ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ಎಂಬುದು ಗಾಳಿಸುದ್ದಿ ; ಸಚಿವ ಅಶ್ವತ್ಥನಾರಾಯಣ ಸ್ಪಷ್ಟನೆ 

11-02-22 09:07 pm       HK Desk news   ಕರ್ನಾಟಕ

ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗುತ್ತದೆ ಎನ್ನುವುದು ಸುಳ್ಳು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಬೆಂಗಳೂರು, ಫೆ.11 : ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗುತ್ತದೆ ಎನ್ನುವುದು ಸುಳ್ಳು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರು ಶುಕ್ರವಾರ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ನಿರ್ಬಂಧಿಸಲಾಗುವುದು ಎಂದು ಕೆಲವರು ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ. ಬೋಧನಾ ವ್ಯವಸ್ಥೆಯು ಆನ್ ಲೈನ್ ರೂಪ ಪಡೆದಿರುವುದರಿಂದ ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಮುಂತಾದ ಆಧುನಿಕ ತಾಂತ್ರಿಕ ಸಾಧನಗಳು ವಿದ್ಯಾರ್ಥಿಗಳ ಕಲಿಕೆಯ ಅವಿಭಾಜ್ಯ ಅಂಗವೇ ಆಗಿಹೋಗಿವೆ. ಹೀಗಿರುವುದಾಗ ನಿಷೇಧದ ಮಾತು ಎಲ್ಲಿಂದ ಬರುತ್ತದೆ’ ಎಂದು ಅವರು ಪ್ರಶ್ನಿಸಿದರು.

`ಇಂತಹ ಗಾಳಿಮಾತುಗಳನ್ನು ವಿದ್ಯಾರ್ಥಿಗಳಾಗಲಿ, ಪೋಷಕರಾಗಲಿ ನಂಬಬಾರದು. ಆಧುನಿಕ ಸಾಧನಗಳನ್ನು ಬಳಸಿಕೊಂಡು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆ ಮತ್ತು ಶಿಕ್ಷಣ ಪೂರೈಸುವುದು ಸರಕಾರದ ಆದ್ಯತೆಯಾಗಿದೆ. ಮೊಬೈಲ್ ಬಳಕೆ ಎಂದಿನಂತೆ ಮುಂದುವರಿಯಲಿದೆ ಎಂದು ಸಚಿವರು ಹೇಳಿದರು.

Mobile phone restricted in colleges is a fake news says Ashwath Narayan.