ಬ್ರೇಕಿಂಗ್ ನ್ಯೂಸ್
02-02-22 10:34 pm HK Desk news ಕರ್ನಾಟಕ
ಮೈಸೂರು, ಫೆ.2 : ಕಾಂಗ್ರೆಸ್ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿರುವ ಹಿರಿಯ ನಾಯಕ ಸಿಎಂ ಇಬ್ರಾಹಿಂ, ಫೆ.14ರಂದು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಅಲ್ಲದೇ, ಅಂದೇ ಮುಂದಿನ ರಾಜಕೀಯ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿ.ಎಂ.ಇಬ್ರಾಹಿಂ, ನಾನು ಹೊಸ ಪಕ್ಷ ಕಟ್ಟೋದಿಲ್ಲ. ಜೆಡಿಎಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಈ ಮೂರು ಆಯ್ಕೆಗಳಿವೆ. ಜನಾಭಿಪ್ರಾಯ ಸಂಗ್ರಹಿಸಿ ಪಕ್ಷ ಆಯ್ಕೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಮುಗಿದು ಹೋಗಿದೆ. ಮಂಚ, ಬೆಡ್ಡು, ದಿಂಬು ಯಾರಿಗೆ ಏನು ಬೇಕೋ ಅದನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಕನಸಿನ ಮಾತು. ಮೂರನೇ ಸ್ಥಾನದಲ್ಲಿ ಕೂತಿರುತ್ತಾರೆ. ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಅಸಹಾಯಕರಾಗುತ್ತಿದ್ದಾರೆ. ನಾನಂತೂ ಹೋರಾಟ ಶುರು ಮಾಡಿದ್ದೇನೆ. ಫೆಬ್ರವರಿ ಅಂತ್ಯಕ್ಕೆ ದಾವಣಗೆರೆ ಅಥವಾ ಮುಂಬೈ ಕರ್ನಾಟಕದಲ್ಲಿ ಅಲಿಂಗೌ ಸಮಾವೇಶ ಮಾಡುತ್ತೇವೆ. ಎಲ್ಲರನ್ನೂ ಒಗ್ಗೂಡಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಸುತ್ತೂರು ಸ್ವಾಮೀಜಿ, ವಿ.ಶ್ರೀನಿವಾಸ ಪ್ರಸಾದ್, ಅಡಗೂರು ಎಚ್.ವಿಶ್ವನಾಥ್ ಅವರನ್ನು ಭೇಟಿ ಆಗುತ್ತೇನೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.

ಅಲ್ಪಸಂಖ್ಯಾತರ ಕಣ್ಣಿಗೆ ಮಣ್ಣೆರಚಲು ಖಾದರ್ ಸ್ಥಾನ
ವಿಧಾನ ಪರಿಷತ್ತಿನ ಸದಸ್ಯರು ಸೇರಿ ಸಭಾ ನಾಯಕರನ್ನು ಆಯ್ಕೆ ಮಾಡಬೇಕಿತ್ತು. 22 ಕಾಂಗ್ರೆಸ್ ಸದಸ್ಯರ ಪೈಕಿ 19 ಎಂಎಲ್‌ಸಿಗಳು ನನ್ನ ಪರ ಇದ್ದಾರೆ. ಹೀಗಿದ್ದರೂ ನನ್ನನ್ನು ಆಯ್ಕೆ ಮಾಡಲಿಲ್ಲ ಎಂದು ಬೇಸರ ತೋಡಿಕೊಂಡ ಎಂಎಲ್‌ಸಿ ಸಿ.ಎಂ.ಇಬ್ರಾಹಿಂ, ದೆಹಲಿಯಿಂದ ವೇಣುಗೋಪಾಲ್ ಮಾತನಾಡಿದ್ದರು. ಆದರೆ ಏಕಾಏಕಿ ಬದಲಾವಣೆ ಆಯ್ತು. ಚಾಮುಂಡೇಶ್ವರಿ ಉಪ ಚುನಾವಣೆಯಲ್ಲಿ ನಾನು ಪ್ರಾಣ ಒತ್ತೆ ಇಟ್ಟಿದ್ದೆ. 260 ವೋಟಲ್ಲಿ ಗೆದ್ರು. ನಾವು ಕೈಬಿಟ್ಟಿದ್ದರೆ ಮುಗಿದೇ ಹೋಗಿತ್ತು 2018ರಲ್ಲೂ ನಾನು ಚಾಮುಂಡೇಶ್ವರಿಯಲ್ಲಿ ನಿಲ್ಲಬೇಡಿ ಅಂದೆ. ಬಂದ ಜನ ಅಲ್ಲ, ತಂದ ಜನ. ಅವರಿಗೆ ಭಾಷಣ ಮಾಡಿ ಪ್ರಯೋಜನ ಇಲ್ಲ ಅಂದೆ. ನನ್ನ ಮಾತಿನಂತೆ ಚಾಮುಂಡೇಶ್ವರಿಯಲ್ಲಿ ಸೋತರು. ನಿಮಗಾಗಿ ದೇವೇಗೌಡರನ್ನು ಬಿಟ್ಟು ಬಂದೆ ಎಂದು ಹಳೆಯದನ್ನು ಮೆಲುಕು ಹಾಕಿದರು. ಇದಲ್ಲದೆ, ಅಲ್ಪಸಂಖ್ಯಾತರ ಕಣ್ಣಿಗೆ ಮಣ್ಣು ಎರಚಲು ಯು.ಟಿ.ಖಾದರ್‌ನನ್ನು ಉಪನಾಯಕ ಮಾಡಿದ್ದೀರಿ ಎಂದು ಸಿದ್ದರಾಮಯ್ಯ ವಿರುದ್ಧ ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದರು.
Mysuru Resignation from party on Feb 14th Valentines day says CM Ibrahim. People will know which party I am going to join on lovers day he added.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm