶದಿಂದ ಮಹಾನಗರ ಪಾಲಿಕೆಯ ಸಿಬ್ಬಂದಿಗಳು 8 ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಗೂ ಜ.23ರಂದು ಎರಡನೇ ಡೋಸ್ ಲಸಿಕೆ ನೀಡಿರುವುದಾಗಿ ಮೊಬೈಲ್ಫೋನ್ಗೆ ಮೆಸೇಜ್ ಕಳಿಸುವ ಮೂಲಕ ಸಾಹಸ ಮೆರೆದಿದ್ದಾರೆ.
ನಗರದ ಉತ್ತರಹಳ್ಳಿಯ ನಿವಾಸಿ ವಿ.ಎಸ್.ರಾಘವೇಂದ್ರ ರಾವ್ ಎನ್ನುವವರು 2021ರ ಮಾ.21ರಂದು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ನಂತರ ಕರೋನಾ ಎರಡನೇ ಅಲೆಯ ವೇಳೆ 2021ರ ಮೇ 25ರಂದು ಕೋವಿಡ್ನಿಂದ ಮೃತಪಟ್ಟಿದ್ದರು. ಇವರು ಮೃತಪಟ್ಟ ಸುಮಾರು 8 ತಿಂಗಳ ನಂತರ ಪಾಲಿಕೆಯ 198ನೇ ವಾರ್ಡ್ನ ತಲಘಟ್ಟಪುರ ಉಪ ಅರೋಗ್ಯ ಕೇಂದ್ರದಲ್ಲಿ ಜ.23ರಂದು ಕೋವಿಡ್ ಎರಡನೇ ಡೋಸ್ ಲಸಿಕೆ ನೀಡಿರುವುದಾಗಿ ಮೆಸೇಜ್ ಜೊತೆಗೆ ಲಸಿಕೆ ಪ್ರಮಾಣ ಪತ್ರ ಕಳಿಸುವ ಮೂಲಕ ಭಾರೀ ಎಡವಟ್ಟು ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಲಸಿಕೆ ಶೇ.100 ಗುರಿ ತಲುಪುವಂತೆ ಆರೋಗ್ಯ ಇಲಾಖೆ ಸಚಿವರು ಕಠಿಣ ಸಂದೇಶ ರವಾನಿಸಿದ್ದಾರೆ. ಅದರಲ್ಲಿ ದಕ್ಷಿಣ ಕನ್ನಡ ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ ಲಸಿಕೆ ನೀಡಿಕೆಗೆ ಹಿನ್ನಡೆ ಉಂಟಾಗಿರುವುದು ಇಲಾಖೆ ಕೆಂಗಣ್ಣಿಗೆ ಗುರಿಯಾಗಿತ್ತು. ಇದನ್ನು ಸರಿಪಡಿಸಿಕೊಳ್ಳಲು ಪಾಲಿಕೆ ಆರೋಗ್ಯ ಸಿಬ್ಬಂದಿ ಲಸಿಕೆ ನೀಡದಿದ್ದರೂ ಸುಳ್ಳು ಪ್ರಮಾಣಪತ್ರ ನೀಡಲು ಮುಂದಾಗಿದ್ದಾರೆ. ಮೊದಲ ಡೋಸ್ ಲಸಿಕೆ ಪಡೆದು ಎರಡನೇ ಡೋಸ್ ಲಸಿಕೆ ಪಡೆಯದವರು 6 ರಿಂದ 8 ತಿಂಗಳವರೆಗೆ ಎರಡನೇ ಡೋಸ್ ಪಡೆಯದಿದ್ದಲ್ಲಿ ಅವರ ಮೊಬೈಲ್ಫೋನ್ಗೆ ಲಸಿಕೆ ನೀಡಿರುವ ಸಂದೇಶ ಕಳುಹಿಸಲಾಗುತ್ತಿದೆ. ಇಂತಹ ಅನೇಕ ಪ್ರಕರಣಗಳು ಈ ಮೊದಲೇ ಬಿಬಿಎಂಪಿ ಸೇರಿ ಬೇರೆ ಜಿಲ್ಲಾ ಕೇಂದ್ರಗಳಲ್ಲಿ ನಡೆದಿವೆ. ಪಾಲಿಕೆಯ ಆರೋಗ್ಯ ಸಿಬ್ಬಂದಿ ಕ್ರಮಕ್ಕೆ ಉತ್ತರ ಹಳ್ಳಿ ನಿವಾಸಿ ರಾಘವೇಂದ್ರ ಕುಟುಂಬಸ್ಥರಿಂದ ಆಕ್ರೋಶ ವ್ಯಕ್ತವಾಗಿದೆ.
Bangalore Man who died eight months ago gets covid second dose message, family in shock. The family has alleged the negligence of the officials who are playing tactics of sending messages to people who are dead to show 100 percent vaccine in state.
22-09-26 08:58 pm
HK News Staffer
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
22-09-26 08:32 pm
HK News Staffer
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
22-09-26 09:00 pm
HK News Staffer
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm