ಬ್ರೇಕಿಂಗ್ ನ್ಯೂಸ್
15-02-22 10:48 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.15 : ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎಗೆ ಸೇರಿಸಬೇಕು ಎನ್ನುವ ವಿಚಾರದ ಬಗ್ಗೆ ಪರ - ವಿರೋಧ ಚರ್ಚೆ ನಡೆದಿದೆ. ಈ ಕುರಿತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಮಗ್ರ ಅಧ್ಯಯನ ನಡೆಸಿ ನಿಷ್ಪಕ್ಷಪಾತ ವರದಿಯನ್ನು ಸರಕಾರಕ್ಕೆ ಸಲ್ಲಿಸಲಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಗೆ ಭರವಸೆ ನೀಡಿದ್ದಾರೆ.
ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎ ಗೆ ಸೇರಿಸಬಾರದು. ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಕರ್ನಾಟಕದ 70 ಜಾತಿ - ಉಪಜಾತಿಗಳನ್ನು ಸೇರ್ಪಡೆಗೊಳಿಸಬೇಕು ಮತ್ತು ಸ್ಥಳೀಯ ಚುನಾವಣೆಗಳಲ್ಲಿ ಅತಿ ಹಿಂದುಳಿದ ವರ್ಗಗಳಿಗೂ ಮೀಸಲಾತಿ ನೀಡಬೇಕು ಹಾಗೂ ಹೆಚ್. ಕಾಂತರಾಜ ವರದಿಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ಕರ್ನಾಟಕ ರಾಜ್ಯ ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪ್ರಮುಖರು ಮನವಿ ಸಲ್ಲಿಸಿದ್ದಾರೆ.
ಮನವಿ ಸ್ವೀಕರಿಸಿದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಗೆ, ಪ್ರವರ್ಗ 2 ಎಗೆ ಪಂಚಮಸಾಲಿ ಸಮುದಾಯವನ್ನು ಸೇರಿಸುವ ವರದಿಯನ್ನು ಈಗಾಗಲೇ ತಿರಸ್ಕರಿಸಲಾಗಿದೆ. ಈ ಬಗ್ಗೆ ಮತ್ತೆ ಪರ ವಿರೋಧ ಮಾತುಗಳು ಕೇಳಿಬರುತ್ತಿವೆ. ಎರಡು ಬಣಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಪಾರದರ್ಶಕ ವರದಿಯನ್ನು ನೀಡುವುದಾಗಿ ಹೇಳಿದರು.
ಕರ್ನಾಟಕ ರಾಜ್ಯ ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ. ವೇಣುಗೋಪಾಲ್ ಮಾತನಾಡಿ, ಪಂಚಮಸಾಲಿ ಸಮುದಾಯವು ವೀರಶೈವ- ಲಿಂಗಾಯತರ ಉಪ ಜಾತಿಯಾಗಿದ್ದು ಅಂತಹ ಉಪಜಾತಿಯನ್ನು ಮುಖ್ಯಜಾತಿಯಿಂದ ಬೇರ್ಪಡಿಸಿ ಬೇರೊಂದು ಪ್ರವರ್ಗಕ್ಕೆ ವರ್ಗಾಯಿಸುವುದು ಸರ್ವೋಚ್ಛ ನ್ಯಾಯಾಲಯ ಇಂದ್ರಾ ಸಹಾನಿ ಪ್ರಕರಣದಲ್ಲಿ ನೀಡಿರುವ ತೀರ್ಪಿಗೆ ವಿರುದ್ಧವಾಗಿರುತ್ತದೆ ಎಂದರು.
ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವುದು ಸರಿಯಲ್ಲ. ಇದ್ರಿಂದ ಅತೀ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ. ಒಂದು ವೇಳೆ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಿದ್ರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಂ.ಸಿ. ವೇಣುಗೋಪಾಲ್ ಹೇಳಿದರು.
1992ರ ಮಂಡಲ್ ಆಯೋಗದ ವರದಿಯಂತೆ ಕರ್ನಾಟಕದ 323 ಜಾತಿ-ಉಪಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಆನಂತರ 283 ಜಾತಿ-ಉಪಜಾತಿಗಳನ್ನು ಮೀಸಲಾತಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಸುಮಾರು 70 ಜಾತಿ ಉಪಜಾತಿಗಳು ರಾಜ್ಯ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದರೂ, ಕೇಂದ್ರದ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಅವರಿಗೆ ನ್ಯಾಯ ಸಿಗಬೇಕಾಗಿದೆ ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಎಂ. ನಾಗರಾಜು, ಎಲ್.ಎ ಮಂಜುನಾಥ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
There are already pro-opposition discussion on whether the panchamasali community should be included in category 2A and not included. Karnataka state backward classes commission chairman Jayaprakash hegde has assured that the Karnataka state bachward classes commission will conduct a through study and submit an impartial report on the issue.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm