ಬ್ರೇಕಿಂಗ್ ನ್ಯೂಸ್
17-09-20 09:59 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ರಾಜ್ಯದಲ್ಲಿ ಮತ್ತೆ 9,366 ಮಂದಿ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 5 ಲಕ್ಷದತ್ತ (4.94 ಲಕ್ಷ)ದಾಪುಗಾಲು ಇರಿಸಿದೆ.
ರಾಜ್ಯದಲ್ಲಿ ಮೊದಲ ಕೋವಿಡ್ ಪ್ರಕರಣ ಮಾ.8 ರಂದು ವರದಿಯಾಗಿತ್ತು. ಬಳಿಕ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ತಲುಪಲು 108 ದಿನ ಹಿಡಿದಿತ್ತು. ನಂತರದ ದಿನಗಳಲ್ಲಿ ಸೋಂಕಿತರ ಸಂಖ್ಯೆ ಏರುಗತಿ ಪಡೆದಿದ್ದರಿಂದ ಕೇವಲ 20 ದಿನಗಳಲ್ಲಿಯೇ ಮತ್ತೊಂದು ಲಕ್ಷ ಪ್ರಕರಣಗಳು ವರದಿಯಾಗಿದ್ದವು. ಅಂದರೆ, ಜುಲೈ 13ಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿತ್ತು. ಆ.26ಕ್ಕೆ ಸೋಂಕಿತರ ಸಂಖ್ಯೆ 3 ಲಕ್ಷ ತಲುಪಿತ್ತು. ಬಳಿಕ 12 ದಿನಗಳಲ್ಲಿ ಮತ್ತೆ ಒಂದು ಲಕ್ಷ ಪ್ರಕರಣ ವರದಿಯಾಗಿ, ಸೋಂಕಿತರ ಸಂಖ್ಯೆ 4 ಲಕ್ಷಕ್ಕೆ (ಸೆ.7) ಏರಿಕೆಯಾಗಿತ್ತು.

7 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ
ಮುಂದಿನ 94 ಸಾವಿರ ಪ್ರಕರಣಗಳು 10 ದಿನಗಳಲ್ಲಿ ವರದಿಯಾಗಿವೆ. ಈ ತಿಂಗಳ 17 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 8,903 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಕೊರೊನಾ ಸೋಂಕಿತರಲ್ಲಿ ಮತ್ತೆ 93 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಸಂಖ್ಯೆ 7,629ಕ್ಕೆ ಏರಿಕೆಯಾಗಿದೆ. ಒಂದೇ ದಿನ 72,030 ಮಂದಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ 2,184 ಮಂದಿ ಸೇರಿದಂತೆ ರಾಜ್ಯದಲ್ಲಿ 7,268 ಮಂದಿಗೆ ಕಾಯಿಲೆ ವಾಸಿಯಾಗಿದೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 3.83 ಲಕ್ಷಕ್ಕೆ ಮುಟ್ಟಿದೆ.
ಬೆಂಗಳೂರಿನಲ್ಲಿ ಹೊಸದಾಗಿ 3,799 ಕೋವಿಡ್ ಪ್ರಕರಣಗಳು ವರದಿ ಯಾಗಿದ್ದು, ಸೋಂಕಿತರ ಸಂಖ್ಯೆ 1.84ಲಕ್ಷ ದಾಟಿದೆ. ಬಳ್ಳಾರಿಯಲ್ಲಿ ಹೊಸದಾಗಿ 677 ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಮತ್ತೆ 591 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿಒಟ್ಟು ಸೋಂಕಿತರ ಸಂಖ್ಯೆ 28 ಸಾವಿರ ದಾಟಿದೆ. ತುಮಕೂರು (381), ದಕ್ಷಿಣ ಕನ್ನಡ (308), ಬೆಳಗಾವಿ (295) ಜಿಲ್ಲೆ ಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm