ಬ್ರೇಕಿಂಗ್ ನ್ಯೂಸ್
27-01-22 08:17 pm HK Desk news ಕರ್ನಾಟಕ
ಬೆಂಗಳೂರು, ಜ. 27 : ಭಾರೀ ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಗುರಿಯಾಗಿದ್ದ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ಸಿಐಡಿ ಎಸ್ಪಿ ಹುದ್ದೆಯಿಂದ ತೆರವುಗೊಳಿಸಿ, ಎತ್ತಂಗಡಿ ಮಾಡಲಾಗಿದೆ.
ಸಿಐಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರವಿ ಡಿ. ಚನ್ನಣ್ಣನವರ್ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಗ್ರಾನೈಟ್ ಉದ್ಯಮಿಯೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರು. ಈ ದೂರಿನ ಪ್ರತಿ ಹೊರ ಬಿದ್ದ ಬೆನ್ನಲ್ಲೇ ದೊಡ್ಡ ವಿವಾದ ಸೃಷ್ಟಿಯಾಗಿತ್ತು. ಬಳಿಕ ಪ್ರಕರಣದ ಬಗ್ಗೆ ಸುದ್ದಿ ಪ್ರಸಾರ ಮಾಡದಂತೆ ರವಿ ಡಿ. ಚನ್ನಣ್ಣನವರ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು.
ಇದೀಗ ಏಕಾಏಕಿ ಸಿಐಡಿಯಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ಚನ್ನಣ್ಣವರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗದ ಜನರ ಕಲ್ಯಾಣ ಯೋಜನೆಗಳ ಅನುಷ್ಠಾನ ಜವಾಬ್ದಾರಿ ಎಂಡಿ ಅವರ ಮೇಲಿರುತ್ತದೆ.
ಸಿಐಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಭೀಮಾ ಶಂಕರ್ ಗುಳೇದ ಅವರನ್ನು ಪೂರ್ವ ವಿಭಾಗದ ಡಿಸಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ಅಬ್ದುಲ್ ಅಹಾದ್ ಅವರನ್ನು ಕೆಎಸ್ಆರ್‌ಟಿಸಿ ಭದ್ರತೆ ಮತ್ತು ಜಾಗೃತಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಕೊಪ್ಪಳದ ಎಸ್ಪಿ ಟಿ. ಸುಧೀರ್ ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಕಾರಾಗೃಹ ಇಲಾಖೆಯ ಎಸ್ಪಿ ಟಿ.ಪಿ. ಶಿವಕುಮಾರ್ ಅವರನ್ನು ಚಾಮರಾಜ ನಗರ ಜಿಲ್ಲೆ ಎಸ್ಪಿ ಹುದ್ದೆಗೆ ವರ್ಗ ಮಾಡಲಾಗಿದೆ. ಅದೇ ರೀತಿ ಚಾಮರಾಜನಗರ ಎಸ್ಪಿ ಆಗಿದ್ದ ದಿವ್ಯ ಸಾರಾ ಥಾಮಸ್ ಅವರನ್ನು ಮೈಸೂರಿನಲ್ಲಿರುವ ಕರ್ನಾಟಕ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕ ಹುದ್ದೆಗೆ ನಿಯೋಜಿಸಲಾಗಿದೆ. ಹುದ್ದೆಗಾಗಿ ಕಾಯುತ್ತಿದ್ದ ಡೆಕ್ಕ ಕಿಶೋರ್ ಬಾಬು ಬೀದರ್ ಎಸ್ಪಿಯಾಗಿ ವರ್ಗಾವಣೆಯಾಗಿದ್ದಾರೆ. ಅರುಣಾಂಶು ಗಿರಿ ಅವರನ್ನು ಕೊಪ್ಪಳದ ಎಸ್ಪಿಯನ್ನಾಗಿ ವರ್ಗ ಮಾಡಲಾಗಿದೆ. ಬೀದರ್ ಎಸ್ಪಿಯಾಗಿದ್ದ ನಾಗೇಶ್ ಡಿ.ಎಲ್. ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
9 IPS officers including Ravi D channannavar transferred by Karnataka Govt. Recently crores of corruption charges have been alleged by Advocate Jagadish on a Facebook video against Ravi D.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm