ಬ್ರೇಕಿಂಗ್ ನ್ಯೂಸ್
02-03-22 04:55 pm HK Desk news ಕರ್ನಾಟಕ
ಕಲಬುರಗಿ, ಮಾ.2: ಆಳಂದ ಪಟ್ಟಣದಲ್ಲಿ ಶಿವಲಿಂಗ ಪೂಜೆ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಉಂಟಾಗಿದ್ದ ವಿವಾದಕ್ಕೆ ಸಂಬಂಧಿಸಿ ಪೊಲೀಸರು 167 ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ 10 ಮಹಿಳೆಯರು ಸೇರಿದ್ದಾರೆ.
ಆಳಂದದ ಲಾಡ್ಲೆ ಮಶಾಕ್ ದರ್ಗಾ ಪರಿಸದಲ್ಲಿ ಹಳೆಯ ಕಾಲದ ಶಿವಲಿಂಗ ಇದ್ದು ಇತ್ತೀಚಿಗೆ ಲಿಂಗಕ್ಕೆ ಯಾರೋ ಕಿಡಿಗೇಡಿಗಳು ಅವಮಾನಿಸಿದ್ದರು. ಹೀಗಾಗಿ ಶಿವರಾತ್ರಿ ನಿಮಿತ್ತ ಈಶ್ವರಲಿಂಗ ಶುದ್ಧೀಕರಣ ಅಭಿಯಾನವನ್ನು ಶ್ರೀರಾಮ ಸೇನೆ ಹಮ್ಮಿಕೊಂಡಿತ್ತು. ಇದಕ್ಕೆ ಬಿಜೆಪಿ ಮತ್ತು ಹಿಂದುಪರ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದ್ದವು. ಮುಂಜಾಗ್ರತಾ ಕ್ರಮವಾಗಿ ಆಳಂದ ಪಟ್ಟಣದಲ್ಲಿ ಜಲ್ಲಾಡಳಿತ ನಿಷೇಧಾಜ್ಞೆ ವಿಧಿಸಿತ್ತು. ಆದರೂ ಶಿವಲಿಂಗ ಪೂಜೆಗಾಗಿ ಆಳಂದಕ್ಕೆ ಸಾವಿರಾರು ಹಿಂದುಪರ ಕಾರ್ಯಕರ್ತರು ಆಗಮಿಸಿದ್ದರು. ಸ್ಥಳೀಯ ಮುಸ್ಲಿಂ ಸಮಾಜದಿಂದ ವಿರೋಧ ವ್ಯಕ್ತವಾಗಿತ್ತು.


ಪೂಜೆ ಮಾಡಲು ಬಂದಿದ್ದ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರಾದ ಸುಭಾಷ್ ಗುತ್ತೇದಾರ, ರಾಜಕುಮಾರ್ ಪಾಟೀಲ್ ತೆಲ್ಕೂರ ಸೇರಿ ಹಿಂದು ಸಂಘಟನೆಯ ಮಂದಿಯನ್ನು ದರ್ಗಾದೊಳಗೆ ಬಿಡುವುದಿಲ್ಲ ಎಂದು ಮುಸ್ಲಿಂ ಸಮಾಜದವರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಎರಡೂ ಕಡೆ ಗುಂಪು ಸೇರಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಕೊನೆಗೆ ಸಚಿವ ಖೂಬಾ ಸೇರಿ ಹತ್ತು ಜನರನ್ನು ಮಾತ್ರ ಶಿವಲಿಂಗ ಪೂಜೆಗೆ ಒಳಗೆ ಬಿಡಲಾಗಿತ್ತು. ಆದರೆ ಇದನ್ನು ವಿರೋಧಿಸಿ ಕಲ್ಲು ತೂರಾಟ ಮಾಡಲಾಗಿತ್ತು. ಅಲ್ಲದೆ, ದೊಣ್ಣೆ ಹಿಡಿದು ಘರ್ಷಣೆಗೆ ಮುಂದಾಗಿದ್ದು ಪೊಲೀಸರು ಲಾಠಿಚಾರ್ಜ್ ನಡೆಸಿ ಉದ್ರಿಕ್ತರನ್ನು ಚದುರಿಸಿದ್ದರು.


ಘಟನೆ ಹಿನ್ನೆಲೆಯಲ್ಲಿ ಆಳಂದ ಪಟ್ಟಣದಲ್ಲಿ ಬಂದ್ ವಾತಾವರಣವಿದೆ. ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಆಳಂದ ಪಟ್ಟಣ ಸಂಪೂರ್ಣ ಶಾಂತವಿದೆ. ಇಡೀ ಪಟ್ಟಣ ಪೊಲೀಸರ ಸುಪರ್ದಿಯಲ್ಲಿದೆ ಎಂದು ಎಸ್ಪಿ ಇಶಾ ಪಂತ್ ಹೇಳಿದ್ದಾರೆ. ನಿನ್ನೆಯ ಗಲಾಟೆ ಪ್ರಕರಣದಲ್ಲಿ 167 ಜನರನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳನ್ನ ಆದಷ್ಟು ಬೇಗ ಬಂಧಿಸಲಾಗುತ್ತದೆ. ಪೊಲೀಸರ ಸಕಾಲಿಕ ಕ್ರಮದಿಂದ ಹೆಚ್ಚಿನ ಅನಾಹುತಗಳಾಗಿಲ್ಲ. ಕೆಲವರು ಮನೆ ಮೇಲೆ ಕಲ್ಲು, ಬಡಿಗೆಗಳು ಜಮೆ ಮಾಡಿರುವ ಬಗ್ಗೆ ಇಂಟೆಲಿಜೆನ್ಸ್ ಮಾಹಿತಿ ಇತ್ತು. ಮಾಹಿತಿ ಪ್ರಕಾರ ಅವೆಲ್ಲವುಗಳನ್ನ ವಶಕ್ಕೆ ಪಡೆದಿದ್ದೇವೆ. ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಸ್ಪಿ ಇಶಾ ಪಂತ್ ಮಾಹಿತಿ ನೀಡಿದ್ದಾರೆ.
Hindu Muslim shout slogans in Kalburgi after miscreants desecrate shivalinga, 10 woman along with 167 people arrested.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm