ಅಲ್ಪಸಂಖ್ಯಾತ ಇಲಾಖೆಯ ವಸತಿ ಶಾಲೆಗಳಲ್ಲೂ ಹಿಜಾಬ್, ಸ್ಕಾರ್ಫ್ ಧಾರಣೆಗೆ ಅಂಕುಶ ; ಹೈಕೋರ್ಟ್ ಆದೇಶ ಪಾಲನೆಗೆ ಸುತ್ತೋಲೆ ! 

17-02-22 08:22 pm       Bengaluru Correspondent   ಕರ್ನಾಟಕ

ಹಿಜಾಬ್ ವಿವಾದ ರಾಜ್ಯದಾದ್ಯಂತ ಕಿಚ್ಚು ಹಚ್ಚಿರುವಾಗಲೇ ರಾಜ್ಯ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಇಲಾಖೆಯಡಿ ಕಾರ್ಯ ನಿರ್ವಹಿಸುವ ಅಲ್ಪಸಂಖ್ಯಾತರ ಶಾಲೆಗಳಲ್ಲೂ ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕ ಗುರುತುಗಳಿರುವುದನ್ನು ಧರಿಸದಂತೆ ಆದೇಶ ಹೊರಡಿಸಿದೆ.‌

ಬೆಂಗಳೂರು, ಫೆ.17 : ಹಿಜಾಬ್ ವಿವಾದ ರಾಜ್ಯದಾದ್ಯಂತ ಕಿಚ್ಚು ಹಚ್ಚಿರುವಾಗಲೇ ರಾಜ್ಯ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಇಲಾಖೆಯಡಿ ಕಾರ್ಯ ನಿರ್ವಹಿಸುವ ಅಲ್ಪಸಂಖ್ಯಾತರ ಶಾಲೆಗಳಲ್ಲೂ ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕ ಗುರುತುಗಳಿರುವುದನ್ನು ಧರಿಸದಂತೆ ಆದೇಶ ಹೊರಡಿಸಿದೆ.‌

ಈ ಬಗ್ಗೆ ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಎಲ್ಲ ಶಾಲೆಗಳಿಗೂ ಸುತ್ತೋಲೆ ಹೊರಡಿಸಿದ್ದು ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಪಾಲಿಸಬೇಕೆಂದು ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆ ಸೇರಿದಂತೆ ಎಲ್ಲ ರೀತಿಯ ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು, ಸ್ಕಾರ್ಫ್ ಗಳನ್ನು ಧರಿಸುವಂತಿಲ್ಲ ಎಂದು ತಿಳಿಸಲಾಗಿದೆ. ಶಾಲೆ ಹಾಗೂ ತರಗತಿಗಳಲ್ಲಿ ಯಾವುದೇ ಧಾರ್ಮಿಕ ಬಾವುಟ, ಧಾರ್ಮಿಕ ಚಿಹ್ನೆಗಳನ್ನು ಕೂಡ ಬಳಕೆ ಮಾಡುವಂತಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಿದೆ. 

ಮುಂದಿನ ಆದೇಶದ ವರೆಗೂ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಗುರುತು ಧರಿಸಿ ಹೋಗುವಂತಿಲ್ಲ. ಸಮವಸ್ತ್ರ ಕಡ್ಡಾಯ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಕೋರ್ಟ್ ಆದೇಶದ ಹೊರತಾಗಿಯೂ ರಾಜ್ಯದ ಹಲವು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಅವಾಂತರ ಸೃಷ್ಟಿಸಿದ್ದು ಹಲವೆಡೆ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ನಡೆಸಿದ್ದಾರೆ. ಇದರ ನಡುವೆಯೇ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿ ವಿವಾದಕ್ಕೆ ತುಪ್ಪ ಸುರಿದಿದ್ದಾರೆ.‌ ಇಲಾಖೆಯ ವ್ಯಾಪ್ತಿಯಡಿ ಬರುವ ಹಲವು ಉರ್ದು ಶಾಲೆಗಳಲ್ಲಿ ಹಿಜಾಬ್ ನಿರಾಕರಿಸಿದ್ದಕ್ಕೆ ಭಾರೀ ವಿರೋಧ ಕೇಳಿಬಂದಿದ್ದು ವಿದ್ಯಾರ್ಥಿಗಳು ಮತ್ತು ಸಿಬಂದಿ ನಡುವೆ ಜಟಾಪಟಿ ನಡೆದಿದೆ.

The state's minority welfare hajj and wadf department has issued a circular forbidding students to wear any kind of shawl, scarp or hijab intheir schools.