ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ  ಇಬ್ರಾಹಿಂ ಸುತಾರ ನಿಧನ 

05-02-22 04:07 pm       HK Desk news   ಕರ್ನಾಟಕ

ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

ಬಾಗಲಕೋಟೆ, ಫೆ.5 : ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

ಇಬ್ರಾಹಿಂ ಸುತಾರ(76) ಬೆಳಗ್ಗೆ 6.30ಕ್ಕೆ ಹೃದಯಾಘಾತದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಸಾವನ್ನಪ್ಪಿದ್ದಾರೆ. ಇಬ್ರಾಹಿಂ ಸುತಾರ ಎದೆ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ. ತಕ್ಷಣಇಬ್ರಾಹಿಂ ಸುತಾರ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಕೊನೆಯುಸಿರೆಳೆದಿದ್ದಾರೆ. ಸುತಾರ್ ಅವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 

ಕನ್ನಡದ ಕಬೀರ ಎಂದೇ ಹೆಸರಾಗಿದ್ದ ಇಬ್ರಾಹಿಂ ಸುತಾರ್ ಅವರು ಭಾವೈಕ್ಯ ಸಂದೇಶ ಸಾರುವ ಸಂತರಾಗಿದ್ದರು. ಕುರಾನ್, ಬೈಬಲ್, ಭಗವದ್ಗೀತೆ, ಶರಣರ ತತ್ವಗಳ ಅಧ್ಯಯನ ಮಾಡಿದವರಗಾಗಿದ್ದರು. ಪ್ರವಚನ, ಗೀತೆಗಳ ಮೂಲಕ ಜನರಲ್ಲಿ ಸಮಾನತೆ ಧರ್ಮ ಸಹಿಷ್ಣುತೆ ಪಾಠ ಮಾಡುತ್ತಿದ್ದರು. 

ಇಬ್ರಾಹಿಂ ಎನ್​. ಸುತಾರ್​ ಮೇ 10, 1940ರಲ್ಲಿ ಜನಿಸಿದರು. ಇವರ ತಂದೆ ಮಹಾಲಿಂಗಪುರದ ನಬಿಸಾಹೇಬ್​, ತಾಯಿ ಅಮೀನಾಬಿ. ಆರ್ಥಿಕವಾಗಿ ಸದೃಢರಾಗಿಲ್ಲದಿದ್ದರಿಂದ ಮೂರನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆದರು. ನಂತರ ನೇಕಾರ ವೃತ್ತಿ ಮೈಗೂಡಿಸಿಕೊಂಡರು. ಅದರ ಜೊತೆಗೆ ಮಸೀದಿಯಲ್ಲಿ ನಮಾಜು, ಕುರಾನ್​ ಅಧ್ಯಯನಮಾಡಿದ್ರಲ್ಲದೇ, ನಂತರದ ದಿನಗಳಲ್ಲಿ ಭಗವದ್ಗೀತೆ ಅಧ್ಯಯನ ಮಾಡಿದರು.

ಪ್ರವಚನಗಳನ್ನು ಮಾಡುತ್ತಾ ಲೋಕಕ್ಕೆ ಭಾವೈಕ್ಯತೆಯ ಪಾಠವನ್ನು ಸಾರಿದರು. ಕನ್ನಡದ ಕಬೀರ ಎಂದೇ ಇವರು ಖ್ಯಾತ ರಾಗಿದ್ದರು. ಇವರಿಗೆ 1995ರಲ್ಲಿ ಕರ್ನಾಟಕ ಸರ್ಕಾರ ರಾಜೋತ್ಸವ ಪ್ರಶಸ್ತಿಯನ್ನು ನೀಡಿದೆ. ಭಾರತ ಸರ್ಕಾರ 2018ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ಸರ್ವಧರ್ಮ ಸಮನ್ವಯದ ಪ್ರವಚನಕಾರರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನರಾದ ಸುದ್ದಿ ತಿಳಿದು ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ನಾಯಕರು ಸುತಾರ್ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

Ibrahim Sutar, polyglot folk singer, who toured India spreading the message of Hindu-Muslim unity, died in Mahalingpur in Bagalkot district on February 5. He suffered a massive heart attack around 6.30 in the morning. He died a few minutes later, family sources said. He was 82. He leaves behind his wife, son and two daughters.