ಬ್ರೇಕಿಂಗ್ ನ್ಯೂಸ್
14-02-22 05:28 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.14 : ಆನ್‌ಲೈನ್ ಗೇಮ್‌ಗಳು ಸೇರಿದಂತೆ ಬೆಟ್ಟಿಂಗ್ ಹಾಗೂ ಆನ್ ಲೈನ್ ಜೂಜು ನಿಷೇಧಿಸಿ ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ.
ರಾಜ್ಯ ಸರ್ಕಾರದ ತಿದ್ದುಪಡಿಯನ್ನು ಪ್ರಶ್ನಿಸಿ ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ ಮತ್ತು ಇತರರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಈ ತಿದ್ದುಪಡಿ ಸಂವಿಧಾನಬಾಹಿರವೆಂದು ಹೇಳಿರುವ ಹೈಕೋರ್ಟ್, ಸರ್ಕಾರ ನಿಯಮಾನುಸಾರ ಹೊಸ ಕಾಯಿದೆ ಮಾಡಬಹುದೆಂದು ಹೇಳಿದೆ.

ರಾಜ್ಯ ಸದ್ಯ ಆನ್ ಲೈನ್ ಗೇಮಿಂಗ್ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು, ಅವುಗಳ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇದರಿಂದಾಗಿ ರಾಜ್ಯ ಸರಕಾರಕ್ಕೆ ಭಾರಿ ಹಿನ್ನೆಡೆಯಾಗಿದೆ.
ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು, ''ಆಟದ ಫಲಿತಾಂಶದ ಬಗ್ಗೆ ತಿಳಿಯದಿರುವಾಗ ಆಟದ ಫಲಿತಾಂಶದ ಮೇಲೆ ಬೆಟ್ಟಿಂಗ್ ಕಟ್ಟುವುದು ಆಯ್ಕೆಯೋ ಅಥವಾ ಕೌಶಲವೋ ಅದು ಬಾಜಿಗೆ ಸಮನಾಗಿರುತ್ತದೆ'' ಎಂದು ವಾದಿಸಿದ್ದರು.
ಕುದುರೆ ಓಟ ಮತ್ತು ಲಾಟರಿ ಹೊರತುಪಡಿಸಿ ಇತರೆ ಯಾವುದೇ ಆಟಕ್ಕೆ ಹಣವನ್ನು ಪಣವಾಗಿ ಕಟ್ಟುವ ಆನ್‌ಲೈನ್ ಗೇಮ್ ಸೇರಿದಂತೆ ಎಲ್ಲಾ ಜೂಜಾಟವನ್ನು ನಿಷೇಧಿಸಲಾಗಿದ್ದು, ಜಾಮೀನು ರಹಿತ ಅಪರಾಧ ಎಂದು ರಾಜ್ಯ ಸರ್ಕಾರ ಘೋಷಿಸಿತ್ತು.
The Karnataka High Court on Monday struck down a state government law that banned online gambling. The Karnataka government had notified the law banning betting and wagering in online games in October last year, after Governor Thawar Chand Gehlot gave his assent. Since then, fantasy gaming platforms like Dream11, Mobile Premier League have suspended their operations in the state.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm