ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಿದ್ರೆ ಕಠಿಣ ಕ್ರಮ ಪಕ್ಕಾ ; ಸಿಎಂ ಬೊಮ್ಮಾಯಿ ವಾರ್ನಿಂಗ್ ! ಪರಿಸ್ಥಿತಿ ನೋಡಿಕೊಂಡು ಕಾಲೇಜು ಆರಂಭದ ಬಗ್ಗೆ ತೀರ್ಮಾನ  

13-02-22 02:53 pm       HK Desk news   ಕರ್ನಾಟಕ

ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಮೇಲೆ ನಿಗಾ ಇಡಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.

ಹುಬ್ಬಳ್ಳಿ, ಫೆ 13: ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಮೇಲೆ ನಿಗಾ ಇಡಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಫ್ರೌಡ ಶಾಲೆಗಳನ್ನ ಆರಂಭಿಸುತ್ತೇವೆ. ಈಗಾಗಲೇ ಜಿಲ್ಲಾಧಿಕಾರಿಗಳು, ಡಿಡಿಪಿಐ, ಶಾಲಾಡಳಿತ ಮಂಡಳಿಗಳಿಗೆ ಶಾಂತಿ ಸಭೆ ಮಾಡಲು ತಿಳಿಸಿದ್ದೇನೆ. ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ ಎಂದು ತಿಳಿಸಿದರು. ಪರಿಸ್ಥಿತಿ ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತೆ. ಈ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಮೊದಲಿನ ಹಾಗೇ ಸೌಹಾರ್ದಯುತವಾಗಿ ಶಾಲಾ ಕಾಲೇಜುಗಳನ್ನು ಆರಂಭಿಸುತ್ತೇವೆ. ಶಾಲಾ ಕಾಲೇಜುಗಳನ್ನು ಆರಂಭಿಸುವುದು ನಮ್ಮ ಮೊದಲ ಆದ್ಯತೆ. ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಬಗ್ಗೆ ನಿಗಾ ವಹಿಸುತ್ತಿದ್ದೇವೆ ಎಂದು ಹೇಳಿದರು.

ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಒತ್ತು

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ನೀಡುವ, ಸುಳ್ಳು ಸಂದೇಶವನ್ನು ಹರಿಬಿಡುವವರ ಮೇಲೆ ಸರಕಾರ ಕಣ್ಣಿಟ್ಟಿದ್ದಾರೆ‌. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಶಾಲಾ ಕಾಲೇಜುಗಳಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸುವುದು ಮೊದಲ ಗುರಿಯಾಗಿದೆ. ಈ ಹಿಂದಿನಂತೆ ಶಾಲಾ ಕಾಲೇಜುಗಳಲ್ಲಿ ಕಲಿಕೆಗೆ ಸೌಹಾರ್ದಯುತ ವಾತಾವರಣ ನಿರ್ಮಿಸಲು ಒತ್ತು ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Chief minister Basavaraj Bommai has warned of strict action against those who fuelling the Hijab issue further.