ಬ್ರೇಕಿಂಗ್ ನ್ಯೂಸ್
20-02-22 10:16 pm HK Desk news ಕರ್ನಾಟಕ
ಚಿಕ್ಕಬಳ್ಳಾಪುರ, ಫೆ. 20 : ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಪ್ರವಾಸ ತೆರಳಿ ಅಪಾಯದಲ್ಲಿ ಸಿಲುಕಿದ್ದ ಬೆಂಗಳೂರಿನ ವಿದ್ಯಾರ್ಥಿಯನ್ನು ಹೆಲಿಕಾಪ್ಟರ್ ಮೂಲಕ ವಾಯುಪಡೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಹಿಮಾಚಲ ಪ್ರದೇಶ ಮೂಲದ 19 ವರ್ಷದ ನಿಶಾಂತ್ ಗುಲ್ ಎಂಬ ವಿದ್ಯಾರ್ಥಿ ಇತರ ಹುಡುಗರ ಜೊತೆ ವೀಕೆಂಡ್ ಪ್ರವಾಸಕ್ಕೆ ಬಂದಿದ್ದ ವೇಳೆ ನಂದಿಬೆಟ್ಟದ ಕಡಿದಾದ ಬಂಡೆಯ ಎಡೆಯಲ್ಲಿ ಸಿಲುಕಿದ್ದರು. ಅವರನ್ನು ಏರ್ ಫೋರ್ಸ್ ಅಧಿಕಾರಿಗಳ ಸಹಾಯದಿಂದ ರಕ್ಷಣೆ ಮಾಡಲಾಗಿದೆ.

ಬೆಟ್ಟದಿಂದ ಅಪಾಯಕಾರಿ ಜಾಗಕ್ಕೆ ಬಿದ್ದ ಹಿನ್ನೆಲೆ ನಿಶಾಂತ್ ಬೆನ್ನಿಗೆ ಗಂಭೀರ ಗಾಯವಾಗಿದೆ. ಹಾಗಾಗಿ ಹೆಲಿಕಾಪ್ಟರ್ ಮೂಲಕ ಮೇಲಕ್ಕೆತ್ತಿ ಅದರಲ್ಲಿಯೇ ಯಲಹಂಕ ಏರ್ ಬೇಸ್‍ಗೆ ರವಾನೆ ಮಾಡಲಾಗಿದೆ. ಅಲ್ಲಿಂದ ಆಸ್ಟರ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕಳುಹಿಸಲಾಗಿದೆ.


ನಿಶಾಂತ್ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ವೀಕೆಂಡ್ ಎಂದು ಸ್ನೇಹಿತರ ಜೊತೆ ನಂದಿಬೆಟ್ಟಕ್ಕೆ ಬಂದಿದ್ದ. ಬ್ರಹ್ಮಗಿರಿ ಬೆಟ್ಟದಲ್ಲಿ ಟ್ರೆಕ್ಕಿಂಗ್ ಮಾಡಲು ಮುಂದಾಗಿದ್ದು ಈ ವೇಳೆ ನಿಶಾಂತ್ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಆತನೇ ಸಹಾಯಕ್ಕಾಗಿ ಸರ್ಕಾರದ ಕಂಟ್ರೋಲ್ ರೂಂ ಗೆ ಕರೆ ಮಾಡಿದ್ದ. ಇಂದು ಬೆಳಗ್ಗಿನಿಂದ ಸಂಜೆಯ ವರೆಗೂ ಅನ್ನ , ನೀರಿಲ್ಲದೆ ಬಿಸಿಲಿನ ಮಧ್ಯೆ ಪರದಾಡಿದ್ದು ಆಗ್ನಿಶಾಮಕ ದಳ ಮತ್ತು ಎನ್ ಡಿಆರ್ ಎಫ್ ಸಿಬ್ಬಂದಿ ಕಾರ್ಯಾಚರಣೆ ಮಾಡಿದ್ದಾರೆ.

ಅವರಿಗೆ ಯುವಕ ದುರ್ಗಮ ಹಾದಿಯಲ್ಲಿ ಪತ್ತೆಯಾಗಿದ್ದು ವಾಯುಪಡೆ ಹೆಲಿಕಾಪ್ಟರ್ ಮೂಲಕ ಕಾರ್ಯಾಚರಣೆ ನಡೆಸಿದ್ದಾರೆ. ಸಂಜೆ ವೇಳೆಗೆ ಯುವಕನ ರಕ್ಷಣೆ ಮಾಡಲಾಗಿದ್ದು ಬೆಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.
A 19-year-old student, who fell 300 ft from a steep cliff onto a rocky ledge at Nandi Hills was rescued with the help of an Indian Air Force helicopter on Sunday. The rescue operation was conducted jointly by the Chickballapur police and the Indian Air Force. Though he was trapped and unable to move, the young man had the presence of mind to contact the police and his family in Delhi informing them about his predicament.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm