ಬ್ರೇಕಿಂಗ್ ನ್ಯೂಸ್
22-02-22 02:07 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.22 : ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಕೆ.ಎಸ್. ಈಶ್ವರಪ್ಪ. ತನ್ನ ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಈಶ್ವರಪ್ಪ ಈ ಕೊಲೆ ಮಾಡಿಸಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.
ಪರಿಷತ್ ನಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಕೊಲೆ ಪ್ರಕರಣದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಈಶ್ವರಪ್ಪನವರ ಮಾತು ನೋಡಿದರೆ, ಅವರಿಗೆ ಕೊಲೆ ವಿಚಾರ ಮೊದಲೇ ಗೊತ್ತಿತ್ತು. ಕೊಲೆಯನ್ನು ಅವರೇ ಮಾಡಿಸಿದ್ದಾರೆ ಎನಿಸುತ್ತಿದೆ. ತಮ್ಮ ಸ್ಥಾನ ಉಳಿಸಿಕೊಳ್ಳಲು ಈಶ್ವರಪ್ಪ ಕೊಲೆ ಮಾಡಿಸಿದ್ದಾರೆ. ಈ ಬಗ್ಗೆ ಸಿಬಿಐ ತನಿಖೆ ಅಥವಾ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಮಾಡಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು.
ಕೊಲೆ ಆದ ಯುವಕನ ತಾಯಿ, ತನ್ನ ಮಗ ಎರಡು ವರ್ಷಗಳಿಂದ ಬಜರಂಗದಳದಲ್ಲಿ ಇರಲಿಲ್ಲ ಅಂತ ಹೇಳಿದ್ದಾರೆ. ಇತ್ತ ಈಶ್ವರಪ್ಪ ಇದು ಮುಸ್ಲಿಂ ಗೂಂಡಾಗಳಿಂದ ಕೊಲೆ ಆಗಿದೆ ಎನ್ನುತ್ತಾರೆ. ಗೃಹ ಸಚಿವರು ಅದೇ ಜಿಲ್ಲೆಯಲ್ಲಿದ್ದಾಗ ಇವರೇ ತನಿಖೆ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಇಂಥವರೇ ಕೊಲೆ ಮಾಡಿದ್ದಾರೆ ಎಂದು ಹೇಳುತ್ತಾರೆ. ಹೀಗಾಗಿ ಈ ಕೊಲೆಯನ್ನು ಈಶ್ವರಪ್ಪನೇ ಮಾಡಿಸಿದ್ದಾರೆ ಎನ್ನುವ ಅನುಮಾನ ಬರುತ್ತದೆ ಎಂದು ವಾಗ್ದಾಳಿ ನಡೆಸಿದರು.
ಪೊಲೀಸರ ತನಿಖೆ ಮುನ್ನ ಈಶ್ವರಪ್ಪ ಹೇಳಿಕೆ ಕೊಟ್ಟಿದ್ದಾರೆ ಎಂದು ಹರಿಪ್ರಸಾದ್ ನೇರವಾಗಿ ತರಾಟೆಗೆ ತೆಗೆದುಕೊಂಡರು. ಈ ವೇಳೆ ಸದನದಲ್ಲಿ ಮಾತಿನ ಚಕಮಕಿ ನಡೆದಿದ್ದು, ಹರಿಪ್ರಸಾದ್ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ಹೊರಹಾಕಿದರು.
ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಈಶ್ವರಪ್ಪರ ಹೇಳಿಕೆ ಸರಿಯಲ್ಲ. ಇದು ರಾಜಕೀಯ ಉದ್ದೇಶದ ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹೇಳಿಕೆಯಾಗಿದೆ. ಇದು ಅವರ ಮೂಲಭೂತ ಕಲ್ಪನೆ, ಅಪರಾಧಿಗಳು ಯಾರು ಎಂಬುದು ಇನ್ನೂ ತನಿಖೆಯೇ ಆಗಿಲ್ಲ. ಅದಕ್ಕೂ ಮೊದಲೇ ಕೋಮುಗಲಭೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಜನರನ್ನು ದಾರಿ ತಪ್ಪಿಸಲು ಹೇಳಿಕೆ ನೀಡುತ್ತಿದ್ದಾರೆ ಎಂದು ಹರಿಪ್ರಸಾದ್ ಕಿಡಿಕಾರಿದ್ದಾರೆ.
ಈಗಾಗಲೇ ನಾವು ರಾಜೀನಾಮೆ ಕೇಳುತ್ತಿದ್ದೇವೆ, ಅದನ್ನ ಅವರು ಕೊಡಲೇಬೇಕು. ಪೊಲೀಸರ ತನಿಖೆಯಾಗದೆ ಆಪಾದನೆ ಮಾಡುತ್ತಿದ್ದಾರೆ. ಪೊಲೀಸರು ತನಿಖೆ ನಡೆಸುವುದು ಅವರ ಜವಾಬ್ದಾರಿಯಾಗಿದೆ. ಇಂತಹ ಸಂದರ್ಭದಲ್ಲಿ ಇಂಟೆಲಿಜೆನ್ಸ್ ಏನು ಮಾಡುತ್ತಿದೆ. ಡಿ.ಕೆ ಶಿವಕುಮಾರ್ ಮೇಲೆ ಆಪಾದನೆ ಮಾಡಿ ಏನೂ ಸಾಧಿಸಲಾಗದು. ಕ್ರಿಮಿನಲ್ ಹಿನ್ನೆಲೆಯುಳ್ಳವರೇ ಸಚಿವರಾಗಿದ್ದಾರೆ. ಕೋಮು ಬಣ್ಣ ಕಟ್ಟಿ ಯಾರನ್ನೋ ಖಳನಾಯಕ ಮಾಡುವುದು ಈಶ್ವರಪ್ಪ ಅವರಿಗೆ, ಬಿಜೆಪಿ ಅವರಿಗೆ ಹೊಸದಲ್ಲ. ಈ ಹಿಂದೆಯೂ ಶಿವಮೊಗ್ಗದಲ್ಲಿ ಕೊಲೆ ನಡೆದಿತ್ತು, ಆಗಲೂ ಮುಸ್ಲಿಮರ ಮೇಲೆ ಆಪಾದನೆ ಮಾಡಿದ್ರು, ಆ ಬಳಿಕ ಹಿಂದೂಗಳು ತಪ್ಪಿಸ್ಥರು ಅಂತಾ ಗೊತ್ತಾಗಿತ್ತು ಎಂದು ಈಶ್ವರಪ್ಪ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
The Congress’ allegation that RDPR Minister KS Eshwarappa was responsible for the murder of a Bajrang Dal activist in Shivamogga led to pandemonium in the Council and resulted in adjournment of the proceedings to Tuesday. Amidst the din, the State Government tabled two Bills in the Upper House.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 10:21 pm
HK News Desk
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm