ಬ್ರೇಕಿಂಗ್ ನ್ಯೂಸ್
10-02-22 05:06 pm HK Desk news ಕರ್ನಾಟಕ
ಬೆಂಗಳೂರು, ಫೆ.10 : ರಾಜ್ಯ ಮತ್ತು ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಹಿಜಾಬ್ ವಿವಾದ ಹೈಕೋರ್ಟ್ ಅಂಗಳದಲ್ಲಿ ಮಹತ್ವದ ಘಟ್ಟ ತಲುಪಿದೆ. ಸದ್ಯಕ್ಕೆ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದು, ಇದರ ನಡುವೆ ಮಧ್ಯಂತರ ಆದೇಶ ನೀಡಲಾಗಿದೆ.
ಹೈಕೋರ್ಟ್ ಅಂತಿಮ ತೀರ್ಪು ನೀಡುವ ವರೆಗೂ ಶಾಲೆಗಳಲ್ಲಿ ಯಾವುದೇ ಧಾರ್ಮಿಕ ಸಂಕೇತಗಳನ್ನು ಬಳಸುವಂತಿಲ್ಲ. ಹಿಜಾಬ್ ಅಥವಾ ಶಾಲು ಆಗಲೀ ಯಾವುದೇ ಧಾರ್ಮಿಕ ಗುರುತುಗಳನ್ನು ಮುಂದಿನ ಆದೇಶದ ವರೆಗೂ ಬಳಸಬಾರದು. ರಾಜ್ಯದಲ್ಲಿ ಶಾಂತಿ ಮರಳುವ ನಿಟ್ಟಿನಲ್ಲಿ ಮಧ್ಯಂತರ ಆದೇಶ ನೀಡಲಾಗುತ್ತಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ.

ಅಲ್ಲದೆ, ರಾಜ್ಯದಾದ್ಯಂತ ಶಾಲೆ, ಕಾಲೇಜುಗಳನ್ನು ಮತ್ತೆ ಆರಂಭಿಸಬೇಕು ಎಂದು ಹೈಕೋರ್ಟ್ ಮೌಖಿಕವಾಗಿ ಆದೇಶ ಮಾಡಿದೆ. ಪ್ರತಿ ನಿತ್ಯ ಇದರ ಬಗ್ಗೆ ವಿಚಾರಣೆಯನ್ನು ಮಾಡಲಾಗುವುದು. ಆದರೆ, ತುರ್ತಾಗಿ ಈ ಬಗ್ಗೆ ನಿರ್ಣಯ ಪ್ರಕಟಿಸಬೇಕೆಂಬ ಅರ್ಜಿದಾರರ ಕೋರಿಕೆ ಮೇರೆಗೆ, ಮಧ್ಯಂತರ ಆದೇಶವನ್ನು ನೀಡಲಾಗಿದೆ. ಧಾರ್ಮಿಕ ಸ್ವಾತಂತ್ರ್ಯ, ಸ್ತ್ರೀಯರ ಶಿಕ್ಷಣ ಹೀಗೆ ಗಂಭೀರ ವಿಚಾರ ಆಗಿರುವುದರಿಂದ ಈ ಬಗ್ಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಆದಷ್ಟು ಬೇಗ ತೀರ್ಪು ನೀಡಲಾಗುವುದು ಎಂದು ಹೈಕೋರ್ಟ್ ಪೀಠ ಹೇಳಿದೆ.
ದೇವದತ್ ಕಾಮತ್, ಸಂಜಯ್ ಹೆಗ್ಡೆ ಸೇರಿದಂತೆ ಕೆಲವು ಹಿರಿಯ ವಕೀಲರು ಹೈಕೋರ್ಟಿನಲ್ಲಿ ಹಿಜಾಬ್ ಪರವಾಗಿ ವಿವಿಧ ತೀರ್ಪುಗಳನ್ನು ಆಧರಿಸಿ ವಾದ ಮಂಡಿಸಿದ್ದರು. ಈ ನಡುವೆ, ಮಧ್ಯಂತರ ತೀರ್ಪು ನೀಡಬೇಕು ಎಂದು ಅರ್ಜಿದಾರರು ಕೇಳಿಕೊಂಡಿದ್ದರು. ಆದರೆ, ರಾಜ್ಯ ಸರಕಾರದ ಪರ ವಕೀಲರು ಮಧ್ಯಂತರ ಆದೇಶ ನೀಡಬಾರದು ಎಂದು ಒತ್ತಾಯಿಸಿದ್ದರು.
Chief Justice of Karnataka HC Ritu Raj Awasthi on Wednesday constituted a bench, comprising himself, Justice Krishna S Dixit and Justice JM Khazi. The bench is now hearing the Karnataka hijab row case. After protests in Bagalkot turned violent and section 144 was imposed in Shivamogga as hijab-versus-saffron scarves protests escalated, Karnataka CM Basavaraj Bommai ordered schools and colleges to be shut for three days. Stay tuned for live updates.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am